ಬರದಲ್ಲೂ ಕೈ ಹಿಡಿದ ಮೆಣಸಿನಕಾಯಿ ಬೆಳೆ

ಮಳೆಗಾಂವ ತಾಂಡಾದ ರೈತ ರಾಮರಾವ್‌ ಕಂಡ ಯಶಸ್ಸು •ಎರಡು ಎಕರೆ ಭೂಮಿಯಲ್ಲಿ ಲಕ್ಷ ಲಕ್ಷ ಗಳಿಕೆ

Team Udayavani, Aug 2, 2019, 10:07 AM IST

2-Agust-3

ಔರಾದ: ಮಳೆಗಾಂವ ತಾಂಡಾದ ನಿವಾಸಿ ರಾಮರಾವ್‌ ರೂಪಲಾ ಜಾಧವ ಅವರ ಹೊಲದಲ್ಲಿ ಬೆಳೆದ ಮೆಣಸಿನ ಕಾಯಿ ಸಂಗ್ರಹಿಸುತ್ತಿರುವುದು

ಔರಾದ: ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಉತ್ತಮ ಮಳೆಯಾಗದಿದ್ದರೂ ಕಮಲನಗರ ತಾಲೂಕಿನ ಚಿಮ್ಮೆಗಾಂವ ಗ್ರಾಪಂ ವ್ಯಾಪ್ತಿಯ ಮಳೆಗಾಂವ ತಾಂಡಾದ ರೈತ ರಾಮರಾವ್‌ ರೂಪಲಾ ಜಾಧವ ಕಡಿಮೆ ನೀರು ಬಳಸಿ ಉತ್ತಮ ಬೆಳೆ ಬೆಳೆದು ಸಾವಿರಾರು ರೂಪಾಯಿ ಸಂಪಾದನೆ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾರೆ.

ಎರಡು ವರ್ಷಗಳಿಂದ ತಾಲೂಕಿನಲ್ಲಿ ವಾಡಿಕೆ ಮಳೆಯಾಗಿಲ್ಲ. ಆದರೂ ರೈತ ರಾಮರಾವ್‌ ರೂಪಲಾ ಜಾಧವ ತಮ್ಮ ಎರಡು ಎಕರೆ ಭೂಮಿಯಲ್ಲಿ ಹನಿ ನೀರಾವರಿ ಮೂಲಕ ಮಾದರಿ ಕೃಷಿ ಕಾಯಕ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಬರ ಆವರಿಸಿ ಕುಡಿಯುವ ನೀರಿಗಾಗಿ ಜನರು ಸಮಸ್ಯೆ ಎದುರಿಸುವ ಸ್ಥಿತಿ ಬಂದಿತ್ತು. ಇದೀಗ ಮಳೆಗಾಲ ಆರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ತಾಲೂಕಿನ ಅರವತ್ತು ಗ್ರಾಮಗಳಲ್ಲಿ ನಿತ್ಯ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇಂಥ ಕಠಿಣ ಪರಿಸ್ಥಿತಿಯಲ್ಲಿ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಹಕಾರ ಪಡೆದು ಹನಿ ನೀರಾವರಿ ಮೂಲಕ ತಮ್ಮ ಹೊಲದಲ್ಲಿ ಉತ್ತಮ ಬೆಳೆ ಬೆಳೆದಿದ್ದಾರೆ.

ಹನಿ ನೀರಾವರಿ ಮೂಲಕ ಹೊಲದಲ್ಲಿನ ಕೊಳವೆ ಬಾವಿಯ ನೀರುಣಿಸಿ ನಾಲ್ಕು ವರ್ಷಗಳಿಂದ ದಾಖಲೆ ಪ್ರಮಾಣದಲ್ಲಿ ಆದಾಯ ಸಂಪಾದನೆ ಮಾಡುತ್ತಿದ್ದಾರೆ. ಮೆಣಸಿನಕಾಯಿ ಮೂರು ತಿಂಗಳ ಬೆಳೆಯಾಗಿದ್ದು ಮೂರು ತಿಂಗಳಿಗೆ ಪ್ರತಿ ಎಕರೆಗೆ 3ರಿಂದ 4 ಲಕ್ಷ ರೂ. ಸಂಪಾದನೆ ಮಾಡುತ್ತಾ ಬಂದಿದ್ದಾರೆ. ಹಿಗಾಗಿ ನಾಲ್ಕು ವರ್ಷಗಳಿಂದ ಮೆಣಸಿನಕಾಯಿ ಬೆಳೆದು ಆರ್ಥಿಕ ಸಮಸ್ಯೆಗೆ ಶಾಶ್ವತ ಮುಕ್ತಿ ಕಂಡುಕೊಂಡಿದ್ದಾರೆ.

