ಹಿಪ್ಪರಗಿ ಜಲಾಶಯಕ್ಕೆ 263133 ಕ್ಯೂ.ನೀರು;ಮದನಮಟ್ಟಿ ಹಳಿಂಗಳಿ ಗ್ರಾಮದ ಸಂಪರ್ಕ ರಸ್ತೆ ಜಲಾವೃತ


Team Udayavani, Jul 28, 2024, 11:55 AM IST

6-rabakavi

ರಬಕವಿ-ಬನಹಟ್ಟಿ: ನೆರೆಯ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಕೃಷ್ಣಾ ನದಿ ಒಡಲು ಬಿಟ್ಟು ಹೊರಗೆ ಮತ್ತು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.

ಹಿಪ್ಪರಗಿ ಜಲಾಶಯದಿಂದ ಬಂದಷ್ಟೇ ಪ್ರಮಾಣದಲ್ಲಿ ನೀರನ್ನು ಬಿಡುತ್ತಿದ್ದರೂ, ಹಿನ್ನೀರು ಬಹಳಷ್ಟು ಪ್ರಮಾಣದಲ್ಲಿ ವ್ಯಾಪಿಸಿಕೊಂಡಿದೆ.

ಅವಳಿ ನಗರಗಳ ಜಾಕವೆಲ್‌ಗೆ ಹೋಗುವ ಮಾರ್ಗ ಸಂಪೂರ್ಣವಾಗಿ ನಡುಗಡ್ಡೆಯಾಗಿದೆ. ಅದೇ ರೀತಿಯಾಗಿ ಸ್ಥಳೀಯ ಡೆಂಪೊ ಡೈರಿಯ ಮೂಲಕ ಮದನಮಟ್ಟಿ ಹಾಗೂ ಹಳಿಂಗಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅರ್ಧ ಕಿ.ಮೀದಷ್ಟು ನೀರಿನಲ್ಲಿ ನಿಂತಿದ್ದು ಈ ಮಾರ್ಗದ ರಸ್ತೆ ಬಂದಾಗಿದೆ.

ಮದನಮಟ್ಟಿ ಗ್ರಾಮದ ಬೆಟ್ಟ ಪ್ರದೇಶದಲ್ಲಿರುವ ರಬಕವಿ ಬನಹಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೋಗುವ ನೂರಾರು ವಿದ್ಯಾರ್ಥಿಗಳು ಅಪಾಯ ಮಟ್ಟದಲ್ಲಿರುವ ನೀರನ್ನು ದಾಟಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಪ್ಪರಗಿ ಜಲಾಶಯಕ್ಕೆ ಭಾನುವಾರ  263133 ಕ್ಯೂಸೆಕ್ ನೀರು ಹರಿದು ಬಂದಿದ್ದು, 262383 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಬಿಡಲಾಗುತ್ತಿದೆ. ಹಿಪ್ಪರಗಿ ಜಲಾಶಯದ ನೀರಿನ ಮಟ್ಟ 525.20 ಮೀ. ನಷ್ಟಾಗಿದೆ.

ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾ 57 ಮಿ.ಮೀ, ನಾವುಜಾ: 89 ಮಿ.ಮೀ, ಮಹಾಬಳೇಶ್ವರ: 105 ಮಿ.ಮೀ, ವಾರಣಾ: 48 ಮಿ.ಮೀ, ರಾಧಾ ನಗರಿ: 98 ಮಿ.ಮೀ, ಮತ್ತು ದೂಧಗಂಗಾ ಪ್ರದೇಶದಲ್ಲಿ 36 ಮಿ.ಮೀ ಮಳೆಯಾದ ವರದಿಯಾಗಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ತಿಳಿಸಿದರು.

ರಬಕವಿ ಬನಹಟ್ಟ ಜಾಕವೆಲ್‌ಗಳಿಗೆ, ಮದನಮಟ್ಟಿ ಮತ್ತು ಹಳಿಂಗಳಿ ಗ್ರಾಮಕ್ಕೆ ಡೆಂಪೊ ಡೈರಿಯ ಮೂಲಕ ಸಂಕಲ್ಪ ಕಲ್ಪಿಸುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.

ಟಾಪ್ ನ್ಯೂಸ್

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

ಆಲಮಟ್ಟಿ ಅಣೆಕಟ್ಟೆ ಎತ್ತರ ಕಡಿತ ವದಂತಿ; ಆರು ದಶಕಗಳ ಬೇಡಿಕೆ ಕೃಷ್ಣಾರ್ಪಣ

Rabakavi-Yatnal

Waqf Issue: ಬಸವಣ್ಣನವರ ಕುರಿತ ಹೇಳಿಕೆಗೆ ಬಸನಗೌಡ ಯತ್ನಾಳ್‌ ಕೊಟ್ಟ ಸಮರ್ಥನೆ ಏನು?

pratap-Simha

Waqf Issue: ಪಕ್ಷದ ಕಾರ್ಯಕರ್ತನಾಗಿ ಯಾರೇ ಹೋರಾಟಕ್ಕೆ ಕರೆದರೂ ಹೋಗ್ತಿನಿ: ಪ್ರತಾಪ್‌ ಸಿಂಹ

Mudhol: ಮುಖ್ಯಮಂತ್ರಿ ಕುರ್ಚಿ ಮೇಲೆ‌ 5 ಜನ ಟವೆಲ್… ಸಂಸದ ಗೋವಿಂದ ಕಾರಜೋಳ ಬಾಂಬ್

Mudhol: ಮುಖ್ಯಮಂತ್ರಿ ಕುರ್ಚಿ ಮೇಲೆ‌ 5 ಜನ ಟವೆಲ್… ಸಂಸದ ಗೋವಿಂದ ಕಾರಜೋಳ ಬಾಂಬ್

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

14

Punjalkatte: ಮಳೆಗೆ ಮನೆಯ ಗೋಡೆ ಕುಸಿತ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

de

Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು

5

Karkala: ಅಪರಿಚಿತ ಬೈಕ್‌ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.