ಕುತೂಹಲ ಮೂಡಿಸಿದ ಕುರುಬರ ನಡೆ 

ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬೆಂಬಲ? ಏ.2ರ ಸಭೆಯಲ್ಲಿ ಅಂತಿಮ ನಿರ್ಧಾರ 

Team Udayavani, Mar 30, 2019, 4:01 PM IST

Udayavani Kannada Newspaper
ಬಾಗಲಕೋಟೆ: ಪ್ರಸ್ತುತ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಕುರುಬ ಸಮಾಜದ ನಡೆ ಏನು ಎಂಬುದರ ಕುರಿತು ಈಗ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ-ಕಾಂಗ್ರೆಸ್‌ ಎರಡೂ ಪಕ್ಷಗಳಿಂದ ಅಧಿಕೃತ
ಟಿಕೆಟ್‌ ಘೋಷಣೆಗೂ ಮುನ್ನ ಮಾಧ್ಯಮಗೋಷ್ಠಿ ನಡೆಸಿದ್ದ ಸಮಾಜದ ಜಿಲ್ಲಾ ಘಟಕದ ಪ್ರಮುಖರು, ಕುರುಬ ಸಮಾಜದ ಆಕಾಂಕ್ಷಿಗಳಿಗೆ ಟಿಕೆಟ್‌ ಕೊಡಬೇಕು ಎಂಬ ಒತ್ತಾಯ ಮಾಡಿದ್ದರು.
ಅಲ್ಲದೇ ಯಾವ ಪಕ್ಷ ಕುರುಬ ಸಮಾಜಕ್ಕೆ ಟಿಕೆಟ್‌ ಕೊಡುತ್ತದೆಯೋ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದರು. ಯಾವ ಪಕ್ಷವೂ ನಮ್ಮ ಸಮಾಜಕ್ಕೆ ಟಿಕೆಟ್‌ ಕೊಡದಿದ್ದರೆ, ಯಾವ ಪಕ್ಷದ ಅಭ್ಯರ್ಥಿ ಅಹಿಂದ ವರ್ಗಕ್ಕೆ ಸೇರಿರುತ್ತಾರೋ ಅವರಿಗೆ ಬೆಂಬಲ ಕೊಡುತ್ತೇವೆ. ಒಂದು ವೇಳೆ ಎರಡೂ ಪಕ್ಷದ ಅಭ್ಯರ್ಥಿಗಳು ಅಹಿಂದ ವರ್ಗದವರಾಗಿದ್ದರೆ, ಯಾರಿಗೆ ಬೆಂಬಲ ಕೊಡಬೇಕು ಎಂಬುದರ ಕುರಿತು ಚರ್ಚಿಸಿ, ನಿರ್ಧಾರ ಕೈಗೊಳ್ಳುವ ಸಂದೇಹ ಸಮಾಜದ ಮುಖಂಡು ನೀಡಿದ್ದರು.
ಆಕಾಂಕ್ಷಿಗಳಿಗೆ ನಿರಾಶೆ: ಪ್ರಸ್ತುತ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಭೂ ಸೇನಾ ನಿಗಮದ ಮಾಜಿ ಅಧ್ಯಕ್ಷ ಶ್ರೀಶೈಲ ದಳವಾಯಿ, ಕಾಂಗ್ರೆಸ್‌ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಡಾ| ದೇವರಾಜ ಪಾಟೀಲ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಜಿಪಂ ಮಾಜಿ ಸದಸ್ಯ ಎಸ್‌.ಡಿ. ಜೋಗಿನ್‌ ಅವರು ಟಿಕೆಟ್‌ ಆಕಾಂಕ್ಷಿಗಳಾಗಿದ್ದರು.
ಇನ್ನು ಬಿಜೆಪಿಯಿಂದ ಜಿಪಂ ಸದಸ್ಯ ವೀರೇಶ ಉಂಡೋಡಿ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಶಿದ್ಲಿಂಗಪ್ಪನವರ ಟಿಕೆಟ್‌ ಕೇಳಿದ್ದರು. ಎರಡೂ ಪಕ್ಷಗಳಲ್ಲಿ ಇರುವ ಕುರುಬ ಸಮಾಜದ ಪ್ರಮುಖರಿಗೆ, ಈ ಬಾರಿ ಟಿಕೆಟ್‌ ದೊರೆತಿಲ್ಲ. ಹೀಗಾಗಿ ಸಮಾಜ, ಈಗ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬ ಕುತೂಹಲ ಮೂಡಿದೆ.
