ಭಾರತೀಯ ಕೃಷಿ ಪದ್ಧತಿ ವಿಶ್ವಕ್ಕೆ ಮಾದರಿ: ಚೆಟ್ರಿ
Team Udayavani, Nov 18, 2019, 5:06 PM IST
ಆನಂದಪುರ: ಭಾರತದ ಕೃಷಿ ಪದ್ಧತಿ ಅತ್ಯಂತ ಉತ್ಕೃಷ್ಟವಾಗಿದ್ದು, ಜಗತ್ತು ಭಾರತೀಯ ಕೃಷಿ ಪದ್ಧತಿಯನ್ನು ನೋಡಿ ಕಲಿತುಕೊಳ್ಳಬೇಕಾದದ್ದು ಸಾಕಷ್ಟಿದೆ ಎಂದು ಅಮೆರಿಕಾದ ಮೌಂಟೇನ್ ರೋಸ್ ಹರ್ಬ್ಸ್ ನ ಮುಖ್ಯಸ್ಥೆ ಜೆನ್ನಿಫರ್ ಚೆಟ್ರಿ ಹೇಳಿದರು.
ಸಮೀಪದ ಹೊಸಗುಂದದಲ್ಲಿ ಭಾನುವಾರ ಹೊಸಗುಂದ ಉತ್ಸವದ ಅಂಗವಾಗಿ ಏರ್ಪಡಿಸಿದ್ದ “ಕೃಷಿ ಮತ್ತು ಬದುಕು’ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಸಾವಯವ ಕೃಷಿ ಪದ್ಧತಿಗೆ ವಿಶ್ವದಾದ್ಯಂತ ಮಾನ್ಯತೆ ಸಿಗುತ್ತಿದೆ. ಬೇರೆ ಬೇರೆ ಕೃಷಿ ಪದ್ಧತಿಗಳಿದ್ದಾಗ್ಯೂ ಅವೆಲ್ಲವೂ ಕೃಷಿಕರಲ್ಲಿ ಹೊಸ ಉತ್ಸಾಹವನ್ನು ತುಂಬುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಕೃಷಿಯೊಂದಿಗೆ ನಮ್ಮ ರೈತರು ಸಹಬಾಳ್ವೆ ನಡೆಸುವಂತೆ ಆಗಬೇಕು. ಇಂತಹ ವಿಚಾರ ಸಂಕಿರಣದ ಮೂಲಕ ಕೃಷಿಯಲ್ಲಿ ಉನ್ನತಿ ಸಾಧಿಸುವ ಬಗ್ಗೆ ಅರಿತುಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.
ಮೌಂಟೇನ್ ರೋಸ್ ಹರ್ಬ್ಸ್ ಸಂಸ್ಥೆ ಕಳೆದ 30 ವರ್ಷಗಳಿಂದ ಭಾರತದ ಆರ್ಯುವೇದಿಕ್ ಮಾರುಕಟ್ಟೆ ಮತ್ತು ಸಾವಿರಾರು ರೈತರ ಜೊತೆ ನೇರ ಸಂಪರ್ಕವನ್ನು ಹೊಂದಿದೆ. ಇಲ್ಲಿನ ಅನೇಕ ಔಷಧೀಯ ವಸ್ತುಗಳನ್ನು ನಮ್ಮ ಸಂಸ್ಥೆ ಖರೀದಿಸುವ ಜೊತೆಗೆ ರೈತರ ಸಮಸ್ಯೆಗಳಿಗೆ ಕಾಲಕಾಲಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಪ್ರಸ್ತುತ ಅನೇಕ ಸವಾಲುಗಳನ್ನು ಸಹ ಎದುರಿಸುವಂತೆ ಆಗಿತ್ತು. ಆದರೆ ಗೆಲುವಿಗಿಂತ ಸೋಲಿನಲ್ಲಿಯೇ ಹೆಚ್ಚು ಪಾಠ ಕಲಿಯಬೇಕು ಎನ್ನುವುದು ನಮ್ಮ ಸಂಸ್ಥೆಯ ಉದ್ದೇಶ. ಈ ನಿಟ್ಟಿನಲ್ಲಿ ಭಾರತೀಯ ಕೃಷಿಗೆ ಯಾವತ್ತೂ ಸೋಲು ಇಲ್ಲ ಎಂದು ಹೇಳಿದರು.