ನೆರೆ ರಾಜ್ಯದಲ್ಲಿ ಮಾರಾಟ: ರೈತ ರಾಮರಾವ್‌ ರೂಪಲಾ ಸೇರಿದಂತೆ ಇನ್ನಿತರ ರೈತರು ಕೂಡ ಗಡಿ ತಾಲೂಕಿನಲ್ಲಿ ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲವೆಂದು ನೆರೆಯ ಮಹಾರಾಷ್ಟ್ರದ ಉದಗೀರ, ದೇಗಲೂರ ಹಾಗೂ ತೆಲಂಗಾಣಾದ ಜಹಿರಾಬಾದ ತರಕಾರಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.

ಔರಾದ ಪಟ್ಟಣದ ತರಕಾರಿ ಮಾರುಕಟ್ಟೆಯಲ್ಲಿ ರೈತರು ತಾವು ಬೆಳೆದ ತರಕಾರಿ ಮಾರಾಟ ಮಾಡಿದರೂ ವ್ಯಾಪಾರಿಗಳು ವಾರದ ನಂತರವೇ ರೈತರಿಗೆ ಹಣ ನೀಡುತ್ತಾರೆ. ಹಾಗಾಗಿ ರೈತರು ನೆರೆ ರಾಜ್ಯದ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ತಕ್ಷಣ ಹಣ ಪಡೆಯುತ್ತಾರೆ. ಹೀಗೆ ನಗದು ರೂಪದ ವ್ಯವಹಾರಕ್ಕೆ ಬೆರೆ ರಾಜ್ಯಗಳ ಮಾರುಕಟ್ಟೆಗೆ ತೆರಳಿ ವ್ಯಾಪಾರ ಮಾಡುತ್ತಿದ್ದಾರೆ.

ತಾಲೂಕಿನಲ್ಲಿ ಮಳೆ-ಬೆಳೆ ಇಲ್ಲದಿರುವುದರಿಂದ ಆದಾಯವಿಲ್ಲದೇ ಕಂಗಾಲಾದ ರೈತರು ಒಂದೆಡೆ ಇದ್ದರೆ, ಕಡಿಮೆ ನೀರಿನಲ್ಲೇ ಉತ್ತಮ ಬೆಳೆ ಬೆಳೆದು ಕೈ ತುಂಬ ಹಣ ಸಂಪಾದನೆ ಮಾಡುವವರೂ ಇದ್ದಾರೆ ಎಂಬುದಕ್ಕೆ ಈ ರೈತ ನಿದರ್ಶನ. ಎರಡು ಎಕರೆ ಭೂಮಿಯಲ್ಲೇ ವಾರಕ್ಕೆ 20 ಕ್ವಿಂಟಲ್ ಮೆಣಸಿನಕಾಯಿ ಇಳುವರಿ ಬರುತ್ತಿದೆ ಎನ್ನುತ್ತಾರೆ ರೈತ ರಾಮರಾವ್‌ ರೂಪಲಾ. ನಾಲ್ಕು ವರ್ಷಗಳಿಂದ ನಿರಂತರವಾಗಿ ಮೆಣಸಿನಕಾಯಿ ಬೆಳೆದು ನಿರೀಕ್ಷೆಗೆ ಮೀರಿ ಸಂಪಾದನೆ ಮಾಡುತ್ತಿದ್ದಾರೆ. ಅಲ್ಲದೇ ಅಕ್ಕ ಪಕ್ಕದ ಹೊಲದ ರೈತರಿಗೂ ಕೂಡ ಮೆಣಸಿನಕಾಯಿ ಬೆಳೆಯುವಂತೆ ಪ್ರೇರಣೆ ನೀಡಿ, ಸಕಾಲಕ್ಕೆ ರಸಗೊಬ್ಬರ ಹಾಗೂ ಔಷಧ ಸಿಂಪರಣೆ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.