ಕಾಂಗ್ರೆಸ್ಸಾ-ಅಹಿಂದಾ?: ಸದ್ಯ ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. ಕಾಂಗ್ರೆಸ್‌ನಿಂದ ವೀಣಾ ಕಾಶಪ್ಪನವರ (ಲಿಂಗಾಯತ), ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ. ಗದ್ದಿಗೌಡರ (ಲಿಂಗಾಯತ ಉಪ ಪಂಗಡ-ಗಾಣಿಗ) ಅಭ್ಯರ್ಥಿಯಾಗಿದ್ದಾರೆ. ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕದಲ್ಲಿ, ಬಿಜೆಪಿ-ಕಾಂಗ್ರೆಸ್‌ ಪಕ್ಷಗಳಲ್ಲಿ ಸಕ್ರಿಯವಾಗಿರುವ ಪ್ರಮುಖರು ವ್ಯಕ್ತಿಗಳಿದ್ದಾರೆ. ಅವರೆಲ್ಲ ತಮ್ಮ ತಮ್ಮ ಪಕ್ಷದ ಪರವಾಗಿ ಬೆಂಬಲ ಕೊಡಲು ಸಮಾಜದಲ್ಲಿ ಚರ್ಚೆ ಮಾಡುವುದು ಸಹಜ. ಆದರೆ, ಅಂತಿಮವಾಗಿ ಕುರುಬ ಸಮಾಜ, ಕಾಂಗ್ರೆಸ್‌ ಅಥವಾ ಬಿಜೆಪಿಗೆ ಬೆಂಬಲ ಕೊಡುತ್ತದೆಯೋ, ಇಲ್ಲವೇ ಸಮಾಜದಿಂದ ಪ್ರತ್ಯೇಕ ಅಭ್ಯರ್ಥಿ ಕಣಕ್ಕಿಳಿಸುತ್ತದೆಯೋ ಎಂಬ ಚರ್ಚೆ ನಡೆಯುತ್ತಿದೆ.
ಪ್ರತ್ಯೇಕ ಅಭ್ಯರ್ಥಿ ಕಣಕ್ಕೆ?: ಜಿಲ್ಲೆಯಲ್ಲಿ ಕುರುಬ ಸಮಾಜ ಬಹುಸಂಖ್ಯೆಯಲ್ಲಿದೆ. ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲೂ, ಈ ಸಮಾಜ, ನಿರ್ಣಾಯಕ ಪಾತ್ರ ವಹಿಸುತ್ತದೆ. ಹೀಗಾಗಿ ಈ ಸಮಾಜ, ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬೆಂಬಲ ಕೊಡಲಿದೆ ಎಂಬ ಕುತೂಹಲ ಸಹಜವಾಗಿ ಮೂಡಿದೆ.
ಸಮಾಜದ ಪ್ರಮುಖರೇ ಹೇಳುವಂತೆ, ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಕುರುಬ ಸಮಾಜದ ಮತದಾರರು ಸುಮಾರು 3.40 ಲಕ್ಷ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ನಮ್ಮ ಸಮಾಜಕ್ಕೆ ಟಿಕೆಟ್‌ ಕೊಡಬೇಕಿತ್ತು. ಈಗ ಎರಡೂ ಪಕ್ಷದವರು ಟಿಕೆಟ್‌ ಕೊಟ್ಟಿಲ್ಲ. ಚುನಾವಣೆಗೆ ಯಾವ ತೀರ್ಮಾನ ಕೈಗೊಳ್ಳಬೇಕೆಂಬುದರ ಕುರಿತು ಚರ್ಚಿಸಲೆಂದೇ ಏ.2ರಂದು ಸಮಾಜದ ಸಭೆ ಆಯೋಜಿಸಿದ್ದಾಗಿ ಸಮಾಜದ ಜಿಲ್ಲಾ ಘಟಕ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕುರುಬ ಸಮಾಜದ ಜಿಲ್ಲಾ ನಾಯಕರ ಸಭೆಯಲ್ಲಿ ಯಾವ ನಿರ್ಣಯ ಹೊರ ಬರಲಿದೆ ಎಂಬ ಕುತೂಹಲ ಮನೆ ಮಾಡಿದೆ.
ಬಿಜೆಪಿ-ಕಾಂಗ್ರೆಸ್‌ ಎರಡೂ ಪಕ್ಷಗಳಲ್ಲಿ ನಮ್ಮ ಸಮಾಜದ ಆಕಾಂಕ್ಷಿಗಳಿದ್ದರು. ಎರಡೂ ಪಕ್ಷ ಟಿಕೆಟ್‌ ಕೊಟ್ಟಿಲ್ಲ. ಹೀಗಾಗಿ ಏ.2ರಂದು ಬೆಳಗ್ಗೆ 10:30ಕ್ಕೆ ನವನಗರದ ಕಾಳಿದಾಸ ಕಲ್ಯಾಣ ಮಂಟಪದಲ್ಲಿ ಸಭೆ ಕರೆದಿದ್ದೇವೆ. ಯಾರಿಗೆ ಬೆಂಬಲ ಕೊಡಬೇಕು ಅಥವಾ ಸಮಾಜದಿಂದ ಪ್ರತ್ಯೇಕ ಅಭ್ಯರ್ಥಿ ಕಣಕ್ಕಿಳಿಸಬೇಕೋ ಎಂಬುದರ ಕುರಿತು ಅಂದಿನ ಸಭೆಯಲ್ಲಿ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ.
.ಡಿ.ಬಿ. ಸಿದ್ದಾಪುರ, ಜಿಲ್ಲಾಧ್ಯಕ್ಷ,
ಜಿಲ್ಲಾ ಕುರುಬರ ಸಂಘ
ವಿಶೇಷ ವರದಿ

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.