![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 14, 2019, 10:18 AM IST
ಬಾಗಲಕೋಟೆ: ನಗರದಲ್ಲಿ ವಿಶೇಷ ಕಿಟ್‌ಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯವನ್ನು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು.
ಬಾಗಲಕೋಟೆ: ಜಿಲ್ಲೆಯಲ್ಲಿ ನೆರೆಹಾನಿ ಹಾಗೂ ಪ್ರಕೃತಿ ವಿಕೋಪದಿಂದಾಗಿ ಹಾನಿಗೊಳಗಾಗಿರುವ ಸಂತ್ರಸ್ತರು ಪರಿಹಾರ ಕೇಂದ್ರದಿಂದ ತಮ್ಮ ಮನೆಗಳಿಗೆ ಹಿಂದಿರುಗಿದ ನಂತರ 30 ಸಾವಿರ ಕುಟುಂಬಗಳಿಗೆ ವಿಶೇಷ ಆಹಾರ ಕಿಟ್‌ಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ತಿಳಿಸಿದರು.ಮಂಗಳವಾರ ನಗರದ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತಕ್ಕೆ ಭೇಟಿ ನೀಡಿ ಜಿಲ್ಲೆಯ ಸಂತ್ರಸ್ತರು ಮರಳಿ ಮನೆಗೆ ಹೋಗುವಾಗ ನೀಡಲು ವಿಶೇಷ ಕಿಟ್‌ಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯವನ್ನು ಖುದ್ದಾಗಿ ಪರಿಶೀಲಿಸಿ ಮಾತನಾಡಿದ ಅವರು, ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಸಂತ್ರಸ್ತರಿಗೆ ಉಚಿತವಾಗಿ ನೀಡುವ ಈ ವಿಶೇಷ ಪ್ಯಾಕೇಟ್‌ನಲ್ಲಿ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ, 1 ಕೆಜಿ ತೊಗರಿಬೆಳೆ, 1 ಕೆಜಿ ಸಕ್ಕರೆ, 1 ಕೆಜಿ ಆಯೋಡಿನ್ ಯುಕ್ತ ಉಪ್ಪು 1 ಲೀಟರ್ ತಾಳೆ ಎಣ್ಣೆ ಹಾಗೂ ಐದು ಲೀಟರ್ ಸೀಮೆ ಎಣ್ಣೆಯನ್ನು ಒಳಗೊಂಡಿರುತ್ತದೆ. ಆಹಾರ ಕಿಟ್‌ಗಳನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮೂಲಕ ಸಂತ್ರಸ್ತರ ಕುಟುಂಬಗಳಿಗೆ ವಿತರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಿಟ್ ಸಿದ್ಧಪಡಿಸುತ್ತಿರುವ ಸಿಬ್ಬಂದಿಗೆ ಗುಣಮಟ್ಟದ ಪದಾರ್ಥ ನೀಡಲು ಹಾಗೂ ನಿಯಮಾನುಸಾರ ಪಾಕೆಟ್ ಸಿದ್ಧಪಡಿಸಲು ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೆಷನರಿ ಅಧಿಕಾರಿ ಗರಿಮಾ ಪವಾರ ಇದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.