ಕಿಷ್ಕಿಂಧೆಯಂಥ ಬಸ್‌ ನಿಲ್ದಾಣದಲ್ಲೇ ಗ್ರಂಥಾಲಯ!

ಮೂಲಭೂತ ಸೌಕರ್ಯ ವಂಚಿತ ಆಲ್ದೂರಿನ ದೊಡ್ಡಮಾಗರವಳ್ಳಿ ಗ್ರಂಥಾಲಯಕ್ಕೆಬೇಕಿದೆ ಕಾಯಕಲ್ಪ

Team Udayavani, Oct 25, 2019, 1:12 PM IST

25-October–12

ಆಲ್ದೂರು: ಪಟ್ಟಣ ಸಮೀಪದ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಂಥಾಲಯಕ್ಕೆ ಸುಸಜ್ಜಿತವಾದ ಕಟ್ಟಡ ಇಲ್ಲದೇ ಇಲ್ಲಿನ ಬಸ್‌ ನಿಲ್ದಾಣವೇ ಗ್ರಾಮಸ್ಥರ ಪಾಲಿಗೆ ವಾಚನಾಲಯವಾಗಿದೆ.

ಬಸ್‌ ನಿಲ್ದಾಣದಲ್ಲಿಯೇ ಇರುವ ಕಿಷ್ಕಿಂದೆಯಂತಹ ಪುಟ್ಟ ಕೊಠಡಿಯಲ್ಲಿ ಗ್ರಂಥಾಲಯ ನಡೆಸಲಾಗುತ್ತಿದೆ. ಮೇಲ್ಚಾವಣಿ ಶೀಟುಗಳು ಒಡೆದು ಹೋಗಿ, ಮಳೆ ಬಂದಾಗ ಸೋರುತ್ತಿದೆ. ಸುಣ್ಣ-
ಬಣ್ಣ ಕಂಡು ಹಲವು ವರ್ಷಗಳೇ ಕಳೆದಿವೆ. ಕೊಠಡಿ ಬಾಗಿಲು ಹಾಳಾಗಿವೆ. ಈ ಗ್ರಂಥಾಲಯವನ್ನು ಪ್ರಾರಂಭಿಸಿ 13 ವರ್ಷ ಕಳೆದಿದ್ದು, ಇಲ್ಲಿಯವರೆಗೂ ಅದು ಕಾಯಕಲ್ಪವನ್ನೇ ಕಂಡಿಲ್ಲ. ಗ್ರಂಥಾಲಯದಲ್ಲಿ ಚಿಕ್ಕದೊಂದು ಮುರುಕಲು ಬೀರು ಬಿಟ್ಟರೆ ಬೇರೆ ಯಾವುದೇ ರ್ಯಾಕ್‌ಗಳಿಲ್ಲದ ಕಾರಣ ಉತ್ತಮ ಪುಸ್ತಕಗಳನ್ನು ಟೇಬಲ್‌ ಮೇಲೆಯೇ ಜೋಡಿಸಿಡಲಾಗಿದೆ.

ಗ್ರಂಥಾಲಯದ ಮೇಲ್ವಿಚಾರಿಕಿ ಒಂದು ಟೇಬಲ್‌ ಹಾಕಿಕೊಂಡು ಕುಳಿತುಕೊಂಡರೆ ಉಳಿದ ಸ್ವಲ್ಪ ಜಾಗದಲ್ಲೇ 1 ಚೇರು ಹಾಕಿ ಬಂದವರು ಕೂರಲು ಜಾಗ ಮಾಡಲಾಗಿದೆ. 2-3 ಜನ ಒಟ್ಟಿಗೆ ಬಂದರೆ ಒಬ್ಬರ ನಂತರ ಒಬ್ಬರು ಪಡಿತರ ಅಂಗಡಿ ಮುಂದೆ ಸಾಲಿನಲ್ಲಿ ನಿಲ್ಲುವಂತೆ ಪುಸ್ತಕ ಓದಲು ಹೊರಗೆ ಕಾಯುತ್ತ ನಿಲ್ಲಬೇಕು. ಇಲ್ಲವೇ ಬಸ್‌ ನಿಲ್ದಾಣದ ಕಟ್ಟೆಯನ್ನು ಆಶ್ರಯಿಸಬೇಕು. ಪುಸ್ತಕ ಓದಲು ಬರುವ ಜನರು ಒಲ್ಲದ ಮನಸ್ಸಿನಿಂದಲೇ ಪುಸ್ತಕಗಳನ್ನು ಓದುವಂತಹ ಸ್ಥಿತಿ ಇದೆ.

ಗ್ರಂಥಪಾಲಕರಿಗೆ ಕನಿಷ್ಟ ವೇತನವನ್ನು ನೀಡಬೇಕೆಂದು ಸರ್ಕಾರ ಆದೇಶ ಜಾರಿ ಮಾಡಿದ್ದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಈಗ ನೀಡುತ್ತಿರುವ ಗೌರವಧನದಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು ಎಂದು ದೊಡ್ಡಮಾಗರವಳ್ಳಿ ಗ್ರಂಥಾಲಯದ ಗ್ರಂಥಪಾಲಕಿ ತಮ್ಮ ಸಮಸ್ಯೆಯನ್ನು ತೆರೆದಿಟ್ಟರು.

ಪ್ರಸ್ತುತ ದಿನಗಳಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಂಡಿರುವವರು ಬಹಳ ವಿರಳ. ಯುವ ಪೀಳಿಗೆಯಂತೂ ಕಂಪ್ಯೂಟರ್‌, ಮೊಬೈಲ್‌, ಇಂಟರ್‌ನೆಟ್‌ ಗಳಲ್ಲಿ ಮುಳುಗಿಹೋಗಿದ್ದು, ಸದಭಿರುಚಿಯ ಪುಸ್ತಕಗಳನ್ನು ಓದುವಷ್ಟು ತಾಳ್ಮೆ ಅವರಲ್ಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಇರುವ ಗ್ರಂಥಾಲಯಗಳು ನಿರ್ವಹಣೆ ಇಲ್ಲದೆ ಹಾಳಾಗುತ್ತಿದ್ದು, ಸಣ್ಣಪುಟ್ಟ ಕೊಠಡಿಗಳಲ್ಲಿ ಗ್ರಂಥಾಲಯಗಳನ್ನು ನಡೆಸುವ ಅನಿವಾರ್ಯತೆ ಇದೆ ಎಂಬುದು ದೊಡ್ಡಮಾಗರವಳ್ಳಿ ಗ್ರಾಮದ ಸಾಹಿತಿ ಡಿ.ಬಿ.ಈಶ್ವರ್‌ ಅವರ ಅಭಿಮತವಾಗಿದೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.