ದೀಪೋತವಕ್ಕೆ ಜಾನಪದ ಮೆರಗು
ಆನಂದಪುರ ಮುರುಘಾಮಠದಲ್ಲಿ ಶರಣ ಸಾಹಿತ್ಯ ಸಮ್ಮೇಳನ
Team Udayavani, Nov 27, 2019, 1:09 PM IST
ಆನಂದಪುರ: ಗುರುಗಳ ಆಶೀರ್ವಾದ ಮತ್ತು ಮಾರ್ಗದರ್ಶನ ಇದ್ದಾಗ ಸಕಲವೂ ಸಿದ್ಧಿಯಾಗಲಿದೆ ಎಂದು ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ ನುಡಿದರು. ಸಮೀಪದ ಮುರುಘಾಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ನಡೆದ ಸುಗ್ಗಿ ಸಂಭ್ರಮ- ಜಾನಪದಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಲ್ಲಿನ ಶ್ರೀಗಳಾದ ಡಾ| ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಧರ್ಮ, ಶಿಕ್ಷಣ, ಸಮಾಜಸೇವೆ, ಕ್ರೀಡೆ, ದಾಸೋಹ, ಕಲೆ-ಸಂಸ್ಕೃತಿ ಹೀಗೆ ಎಲ್ಲ ವಿಭಾಗಗಳಿಗೂ ಅತ್ಯಂತ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಮುರುಘಾಮಠದ ಡಾ| ಮಲ್ಲಿಜಾರ್ಜುನ ಮುರುಘರಾಜೇಂದ್ರಮಹಾ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಗುತ್ತಲ ಕಲ್ಮಠದ ಶ್ರೀ ಪ್ರಭು ಮಹಾಸ್ವಾಮಿಗಳು, ಹೊಸನಗರದ ಮೂಲೆಗದ್ದೆ ಮಠದ ಶ್ರೀ ಚೆನ್ನಬಸವ ಮಹಾಸ್ವಾಮಿಗಳು, ರಾಮದುರ್ಗದ ವಿರಕ್ತ ಮಠದ ಶ್ರೀ ಶಾಂತವೀರ ಮಹಾಸ್ವಾಮಿಗಳು, ತಾಪಂ ಸದಸ್ಯೆ ಆನಂದಿ ಲಿಂಗರಾಜ್, ಆಚಾಪುರ ಗ್ರಾಪಂ ಅಧ್ಯಕ್ಷ ಬಸವರಾಜ್, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಬೂದ್ಯಪ್ಪ ಹೊಸಕೊಪ್ಪ, ಮಾಜಿ ಅಧ್ಯಕ್ಷ ಬಿ. ಟಾಕಪ್ಪ, ದೀಪೋತ್ಸವ ಸಮಿತಿ ಅಧ್ಯಕ್ಷ ಬೆಳಕೋಡು ಹಾಲಸ್ವಾಮಿಗೌಡ, ಉಪಾಧ್ಯಕ್ಷ ಕುಮಾರಗೌಡ, ಕೋಶಾಧ್ಯಕ್ಷ ಶಾಂತಕುಮಾರ ಗೌಡ, ಸಹ ಕಾರ್ಯದರ್ಶಿ ಸುರೇಶ ಗೌಡ ಕೆಂಜಗಾಪುರ ಇನ್ನಿತರರು ಇದ್ದರು.
ಜಾನಪದ ಸಂಭ್ರಮದ ನಿಮಿತ್ತ ಶಿವಮೊಗ್ಗದ ಶ್ವೇತ ಮತ್ತುತಂಡದಿಂದ ಜಕ್ಕಣಕ್ಕ ಜಕ್ಕಣಕ್ಕ, ಜಲ್ಲೆ ಕಬ್ಬುವಲ್ಲಿ ವಸ್ತ್ರ ನೃತ್ಯಗಳು ಪ್ರೇಕ್ಷಕರನ್ನು ಸೆಳೆದವು. ಸಾಗರದ ಸುರೇಖ ಮತ್ತುತಂಡದಿಂದ ಲಂಬಾಣಿ ನೃತ್ಯ, ಡೊಳ್ಳು ಕುಣಿತ, ಭದ್ರಾ ವತಿಯ ಮರಿಯಮ್ಮ ಮತ್ತು ಸಂಗಡಿಗರಿಂದ ಕೋಲಾಟ, ಲಂಬಾಣಿ ನೃತ್ಯ, ಗೌತಮಪುರದ ವಿಶ್ವಕರ್ಮಚಂಡೆ ಬಳಗದ ಕಲಾವಿದರಿಂದ ಚಂಡೆಕುಣಿತ, ಮುರುಘಾಮಠದ ಎಸ್.ಜೆ.ಜಿ. ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಂದ ಜಾನಪದ ನೃತ್ಯ ಪ್ರದರ್ಶನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.