ಅಂಬೇಡ್ಕರ್‌ ಆಶಯ ಈಡೇರಿಸಲು ಮುಂದಾಗಿ

ಜಾತಿ ವ್ಯವಸ್ಥೆ ನಿರ್ಮೂಲನೆ ಆಗುವವರೆಗೂ ಸಂವಿಧಾನದಲ್ಲಿ ನೀಡಿರುವ ಮೀಸಲಾತಿ ಮುಂದುವರಿಯಲಿ

Team Udayavani, Sep 14, 2019, 11:59 AM IST

14-Spectember-7

ಆಲಮಟ್ಟಿ: ಮಂಜಪ್ಪ ಹರ್ಡೇಕರ ಸ್ಮಾರಕ ಭವನದಲ್ಲಿ ನಡೆದ ರಾಜ್ಯಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರವನ್ನು ಶಾಸಕ ಶಿವಾನಂದ ಪಾಟೀಲ ಉದ್ಘಾಟಿಸಿದರು.

ಆಲಮಟ್ಟಿ: ದೇಶದಲ್ಲಿ ಜಾತಿ ವ್ಯವಸ್ಥೆ ನಿರ್ಮೂಲನೆ ಆಗುವವರೆಗೂ ಸಂವಿಧಾನದಲ್ಲಿ ನೀಡಿರುವ ಮೀಸಲಾತಿ ಮುಂದುವರಿಸಬೇಕು ಎಂದು ದಲಿತ ಸಂಘರ್ಷಸಮಿತಿ ರಾಜ್ಯ ಸಂಚಾಲಕ ಡಾ| ಡಿ.ಜಿ. ಸಾಗರ ಹೇಳಿದರು.

ಶುಕ್ರವಾರ ಆಲಮಟ್ಟಿಯ ಮಂಜಪ್ಪ ಹರ್ಡೇಕರ ಸ್ಮಾರಕ ಭವನದಲ್ಲಿ ನಡೆದ ರಾಜ್ಯಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಸಮಾನತೆಗಾಗಿ ಹೋರಾಡಿದ ಮಹಾನ್‌ ಚೇತನ ಬಸವಣ್ಣನವರ ಆಶಯದಂತೆ ಅಂಬೇಡ್ಕರ್‌ ಅವರು ಎಲ್ಲ ವರ್ಗದವರಿಗೂ ನ್ಯಾಯ ಒದಗಿಸುವ ಕೆಲಸಮಾಡಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಕೆಲ ಜನಾಂಗಗಳನ್ನು ಶೋಷಣೆ ಮಾಡಲಾಗುತ್ತಿತ್ತು. ಸ್ವಾತಂತ್ರ್ಯ ನಂತರ ಶೋಷಣೆಗೆ ಮುಕ್ತಿ ಹಾಡಲು ದೇಶದಲ್ಲಿ ಸರ್ವರ ಸಮಾನತೆಗಾಗಿ ಶೋಷಣೆ ಗೀಡಾದವರಿಗೆ ಸಮಾಜದ ಮುಂಚೂಣಿಗೆ ತರಲು ಮೀಸಲಾತಿ ನೀಡಲಾಯಿತಾದರೂ ಕೂಡ ಇನ್ನೂವರೆಗೆ ಸಾಮಾಜಿಕವಾಗಿ ಅಭಿವೃದ್ಧಿಯಾಗುತ್ತಿಲ್ಲ ಎಂದರು.

ಕೇಂದ್ರ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರೋಧವಾಗಿ ನಡೆದುಕೊಳ್ಳುತ್ತಿದೆ. ಸಂವಿಧಾನ ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸುವುದಾಗಿದ್ದು, ಆರೆಸ್ಸೆಸ್‌ ಕೂಡ ಮೀಸಲಾತಿ ಚರ್ಚೆಯಾಗಬೇಕೆಂದು ಹೇಳುತ್ತಿದೆ. ಆದರೆ ಶೋಷಿತರಿಗೆ ಮೀಸಲಾತಿ ಅಗತ್ಯ, ಮೇಲ್ವರ್ಗದಲ್ಲಿರುವ ಬಡವರ ಏಳ್ಗೆಗಾಗಿ ಆರ್ಥಿಕವಾಗಿ ಮುಂಚೂಣಿಗೆ ತರಲು ಕೆಲ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿ ಮಾಡಬಹುದಾಗಿತ್ತಾದರೂ ಕೇಂದ್ರ ಸರ್ಕಾರ ಆ ಕಾರ್ಯ ಮಾಡದೇ ಮೀಸಲಾತಿ ಜಾರಿಗೆ ತಂದಿತು. ಇದರಿಂದ ಮೀಸಲಾತಿ ಪಡೆಯುತ್ತಿರುವ ಶೋಷಿತರಿಗೆ ಹಿನ್ನಡೆಯಾಗಬಹುದು ಎಂದು ಅಭಿಪ್ರಾಯಪಟ್ಟರು.

