ಸಾಹಿತ್ಯದಿಂದ ಸಂಸ್ಕಾರ: ಡಾ| ನಾ.ಡಿಸೋಜ

Team Udayavani, Dec 29, 2019, 3:37 PM IST

29-December-21

ಆನಂದಪುರ: ಸಾಹಿತ್ಯವು ಮೃಗತ್ವದಿಂದ ಮನುಷ್ಯತ್ವಕ್ಕೆ ಕೊಂಡೊಯ್ಯುತ್ತದೆ. ಅಲ್ಲದೆ ಸಾಹಿತ್ಯವು ಸಂಸ್ಕಾರವನ್ನು ನೀಡುತ್ತದೆ ಎಂದು ಖ್ಯಾತ ಸಾಹಿತಿ ಡಾ| ನಾ. ಡಿಸೋಜ ಹೇಳಿದರು.

ಇಲ್ಲಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಆನಂದಪುರ ಹೋಬಳಿ ಘಟಕ, ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಸಮಿತಿ, ಪತ್ರಿಕಾ ಬಳಗ ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಸಾಗರ ತಾಲೂಕು ಮಟ್ಟದ 7ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನ ಜೀವನವನ್ನು ಸಾಕ್ಷಾತ್ಕಾರಗೊಳಿಸುವುದೇ ಸಾಹಿತ್ಯ. ಅಂತಹ ಸಾಹಿತ್ಯದ ಅಭಿರುಚಿಯನ್ನು ಮಕ್ಕಳಿಂದಲೇ ಕಲಿಸಬೇಕಾದ ಅಗತ್ಯ ಶಾಲೆಗಳಲ್ಲಿ ಹಾಗೂ ಪೋಷಕರಲ್ಲಿ ಇದೆ. ಪ್ರತಿಭೆ ಎನ್ನವುದು ಯಾರ ಸ್ವತ್ತೂ ಅಲ್ಲ. ಮಕ್ಕಳ ಮನೋಭಿರುಚಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಉತ್ತಮ ಶಿಕ್ಷಣವನ್ನು ನೀಡಬೇಕಾಗಿದೆ. ಸಾಹಿತ್ಯಕ್ಕೆ ಯಾವುದೇ ಇತಿಮಿತಿ ಇರುವುದಿಲ್ಲ. ಸಾಹಿತ್ಯದ ಸದಭಿರುಚಿಯನ್ನು ಬೆಳಸುವ ಕಾರ್ಯ ಆಗಬೇಕಿದೆ. ಸಾಹಿತ್ಯವು ವಿವಿಧ ಪ್ರಕಾರಗಳನ್ನು ಹೊಂದಿದ್ದು ಅಂತಹ ಸಾಹಿತ್ಯವನ್ನು ಅಧ್ಯಯನ ಮಾಡಬೇಕಾಗಿದೆ. ಸಾಹಿತ್ಯವನ್ನು ಸರಿಯಾಗಿ ಅರ್ಥ ಮಾಡಿಕೊಂಡಲ್ಲಿ ಮಾತ್ರ ಬದುಕಿನಲ್ಲಿ ಅರ್ಥವಂತಿಕೆ ಇರುತ್ತದೆ. ಸಂಗೀತ ಕಿವಿಗೆ ಹಿತ, ತಣ್ಣನೆಯ ಗಾಳಿ ದೇಹಕ್ಕೆ ಹಿತ. ಸಾಹಿತ್ಯ ಮನಸ್ಸಿಗೆ ಹಿತವನ್ನು ತರುತ್ತದೆ ಎಂದರಲ್ಲದೆ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಸಾಹಿತ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕಾಗಿದೆ. ಮಕ್ಕಳಲ್ಲಿ ಸಾಕಷ್ಟು ಅಭಿರುಚಿಗಳಿದ್ದು ಅವರ ಮನಸ್ಸನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಂಡು ಶಿಕ್ಷಣವನ್ನು ನೀಡಿ ಸುಸಂಸ್ಕೃತ ಪ್ರಜೆಯನ್ನಾಗಿ ನಿರ್ಮಿಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇದೆ. ಹಾಗಾಗಿ ಇಂತಹ
ಮಕ್ಕಳ ಸಾಹಿತ್ಯ ಸಮ್ಮೇಳನಗಳು ಮಕ್ಕಳಲ್ಲಿ ಸಾಹಿತ್ಯದ ಸದಭಿರುಚಿಯನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಆಶಯ ನುಡಿಗಳನ್ನಾಡಿ, ಮಕ್ಕಳ ಕಲಿಕೆಯಲ್ಲಿ ಸಾಂಸ್ಕೃತಿಕ ಪರಿಸರವನ್ನು ಬೆಳೆಸಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುತ್ತಿವೆ. ಆದರೆ ಸುಸಜ್ಜಿತವಾದ ಬಂಧೀಖಾನೆಗಳು ಹೆಚ್ಚಾಗುತ್ತಿರುವುದು ವಿಷಾದನಿಯ. ದೀನ ದಲಿತರ ಹಾಗೂ ದುರ್ಬಲರ ಹೆಸರನ್ನು ಹೇಳಿಕೊಂಡು ರಾಜಕೀಯ ವ್ಯಕ್ತಿಗಳು ತಮ್ಮ ಸಾಮ್ರಾಜ್ಯ ವಿಸ್ತರಣೆಗೆ ಗಮನ ಹರಿಸುತ್ತಿದ್ದಾರೆಯೇ ವಿನ: ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡುತ್ತಿಲ್ಲ. ಆದ್ದರಿಂದ ಮಕ್ಕಳು ತಮ್ಮ ಜವಾಬ್ದಾರಿ ಅರಿತು ಕವಿಗಳಾಗುವ ಮೂಲಕ ಸಮಾಜಕ್ಕೆ ಬೆಳಕಾಗಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಶಾಲೆಗಳು ಹಾಗೂ ಪೋಷಕರು ವಿಶೇಷವಾದ ಗಮನ ಹರಿಸುವುದರ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದರು.

ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ವೈ.ಎಚ್‌. ಸ್ಫೂರ್ತಿ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಸಮುದಾಯಗಳು ತನ್ನದೇ ಆದ ಜವಾಬ್ದಾರಿ ತೆಗೆದುಕೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಮನೆಯಲ್ಲಿ ಉತ್ತಮ ಸಾಹಿತ್ಯ ಹಾಗೂ ಸಂಸ್ಕಾರಗಳ ಜೊತೆಯಲ್ಲಿ ಉತ್ತಮವಾದ ಪರಿಸರ ಇದ್ದಲ್ಲಿ ಮಕ್ಕಳು ಉತ್ತಮ ಸಾಹಿತಿಗಳಾಗಲು ಸಾಧ್ಯವಾಗುತ್ತದೆ. ದೇಶದಲ್ಲಿ ಜಾತಿಯಾಧಾರಿತ ಮೀಸಲಾತಿ ಹೋಗಲಾಡಿಸಿ ಪ್ರತಿಭೆ ಆಧಾರಿತ ಮೀಸಲಾತಿಯನ್ನು ಜಾರಿಗೆ ತಂದಲ್ಲಿ ಪ್ರತಿಭೆಗಳಿಗೆ ಉತ್ತಮ ಅವಕಾಶ ಸಿಗುವುದರೊಂದಿಗೆ ಜಗತ್ತಿನಲ್ಲಿ ದೇಶ ಮುಂಚೂಣಿಗೆ ಬರಲು ಸಾಧ್ಯವಾಗುತ್ತದೆ. ಇಂದಿನ ಮಕ್ಕಳಲ್ಲಿ ಇರುವಂತಹ ಪ್ರತಿಭೆಗೆ ತಕ್ಕಂತೆ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಬೇಕಾಗಿದೆ. ಅದರಲ್ಲೂ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತಿಭೆ ಆಧಾರಿತ ಶಾಲೆಗಳನ್ನು ಆರಂಭಿಸಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಚಿಂತನೆಗಳು ಬದಲಾಗುತ್ತಿದ್ದು ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಮೇಲೆ ಒತ್ತಡ ಹಾಕದೆ ಅವರ ಅಭಿರುಚಿಗಳನ್ನು ಅರ್ಥ ಮಾಡಿಕೊಂಡು ಶಿಕ್ಷಣ ನೀಡುವ ಕಾರ್ಯ ಆಗಬೇಕಿದೆ. ಕನ್ನಡವನ್ನು ಕೇವಲ ನವೆಂಬರ್‌ ತಿಂಗಳಿಗೆ ಮಾತ್ರ ಮೀಸಲಾಗಿಡದೆ ವರ್ಷವಿಡೀ ಆಚರಣೆ ಮೂಲಕ ಕನ್ನಡವನ್ನು ಕಟ್ಟುವ ಮೂಲಕ ಮಕ್ಕಳಲ್ಲಿರುವ ಸಾಹಿತ್ಯ ಅಭಿರುಚಿಗಳನ್ನು ಹೊರಮೂಡಿಸುವ ಕಾರ್ಯ ಆಗಬೇಕಿದೆ. ಇಂದಿನ ಶಿಕ್ಷಣ ವ್ಯವಸ್ಥೆಯು ಬರೀ ಅಂಕ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಅದರಿಂದ ಹೊರ ಬರುವಂತಹ ಕಲಿಕಾ ಪದ್ಧತಿಯನ್ನು ರೂಪಿಸಬೇಕು. ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅಂತಹ ಭವಿಷ್ಯವನ್ನು ರೂಪಿಸುವಲ್ಲಿ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳ ಪ್ರತಿಭೆಗಳನ್ನು ನಿರ್ಲಕ್ಷಿಸದೆ ಅವರ ಮನೋಭಿವೃದ್ಧಿಗೆ ಸರ್ಕಾರ ಹಾಗೂ ಸಮುದಾಯಗಳು ಮುಂದಾಗಬೇಕಿದೆ. ವೈಜ್ಞಾನಿಕ ಶಿಕ್ಷಣದ ಮೂಲಕ ವೈಚಾರಿಕ ಚಿಂತನೆಗಳನ್ನು ಮೂಡಿಸಬೇಕು. ದೇಶದಲ್ಲಿ ಅತ್ಯಾಚಾರ ಹಾಗೂ ಅನಾಚಾರಗಳು ನಡೆಯುತ್ತಿರುವುದು ವಿದ್ಯಾವಂತ ಸಮಾಜ ತಲೆತಗ್ಗಿಸುವಂತಾಗಿದೆ. ಈ ಬಗ್ಗೆ ಸರ್ಕಾರ ಉಗ್ರ ಕಾನೂನುಗಳನ್ನು ಜಾರಿಗೆ ತರಬೇಕು ಹಾಗೂ ನಿರ್ದಾಕ್ಷಿಣ್ಯ ಶಿಕ್ಷೆ ನೀಡುವ ಮೂಲಕ ಮಹಿಳೆಯರ ರಕ್ಷಣೆಗೆ ಮುಂದಾಗಬೇಕು ಎಂದರು.