ಕೃಷಿ ಉಳಿಸಿಕೊಳ್ಳುವ ತುರ್ತು ಅಗತ್ಯ: ಕಾರ್ಯಕ್ರಮದ ಕುರಿತು ದಿಕ್ಸೂಚಿ ಭಾಷಣ ಮಾಡಿದ ಸಾವಯವ ಕೃಷಿ ಮಿಷನ್ ಅಧ್ಯಕ್ಷ ಅ.ಶ್ರೀ. ಆನಂದ್, ನಮ್ಮಲ್ಲಿ ಕೃಷಿ ಕ್ರಮ ಬೇರೆ ಬೇರೆ ಇದ್ದರೂ, ಎಲ್ಲವೂ ಕೃಷಿ ಅಭಿವೃದ್ಧಿಗೆ ಬಳಕೆ ಆಗುತ್ತದೆ. ನಮ್ಮ ಹಳ್ಳಿ, ಕೃಷಿ, ಗೋವುಗಳನ್ನು ಉಳಿಸಿಕೊಳ್ಳುವ ತುರ್ತು ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚು ಇದೆ. ಪ್ರಸ್ತುತ ನಮ್ಮ ಮಕ್ಕಳು, ಗೋವು ನಮ್ಮ ಜೊತೆಯಲ್ಲಿ ಇಲ್ಲ. ಆಸ್ತಿ ಇದೆ, ಆದರೆ ಅದನ್ನು ಅಭಿವೃದ್ಧಿಪಡಿಸುವ ಆಸಕ್ತಿ ನಮ್ಮಲ್ಲಿ ಉಳಿದಿಲ್ಲ. ನಾವು ಪಾಕ್ ಆಕ್ರಮಿತ ಕಾಶ್ಮೀರವನ್ನು ಉಳಿಸಿಕೊಳ್ಳುವುದು, ಜಮ್ಮು- ಕಾಶ್ಮೀರವನ್ನು ನಮ್ಮದಾಗಿಸಿಕೊಳ್ಳುವುದು ಎಷ್ಟು ಮುಖ್ಯವೋ ನಮ್ಮ ನೆಲ- ಮೂಲ ಸಂಸ್ಕೃತಿಗಳಲ್ಲಿ ಒಂದಾಗಿರುವ ಕೃಷಿಯನ್ನು ಉಳಿಸಿಕೊಳ್ಳುವುದು ಸಹ ಎಲ್ಲದ್ದಕ್ಕಿಂತ ಮುಖ್ಯವಾಗಿದೆ ಎಂದು ಹೇಳಿದರು.
ನಮ್ಮಲ್ಲಿ ಶೂನ್ಯ ಬಂಡವಾಳ ಕೃಷಿ, ಜೀವಚೈತನ್ಯ ಕೃಷಿ, ಸಾವಯವ ಕೃಷಿ, ನೈಸರ್ಗಿಕ ಕೃಷಿ ಸೇರಿದಂತೆ ಅನೇಕ ವಿಧಾನಗಳಿವೆ. ಒಂದು ಕೃಷಿ ಪದ್ಧತಿಯವರನ್ನು ಕಂಡರೆ ಮತ್ತೂಂದು ಕೃಷಿ ಪದ್ಧತಿಯವರಿಗೆ ಆಗುವುದಿಲ್ಲ. ಇಂತಹ ಗೊಂದಲಗಳ ನಿವಾರಣೆಗೆ ನಾವು ಹೆಚ್ಚು ಗಮನ ಹರಿಸಬೇಕಾಗಿದೆ. ಎಲ್ಲ ಕೃಷಿ ಪದ್ಧತಿಗಳ ಉದ್ದೇಶವೂ ಪ್ರಕೃತಿ ಒಪ್ಪುವ ಉತ್ಪನ್ನಗಳನ್ನು ಗ್ರಾಹಕನ ಬಳಿಗೆ ಒಯ್ಯಬೇಕು ಎನ್ನುವುದೇ ಆಗಿರುತ್ತದೆ. ನಾವು ಗ್ರಾಹಕರಿಗೆ ಉತ್ಪನ್ನದ ರೂಪದಲ್ಲಿ ಅನ್ನದ ಅಗಳನ್ನು ಪೂರೈಕೆ ಮಾಡುತ್ತಿದ್ದೇವೆ ಎನ್ನುವ ವಿಶಾಲ ಮನೋಭಾವ ಬೆಳೆಯುವವರಲ್ಲಿ ಇರಬೇಕು ಎಂದರು.