ನಾವು ಸಮಾಜ ಒಡೆಯುವ ಕೆಲಸ ಮಾಡುತ್ತಿಲ್ಲ, ಬದಲಾಗಿ ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇವೆ. ದೇಶದಲ್ಲಿ ಜಾತಿಗಳು ನಿರ್ಮೂಲನೆಯಾಗಿ ಸಮಾಜದಲ್ಲಿರುವ ಬೌದ್ಧಿಕ ದಾರಿದ್ರ್ಯ, ಅನಕ್ಷರತೆ, ಬಡತನ ಹೋಗಲಾಡಿಸಿ ಸಮ ಸಮಾಜ ನಿರ್ಮಾಣದತ್ತ ಹೆಜ್ಜೆಯಿಡಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಶಿವಾನಂದ ಪಾಟೀಲ, ದೇಶದಲ್ಲಿ ಸಂವಿಧಾನ ಜಾರಿಗೆ ಬರದೇ ಇದ್ದರೆ ನಮ್ಮ ದೇಶದಲ್ಲಿ ಜಾತಿ ಹೆಸರಿನಲ್ಲಿ ಎಷ್ಟು ಭಾಗವಾಗಿ ವಿಂಗಡಣೆಯಾಗುತ್ತಿತ್ತು ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ ಎಂದರು.

ದೇಶದಲ್ಲಿ ಸಂವಿಧಾನದ ಮೇಲೆ ಆಡಳಿತ ನಡೆಯುತ್ತಿದ್ದರೂ ಕೂಡ ರಾಜ್ಯಗಳ ಗಡಿ ರೇಖೆ, ನದಿ ನೀರು ಹೀಗೆ ಮಾನವನಿಗೆ ಅಗತ್ಯವಿರುವ ಮಾನವೀಯ ನೆಲೆಗಟ್ಟಿನಲ್ಲಿ ಸಹಕಾರ ನೀಡಬಹುದಾಗಿದ್ದರೂ ಕೂಡ ಅದನ್ನು ಹೊರತು ಪಡಿಸಿ ವ್ಯಾಜ್ಯಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದರು.

ಡಾ| ಅಂಬೇಡ್ಕರ್‌ ವಿಚಾರಗಳನ್ನು ನಮ್ಮ ದೇಶದಲ್ಲಿ ಅಷ್ಟೇ ಅಲ್ಲದೇ ಜಗತ್ತಿಗೆ ದಾರಿ ತೋರಿದ ಚೇತನ. ಅವರನ್ನು ವಿಶ್ವ ಇರುವವರೆಗೆ ಇಡಿ ಪ್ರಪಂಚವೇ ಆರಾಧಿಸುತ್ತದೆ. ದೇಶದ ಪ್ರತಿಯೊಬ್ಬ ಮಹಿಳೆ ಸುಶಿಕ್ಷಿತಳಾಗಬೇಕು. ಇನ್ನು ಇತ್ತೀಚಿನ ದಿನಗಳಲ್ಲಿ ವಾಕ್‌ ಸ್ವಾತಂತ್ರ್ಯ ಹೆಸರಿನಲ್ಲಿ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಧೀಜಿಯವರಂಥವರಿಗೂ ನಿಂದನೆ ಮಾಡಲಾಗುತ್ತಿದೆ. ಇದು ಆಗಬಾರದು ಎಂದರು.

