ಬರ; 9.54 ಕೋಟಿ ಅನುದಾನ ಬಳಕೆ
ಪ್ರಾಮಾಣಿಕವಾಗಿ ಕೆಲಸ ಮಾಡಿ •ಬಹುಹಳ್ಳಿ ನೀರು ಪೂರೈಕೆ ಯೋಜನೆ ಸಮರ್ಪಕವಾಗಿ ನಿರ್ವಹಿಸಿ
Team Udayavani, Jul 11, 2019, 12:56 PM IST
ಬಾಗಲಕೋಟೆ: ನಗರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ ಮಾತನಾಡಿದರು.
ಬಾಗಲಕೋಟೆ: ಜಿಲ್ಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಉದ್ಯೋಗ, ಕೃಷಿ, ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬರ, ಕುಡಿಯುವ ನೀರು, ಕೃಷಿ, ನಗರಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಬೇಸಿಗೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿಲ್ಲದೇ ಸಮಸ್ಯೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಅಧಿಕಾರಿಗಳು ಕುಡಿಯುವ ನೀರು ಸರಬರಾಜಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಲು ಹಾಗೂ ಈ ನಿಟ್ಟಿನಲ್ಲಿ ರೈತ ಸಂಘದವರ ಜೊತೆ ಚರ್ಚಿಸುವಂತೆ ತಿಳಿಸಿದರು.
ತಾಲೂಕಾ ಟಾಸ್ಕ್ಪೋರ್ಸ್ ಟಿಟಿ ಎಫ್ 1,2, ಸಿ ಆರ್ ಎಫ್ ಹಾಗೂ 14ನೇ ಹಣಕಾಸು ಸೇರಿದಂತೆ ಜೊತೆಯಲ್ಲಿ ಒಟ್ಟು 9.54 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದ್ದು ಒಟ್ಟು 362 ಕಾಮಗಾರಿ ಕೈಗೊಳಲಾಗಿದೆ. ಉಳಿದ ಬಾಕಿ ಅನುದಾನದಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಅಡಿ ಸಮಸ್ಯಾತ್ಮಕ ಗ್ರಾಮಗಳಲ್ಲಿ ಕೈಗೊಳ್ಳಬೇಕು. 362 ಕಾಮಗಾರಿಗಳನ್ನು ಗುಣಮಟ್ಟ ಹಾಗೂ ಸ್ಥಿತಿಗತಿಯನ್ನು ಉಪವಿಭಾಗಾಧಿಕಾರಿಗಳು ಪರಿಶೀಲಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಸದ್ಯ ಕೃಷಿ ಚಟುವಟಿಕೆ ತೀವ್ರಗೊಂಡಿದ್ದು ಮತ್ತು ತೃಪ್ತಿದಾಯಕ ಮಳೆಯಾಗಿದ್ದರಿಂದ ಜಾನುವಾರು ಗಳಿಗೆ ಸದ್ಯ ಮೇವಿನ ಅಭಾವ ಇಲ್ಲವೆಂದು ಜಿಲ್ಲಾಧಿಕಾರಿ ಆರ್ .ರಾಮಚಂದ್ರನ್ ತಿಳಿಸಿದರು.
ಪಶುಸಂಗೋಪನಾ ಇಲಾಖೆಯಲ್ಲಿ ಪ್ರತಿ ಬಾರಿಯು ಹೊರಜಿಲ್ಲೆಗಳಿಂದ ಮೇವು ತರಿಸಿಕೊಳ್ಳಲಾಗುತ್ತಿತ್ತು. ಇನ್ನು ಮುಂದೆ ಈ ಭಾಗದ ರೈತರಲ್ಲೂ ಸಹ ಮೇವು ಖರೀದಿಸುವ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ನೆರೆಯ ಜಿಲ್ಲೆಗಳಾದ ರಾಯಚೂರಿನ ಸಿಂಧನೂರು, ಲಿಂಗಸುಗೂರು, ವಿಜಯಪುರ ಜಿಲ್ಲೆಗಳಿಂದ ಮೇವು ತರಲಾಗುತ್ತಿತ್ತು. ಇಲ್ಲಿಯೂ ಸಹ ರೈತರು ಮೇವು ಬೆಳೆಯುತ್ತಿದ್ದು, ಈ ಭಾಗದ ರೈತರು ಸಹ ಸರಬರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳಬಹುದಾಗಿದೆ ಎಂದು ಹೇಳಿದರು.
ಪ್ರಸಕ್ತ ಸಾಲಿನ ಸೆಪೆrಂಬರ್ ತಿಂಗಳದಲ್ಲಿ ಮೇವು ಸಮೀಕ್ಷೆ ಕೈಗೊಳ್ಳುವಂತೆ ಕಾರ್ಯದರ್ಶಿಗಳು ಸೂಚಿಸಿ ದರು. ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು ಕೃಷಿ ಅಧಿಕಾರಿಗಳಿಗೆ ಹೊಬಳಿವಾರು ಮೇವು ಸಮೀಕ್ಷೆಯಲ್ಲಿ ಪಾಲ್ಗೋಳುವಂತೆ ತಿಳಿಸಿದ ಅವರು, ಸಾವಿರಾರು ರೈತರಿಗೆ ಮೇವಿನ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಆಸಕ್ತ ರೈತರಿಂದ ಮೇವು ಖರೀದಿಸಿ ಎಂದರು.
