![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 10, 2022, 5:59 PM IST
ರಬಕವಿ-ಬನಹಟ್ಟಿ: ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಬಕವಿ-ಬನಹಟ್ಟಿಯಲ್ಲಿ ಫೆ. 9ರಂದು ಮಧ್ಯಾಹ್ನ 12ರಿಂದ ಫೆ. 11ರ ಬೆಳಗ್ಗೆ 6ರವರೆಗೆ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ್ ಎಸ್.ಬಿ. ಇಂಗಳೆ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬನಹಟ್ಟಿ ನಗರದಲ್ಲಿ ಫೆ. 8ರಂದು ಬನಹಟ್ಟಿ ನಗರದ ಸರಕಾರಿ ಕಾಲೇಜಿನಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆಯಾಗಿ ಕಲ್ಲು ತೂರಾಟ ನಡೆದು ರಬಕವಿ-ಬನಹಟ್ಟಿ ನಗರಗಳಲ್ಲಿ ಸೂಕ್ಷ್ಮ ವಾತಾವರಣ ಸೃಷ್ಟಿಯಾಗಿದೆ. ಬುಧವಾರ ಹಿಂದುಪರ ಸಂಘಟನೆಗಳು ಘಟನೆ ಖಂಡಿಸಿ ಪ್ರತಿಭಟನೆ ಮಾಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯ ರಬಕವಿ, ಬನಹಟ್ಟಿ, ಹೊಸೂರ, ರಾಮಪುರ ಪ್ರದೇಶದಲ್ಲಿ ಯಾವುದೇ ತರಹ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಯಾವುದೇ ಸಮಾರಂಭ, ಸಂಚಾರ ಸಾಗಾಣಿಕೆ ಮಾಡುವಂತಿಲ್ಲ. ಕಲ್ಲು ಕಟ್ಟಿಗೆ ಇತ್ಯಾದಿ ಆಯುಧಗಳನ್ನು ಹೊಂದಿರುವಂತಿಲ್ಲ. ಜನರು ಗುಂಪು ಗುಂಪಾಗಿ ಸೇರುವುದನ್ನು ಮತ್ತು ಇನ್ನಿತರೆ ಚಟುವಟಿಕೆಗಳಲ್ಲಿ ತೊಡಗುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಆದೇಶವು ಮದುವೆ, ಮುಂಜಿವೆ ಹಾಗೂ ಅಂತ್ಯ ಸಂಸ್ಕಾರಕ್ಕೆ ಅನ್ವಯವಾಗುವುದಿಲ್ಲ ಎಂದು ತಹಶೀಲ್ದಾರ್ ಇಂಗಳೆ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.