ಮಕ್ಕಳ ಸಮ್ಮೇಳನ ನಿಕಟಪೂರ್ವ ಅಧ್ಯಕ್ಷೆ ಆಶಯ ಕಬಸೆ, ಕರ್ನಾಟಕ ಪಬ್ಲಿಕ್‌ ಸ್ಕೂಲಿನ ಪ್ರಭಾರಿ ಪ್ರಾಚಾರ್ಯೆ ಪ್ರೇಮಲತಾ, ಉಪ ಪ್ರಾಂಶುಪಾಲೆ ಪುಷ್ಪಾ ಕೆ.ಆರ್‌., ಉಪ ತಹಶೀಲ್ದಾರ್‌ ಕಲ್ಲಪ್ಪ ಮೆಣಸಿಹಾಳ್‌, ಕ.ಜಾ.ಪ ತಾಲೂಕು ಅಧ್ಯಕ್ಷ ವಿ.ಟಿ. ಸ್ವಾಮಿ, ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲ್ಲೂಕು ಅಧ್ಯಕ್ಷ ಪರಮೇಶ್ವರ ಕರೂರು, ನಿವೃತ್ತ ನೌಕರರ ತಾಲೂಕು ಅಧ್ಯಕ್ಷ ಉಮೇಶ್‌ ಹಿರೇನೆಲ್ಲೂರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪ್ಪ ಜೋಗಿ, ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಆನಂದಪುರ ಘಟಕ ಅಧ್ಯಕ್ಷ ಬಿ.ಡಿ. ರವಿಕುಮಾರ್‌, ಗ್ರಾಪಂ ಸದಸ್ಯೆ ಸುನಂದಮ್ಮ, ಪತ್ರಕರ್ತ ಜಗನ್ನಾಥ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.