ದನಕರುಗಳಿಗಾಗಿ ನಿರ್ಮಿಸಿದ ನೀರಿನ ತೊಟ್ಟಿಗಳ ಸ್ಥಿತಿಗತಿಯನ್ನು ಆಯಾ ಅಧಿಕಾರಿಗಳು ಪರಿಶೀಲಿಸಿ ರಿಪೇರಿ ಇದ್ದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಸರಿಪಡಿಸುವಂತೆ ಕಾರ್ಯದರ್ಶಿಗಳು ತಿಳಿಸಿದರು.
ಗ್ರಾಮೀಣ ಹಾಗೂ ನಗರ ಕುಡಿಯುವ ನೀರು ಸರಬರಾಜಿಗೆ ಸಾಕಷ್ಟು ಅನುದಾನ ಲಭ್ಯವಿದ್ದು ಬಹು ಹಳ್ಳಿ ಯೋಜನೆ ಯಶಸ್ವಿಗೊಳಿಸಬೇಕು. ನದಿ ಪಾತ್ರದಲ್ಲಿರುವ ಯೋಜನೆಗಳಲ್ಲಿ ಸಮಸ್ಯೆಯಾಗದಂತೆ ಮಳೆಗಾಲದಲ್ಲಿಯೇ ನೀರು ಸಂಗ್ರಹ ಹಾಗೂ ಪಂಪ ಸ್ಥಿತಿಗತಿ ಪರಿಶೀಲಿಸಬೇಕು ಎಂದರು.
ಬಹುಹಳ್ಳಿ ನೀರಿನ ಯೊಜನೆಯನ್ನು ಸರಿಯಾಗಿ ನಿರ್ವಹಿಸಬೇಕು. ಜಿಲ್ಲೆಯಲ್ಲಿ 36 ಬಹುಹಳ್ಳಿ ಯೋಜನೆ ಪೈಕಿ ನಾಗರಾಳ, ಹಾಗೂ ಮೆಟಗುಡ್ಡ ಯೊಜನೆಗಳು ವಿಫಲವಾಗಿವೆ. ಎರಡು ಯೋಜನೆಗಳು ಪ್ರಗತಿಯಲ್ಲಿದ್ದು. 32 ಯೋಜನೆಗಳು ಚಾಲ್ತಿಯಲ್ಲಿದೆ. ವಿಫಲ ಹಾಗೂ ಅಪೂರ್ಣ ಯೋಜನೆ, ಜಲ ಮಟ್ಟದ ಜಾಕ್‌ವೆಲ್ ಹಾಗೂ ಸರಬರಾಜು ಪ್ಲಾನ್‌ಗಳನ್ನು ಸರಿಯಾಗಿ ನಿರ್ವಹಿಸುವಂತೆ ಸೂಚಿಸಿದರು.
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ಒಟ್ಟು 79.50 ಕೋಟಿ ರೂ. ಪ್ರಸ್ತಾವನೆ ಸರಕಾರಕ್ಕೆ ಕಳುಹಿಸಲಾಗಿದೆ. ಈ ಪೈಕಿ 30 ಕೋಟಿ ಬಹುಹಳ್ಳಿ ಯೋಜನೆ ಹಾಗೂ 9.90 ಕೋಟಿಯನ್ನು ಸಮಸ್ಯಾತ್ಮಕ ಗ್ರಾಮಗಳಲ್ಲಿ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ್ ತಿಳಿಸಿದರು.
ಕುಡಿಯುವ ನೀರಿನ 15 ನಗರ ಸ್ಥಳಿಯ ಸಂಸ್ಥೆಗಳಲ್ಲಿ 5.13 ಕೋಟಿ ರೂ. ವೆಚ್ಚದಲ್ಲಿ 162 ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಅಧಿಕಾರಿ ಸಭೆಗೆ ತಿಳಿಸಿದರು.
ನರೇಗಾ ಯೋಜನೆಯಡಿಯಲ್ಲಿ ಬಾಗಲಕೋಟೆ 5ನೇ ಸ್ಥಾನದಲ್ಲಿದ್ದು ಉದ್ಯೋಗ ಖಾತ್ರಿಯಡಿ ಸುಸ್ಥಿರ ಕಾಮಗಾರಿ ಕೈಗೊಂಡು ಚೆಕ್ ಡ್ಯಾಂ ಬಂಡ್ ಹಾಗೂ ನೀರು ಸಂಗ್ರಹಣಾ ಕಾಮಗಾರಿಗಳ ಸ್ಥಿತಿಗತಿಯನ್ನು ಅಧಿಕಾರಿಗಳು ಆಗಾಗ ಪರಿಶೀಲಿಸುವಂತೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.