ಇಂದಿನ ದಿನಮಾನಗಳಲ್ಲಿ ಕೃಷಿಕ ತೀರಾ ಹತಾಶನಾಗಿದ್ದಾನೆ. ಆತನಲ್ಲಿ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎನ್ನುವ ಉತ್ಸಾಹ ಉಳಿದಿಲ್ಲ. ನಮ್ಮ ವ್ಯವಸ್ಥೆ ಸಹ ರೈತರಲ್ಲಿ ಆತ್ಮಚೈತನ್ಯ ತುಂಬುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿಲ್ಲ. ರೈತರಲ್ಲಿ ಉತ್ಸಾಹ ಕಡಿಮೆ ಆಗುತ್ತಿರುವ ಬಗ್ಗೆ ಆತ್ಮಾವಲೋಕನದ ಅಗತ್ಯವಿದೆ. ನಮ್ಮ ಮಗ, ಮಗಳು, ಸೊಸೆ ಕೃಷಿಯಲ್ಲಿಯೇ ಬದುಕಿನ ಸಂತೃಪ್ತಿ ಕಟ್ಟಿಕೊಳ್ಳುವ ಮನೋಭೂಮಿಕೆ ವೃದ್ಧಿಸುವ ಅಗತ್ಯವಿದೆ. ಇಂತಹ ಕಾರ್ಯಾಗಾರಗಳು ಕೃಷಿಯ ಮೇಲೆ ಬೆಳಕು ಚೆಲ್ಲಿ ರೈತರ ಮೊಗದಲ್ಲಿ ಕುಂದಿರುವ ಉತ್ಸಾಹದ ಚಿಲುಮೆಯನ್ನು ಮತ್ತೆ ಚಿಮ್ಮಿಸುವಂತೆ ಆಗಬೇಕು ಎಂದು ತಿಳಿಸಿದರು.
“ಜೀವ ಚೈತನ್ಯ ಕೃಷಿ’ ವಿಷಯ ಕುರಿತು ಬೆಂಗಳೂರಿನ ಬಯೋ ಡೈನಾಮಿಕ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷ ಡಾ| ಸಂದೀಪ್ ಕಾಮತ್, “ಎಲ್ಲರ ಒಳಿತಿಗಾಗಿ ಸಾವಯವ ಕೃಷಿ’ ವಿಷಯ ಕುರಿತು ಬೆಂಗಳೂರು ಗ್ರೀನ್‌ಪಾತ್ ಆರ್ಗ್ಯಾನಿಕ್‌ನ ಎಚ್. ಆರ್. ಜಯರಾಮ್, ಶೂನ್ಯ ಬಂಡವಾಳ ಕೃಷಿ ಕುರಿತು ಪ್ರಗತಿಪರ ಕೃಷಿಕ ಸಿ.ಜಿ.ಹರ್ಷವರ್ಧನ್ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಅಮೆರಿಕಾದ ಮೌಂಟೇನ್ ರೋಸ್ ಹರ್ಬ್ಸ್ ಸಂಸ್ಥೆ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಪದವಿ ಶಿಕ್ಷಣ ಪಡೆಯಲು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಹೊಸಗುಂದದ ಗಣಪತಿ ಶೆಟ್ಟಿ ಅವರ ಪುತ್ರಿ ಹರ್ಷಿತಾ ಅವರಿಗೆ ರೂ. 35 ಸಾವಿರ ರೂ. ಆರ್ಥಿಕ ಸಹಕಾರ ನೀಡಲಾಯಿತು.
ನವದೆಹಲಿ ಭಾರತೀಪೀಠದ ಶ್ರೀ ಸರ್ವಾನಂದ ಸರಸ್ವತಿ ಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯೆ ಜ್ಯೋತಿ ಕೋವಿ, ಸುಧೀಂದ್ರ ದೇಶಪಾಂಡೆ, ಜೇಕಬ್ ಇನ್ನಿತರರು ಇದ್ದರು. ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಮುಖ್ಯಸ್ಥ ಸಿ.ಎಂ.ಎನ್. ಶಾಸ್ತ್ರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಧ್ವರಾಜ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.