ಬಸವನಬಾಗೇವಾಡಿ ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ಮಾತನಾಡಿ, ಸಮಾಜದ ಕಟ್ಟಕಡೆ ಮನುಷ್ಯನಿಗೂ ಸಂವಿಧಾನ ಬದ್ಧವಾಗಿರುವ ಎಲ್ಲ ಸೌಕರ್ಯ ಹಾಗೂ ಹಕ್ಕುಗಳು ದೊರೆತು ಸಮಾಜದ ಮುಖ್ಯವಾಹಿನಿಗೆ ಬಂದು ಸಂವಿಧಾನದ ಆಶಯ ಈಡೇರಿದಂತಾಗಲು ದೇಶದಲ್ಲಿ ಹರ್ಡೇಕರ ಮಂಜಪ್ಪನವರು, ಡಾ| ಬಿ.ಆರ್‌. ಅಂಬೇಡ್ಕರ್‌ ಹಾಗೂ ಬಸವಣ್ಣನವರ ಆದರ್ಶಗಳನ್ನು ದೇಶದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಬಿ. ಶ್ರೀನಿವಾಸ, ಹಿಂದೂ ಧರ್ಮದಲ್ಲಿ ಜಾತೀಯತೆ ಹೆಚ್ಚು, ಶೋಷಿತ ಜನಾಂಗದ ಏಳ್ಗೆಗಾಗಿ ಬುದ್ಧ, ಬಸವಣ್ಣನವರು ಸಮ ಸಮಾಜ ನಿರ್ಮಾಣಕ್ಕೆ ಕಂಕಣ ಬದ್ಧರಾಗಿ ಕಾರ್ಯ ನಿರ್ವಹಿಸಿದ ಮಹಾನ್‌ ಚೇತನಗಳು. ಆದರೆ 1919 ಸೆ. 29ರಂದು ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರವರು ಶೋಷಿತರನ್ನು ಮೇಲ್ಪಂಕ್ತಿಗೆ ತರಲು ಶೇ. 50 ಮೀಸಲಾತಿ ಕಲ್ಪಿಸಿದ್ದರು. ಇದನ್ನು ವಿರೋಧಿಸಿದ್ದ ಆಗಿನ ದಿವಾನರಾಗಿದ್ದ ಸರ್‌ ಎಂ.ವಿಶ್ವೇಶ್ವರಯ್ಯನವರನ್ನು ಹುದ್ದೆಯಿಂದ ತೆ‌ಗೆದು ಹಾಕಿದ್ದರು ಎಂದರು.

ಸ್ವಾತಂತ್ರ್ಯ ನಂತರ ಡಾ| ಅಂಬೇಡ್ಕರ್‌ ಅವರು ಶೋಷಿತರಿಗೆ ನ್ಯಾಯ ಒದಗಿಸುವುದರ ಜೊತೆಗೆ ಸರ್ವರೂ ಸಮಾನರಾಗಲು ಆಶಯ ಹೊಂದಿದ್ದರು. ಆದರೆ ವಾಸ್ತವವಾಗಿ ಇನ್ನೂ ಬೇರು ಮಟ್ಟದಿಂದ ಅಸ್ಪೃಶ್ಯತೆ ಹೋಗಿಲ್ಲ, ದಲಿತ ಚಳುವಳಿ ಯಾವುದೇ ಧರ್ಮ, ಜಾತಿಗಳ ವಿರುದ್ಧವಲ್ಲ ಶೋಷಣೆಯ ವಿರುದ್ಧವಾಗಿದೆ ಎಂದು ಹೇಳಿದರು.

ಈ ವೇಳೆ ರಾಷ್ಟ್ರಕೂಟ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತ ಡಾ| ಸುಜಾತಾ ಚಲವಾದಿ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ರಾಜ್ಯ ಸಂಚಾಲಕ ಡಾ| ಡಿ.ಜಿ. ಸಾಗರ, ಜಿಪಂ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ, ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ, ವಿ.ಎಂ. ಪಟ್ಟಣಶೆಟ್ಟಿ, ರಮೇಶ ಆಸಂಗಿ, ರಾಹುಲ್ ಕುಬಕಡ್ಡಿ, ಪರಶುರಾಮ ಕಾಂಬಳೆ, ಅಶೋಕ ಚಲವಾದಿ ಮೊದಲಾದವರಿದ್ದರು. ವಿನಾಯಕ ಗುಣಸಾಗರ ಸ್ವಾಗತಿಸಿದರು. ವೈ.ಸಿ. ಮಯೂರ ನಿರೂಪಿಸಿದರು. ಅಶೋಕ ಚಲವಾದಿ ವಂದಿಸಿದರು.

ಟಾಪ್ ನ್ಯೂಸ್

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.