ಕಮಲ ಪಡೆಯಲ್ಲಿ ಗರಿಗೆದರಿದ ರಾಜಕೀಯ!

ಸಚಿವ ಸ್ಥಾನ ರೇಸ್‌ನಲ್ಲಿ ಕಾರಜೋಳ-ಚರಂತಿಮಠ-ನಿರಾಣಿ•ನಿಗಮ ಮಂಡಳಿಯಲ್ಲಿ ಸ್ಥಾನ ನಿರೀಕ್ಷೆ

Team Udayavani, Jul 25, 2019, 12:14 PM IST

Udayavani Kannada Newspaper

ಶ್ರೀಶೈಲ ಕೆ. ಬಿರಾದಾರ
ಬಾಗಲಕೋಟೆ:
ರಾಜ್ಯದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಬೆನ್ನಲ್ಲೆ ಮುಳುಗಡೆ ಜಿಲ್ಲೆಯ ಬಿಜೆಪಿ ಪಕ್ಷದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.

ಹೌದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ತಮ್ಮ ನಾಯಕರಿಗೆ ಸಚಿವ ಸ್ಥಾನ ಸಿಗಲಿದೆ. ನಮಗೆ ನಿಗಮ ಮಂಡಳಿ ಇಲ್ಲವೇ ಪ್ರಮುಖ ಹುದ್ದೆಗಳ ನಿರ್ದೇಶಿತ ಸದಸ್ಯಗಳು ದೊರೆಯಲಿವೆ ಎಂಬ ಆಶಾಭಾವನೆ ಹಲವು ಪ್ರಮುಖ ಕಾರ್ಯಕರ್ತರು ಹೊಂದಿದ್ದು, ಇದೀಗ ಪಕ್ಷದ ಹಿರಿಯರು, ಆಕಾಂಕ್ಷಿ ಪೈಪೋಟಿ ಎದುರಿಸುವ ಅನಿವಾರ್ಯತೆ ಬಿಜೆಪಿಗರ ಸರತಿಯಾಗಿದೆ.

ಸಚಿವ ಸ್ಥಾನದ ನಿರೀಕ್ಷೆ: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಪರ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಕಂಡಿದ್ದ ಬಾಗಲಕೋಟೆ ಜಿಲ್ಲೆ, ಈ ಬಾರಿ ಸ್ವ ಜಿಲ್ಲೆಯ ಸಚಿವರನ್ನೇ ಉಸ್ತುವಾರಿಯನ್ನಾಗಿ ಕಾಣಲಿದೆ ಎಂಬ ಬಲವಾದ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಮುಧೋಳದ ಬಿಜೆಪಿಯ ಹಿರಿಯ ಶಾಸಕ ಗೋವಿಂದ ಕಾರಜೋಳ, ಬಾಗಲಕೋಟೆ ಶಾಸಕ ಡಾ|ವೀರಣ್ಣ ಚರಂತಿಮಠ ಹಾಗೂ ಬೀಳಗಿಯ ಶಾಸಕ ಮುರುಗೇಶ ನಿರಾಣಿ ಅವರ ಹೆಸರು ಸಚಿವ ಸ್ಥಾನಕ್ಕೆ ಪ್ರಭಲವಾಗಿ ಕೇಳಿ ಬರುತ್ತಿವೆ.

ಕಾರಜೋಳರು ದಲಿತ ಕೋಟಾದಡಿ ಮೊದಲ ಅವಧಿಯಲ್ಲೇ ಸಚಿವರಾಗುವ ಸಾಧ್ಯತೆ ಹೆಚ್ಚಿದ್ದು, ಅವರೊಂದಿಗೆ ಶಿಕ್ಷಣ ಸಂಸ್ಥೆಯೊಂದನ್ನು ಬೃಹದಾಕಾರವಾಗಿ ಬೆಳೆಸಿದ ಡಾ|ವೀರಣ್ಣ ಚರಂತಿಮಠರು ಸಚಿವರಾಗುವ ಸಾಧ್ಯತೆ ಹೆಚ್ಚಿದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.

ಜತೆಗೆ ಯಡಿಯೂರಪ್ಪ ಅವರೊಂದಿಗೆ ಆಪ್ತರಾಗಿರುವ, ಒಂದು ಬಾರಿ ಕೈಗಾರಿಕೆ ಸಚಿವರಾಗಿ ಗಮನ ಸೆಳೆಯುವ ಕಾರ್ಯ ಮಾಡಿದ ನಿರಾಣಿ ಅವರಿಗೂ ಸಚಿವ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆ ಇದೆ. ಆದರೆ, ಬಾಗಲಕೋಟೆ ಜಿಲ್ಲೆಗೆ, ಮೊದಲ ಹಂತದಲ್ಲಿ ಒಂದು ಸಚಿವ ಸ್ಥಾನ ಮಾತ್ರ ದೊರೆಯುತ್ತದೆ ಎಂದು ಉನ್ನತ ಮೂಲಗಳು ಹೇಳುತ್ತಿವೆ. ಆ ಒಂದು ಸ್ಥಾನಕ್ಕೆ ಮೊದಲಿಗೆ ಯಾರು ಅದೃಷ್ಟವಂತರಾಗುತ್ತಾರೆ ಎಂಬ ಕುತೂಹಲವೂ ಮೂಡಿಸಿದೆ.

ಚರಂತಿಮಠ ಬೆಂಬಲಗರಿಂದ ಬೇಡಿಕೆ: 2004 ಮತ್ತು 2008ರಲ್ಲಿ ಶಾಸಕರಾಗಿ, ಮುಳುಗಡೆಯಿಂದ ನಲುಗಿದ್ದ ಬಾಗಲಕೋಟೆಯ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಿದ, ಕ್ರಿಯಾಶೀಲ ಶಾಸಕರೆಂದೇ ಕರೆಸಿಕೊಳ್ಳುವ ಡಾ|ಚರಂತಿಮಠರಿಗೆ ಬರಲಿರುವ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಬೇಕು ಎಂಬ ಬಲವಾದ ಬೇಡಿಕೆ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವರು, ಪಕ್ಷದ ಹಿರಿಯ ನಾಯಕರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ನಗರ ಘಟಕದ ಮೂಲಗಳು ತಿಳಿಸಿವೆ.

ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಐದು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಕೋಟಾದಡಿ ಕಾರಜೋಳರು ಸ್ಥಾನ ಪಡೆದರೂ ಉಳಿದ ನಾಲ್ಕು ಕ್ಷೇತ್ರಗಳ ಶಾಸಕರಿಗೂ ಸರ್ಕಾರದಲ್ಲಿ ಜವಾಬ್ದಾರಿ ದೊರೆಯಲಿವೆ ಎಂಬ ವಿಶ್ವಾಸ ಬಿಜೆಪಿ ಪ್ರಮುಖರು ವ್ಯಕ್ತಪಡಿಸುತ್ತಿದ್ದಾರೆ.

ಸಿದ್ದು ಹಣಿಯಲು ಕೊಡಲೇಬೇಕು: ಮಾಜಿ ಸಿಎಂ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸದ್ಯ ಬಾದಾಮಿ ಶಾಸಕರಾಗಿದ್ದು, ಅವರ ಪ್ರಭಾವವನ್ನು ಜಿಲ್ಲೆಯಲ್ಲಿ ಕಡಿಮೆ ಮಾಡಲು ಜಿಲ್ಲೆಯಲ್ಲಿ ಎರಡರಿಂದ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಒಂದೆಡೆ ಕೇಳಿ ಬರುತ್ತಿದೆ. ಆದರೆ, ಸದ್ಯಕ್ಕೆ ಅಂತಹ ಪರಿಸ್ಥಿತಿ ಬಿಜೆಪಿಯಲ್ಲಿಲ್ಲ ಎಂಬ ಮಾತಿದೆ.

ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ಅತೃಪ್ತರಾಗಿರುವವರು ಬಿಜೆಪಿಗೆ ಬರಲಿದ್ದು, ಅವರನ್ನು ಸಮಾಧಾನಪಡಿಸಿದ ಬಳಿಕವೇ ಬಿಜೆಪಿಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ನಿರ್ಧಾರವಾಗಲಿದೆ ಎನ್ನಲಾಗಿದೆ. ಹೀಗಾಗಿ ಸದ್ಯಕ್ಕೆ ಜಿಲ್ಲೆಯಲ್ಲಿ ಕಾರಜೋಳರು ಹೊರತುಪಡಿಸಿದರೆ, ಉಳಿದವರಿಗೆ ಸಚಿವ ಸ್ಥಾನ ಸಿಗುವುದು ಅಷ್ಟು ಸುಲಭದ ಮಾತಲ್ಲ.

ಒಟ್ಟಾರೆ, ಕಳೆದ 14 ತಿಂಗಳಿಂದ ಮಂಕಾಗಿದ್ದ ಬಿಜೆಪಿ ಕಾರ್ಯಕರ್ತರಲ್ಲಿ ಸದ್ಯ ಹುರುಪು ಹುಮ್ಮಸ್ಸು ಕಾಣುತ್ತಿದೆ. ಜಿಲ್ಲೆಯಲ್ಲಿ ಅತಿಹೆಚ್ಚು ಶಾಸಕರಿದ್ದರೂ ತಮ್ಮ ಕೆಲಸ ಕಾರ್ಯಗಳಾಗುತ್ತಿಲ್ಲ ಎಂಬ ಕೊರಗು ಎದುರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ, ಪ್ರಸ್ತುತ ರಾಜಕೀಯ ಬೆಳವಣಿಗೆ ಮುಖ ಅರಳುವಂತೆ ಮಾಡಿದೆ.

3ನೇ ಬಾರಿ ಶಾಸಕರಾಗಿರುವ ಡಾ|ವೀರಣ್ಣ ಚರಂತಿಮಠರು ಸ್ವಚ್ಛ ಹಾಗೂ ಕ್ರಿಯಾಶೀಲ, ಉತ್ತಮ ಆಡಳಿತಗಾರರೆಂದು ಹೆಸರು ಪಡೆದಿದ್ದಾರೆ. ಇಂದಿನ ಸೂಕ್ಷ್ಮ ರಾಜಕೀಯ ಪರಿಸ್ಥಿತಿಯಲ್ಲಿ ಇಂತಹ ನಾಯಕರಿಗೆ ಸಚಿವ ಸ್ಥಾನ ಕೊಟ್ಟರೆ, ಪಕ್ಷಕ್ಕೂ ಅನುಕೂಲ ಹಾಗೂ ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ. ಜಿಲ್ಲಾ ಕೇಂದ್ರ ಸ್ಥಾನದಲ್ಲಿದ್ದು ಪಕ್ಷಕ್ಕೆ ತನು-ಮನ-ಧನದಿಂದ ಅವರು ದುಡಿದಿದ್ದಾರೆ. ಈಚೆಗೆ ಲೋಕಸಭೆ ಚುನಾವಣೆಯಲ್ಲಿ ಸಂಸತ್‌ ಸ್ಥಾನ ಗೆಲ್ಲಲು ಅವರ ಪಾತ್ರವೂ ದೊಡ್ಡದಿದೆ. ಹೀಗಾಗಿ ಚರಂತಿಮಠರಿಗೆ ನಮ್ಮ ಪಕ್ಷದ ಹಿರಿಯರು ಸಚಿವ ಸ್ಥಾನ ಕೊಡಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ಕೊಡುವಂತೆ ಒತ್ತಾಯವೂ ಮಾಡುತ್ತೇವೆ. ಒಂದು ವೇಳೆ ಕೊಡದಿದ್ದರೆ, ಅವರ ಪರವಾಗಿ ನಾವು ಹೋರಾಟಕ್ಕೂ ಸಿದ್ಧರಿದ್ದೇವೆ.
ರಾಜು ವಿ. ನಾಯ್ಕರ,
ಬಿಜೆಪಿ ನಗರ ಘಟಕದ ಅಧ್ಯಕ್ಷ

ಟಾಪ್ ನ್ಯೂಸ್

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

7-rabakavi

Rabkavi Banhatti: ಮೊಬೈಲ್ ಕಳ್ಳತನ ಪತ್ತೆ: ವಾರಸುದಾರರಿಗೆ ಹಸ್ತಾಂತರ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.