ಬನಹಟ್ಟಿ ಲೋಕ ಅದಲಾತ್ 481 ಪ್ರಕರಣಗಳು ಇತ್ಯರ್ಥ
Team Udayavani, Mar 12, 2022, 6:45 PM IST
ರಬಕವಿ-ಬನಹಟ್ಟಿ: ಶನಿವಾರ ನಡೆದ ಬೃಹತ್ ಲೋಕ ಅದಾಲತ್ ಸಂದರ್ಭದಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಒಟ್ಟು 481 ಪ್ರಕರಣಗಳು ಇತ್ಯರ್ಥಗೊಂಡಿವೆ. ಲೋಕ ಅದಾಲತ್ ಯಶಸ್ವಿಯಾಗಲು ವಕೀಲರ ಸಂಘದ ಸದಸ್ಯರ ಮತ್ತು ಕಕ್ಷಿದಾರರ ಸಹಕಾರ ಮುಖ್ಯವಾಗಿದೆ ಎಂದು ಸ್ಥಳೀಯ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.
ಅವರು ಶನಿವಾರ ಸ್ಥಳೀಯ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಪತ್ರಿಕೆಯ ಜೊತೆಗೆ ಮಾತನಾಡಿ, ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ 76 ಮತ್ತು ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿಯ 765 ಪ್ರಕರಣಗಳು ಇತ್ಯರ್ಥಗೊಂಡಿವೆ.
ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆ ಹರಿಸಿಕೊಂಡರೆ ಕಕ್ಷಿದಾರರ ಮಧ್ಯದಲ್ಲಿ ಸೌಹಾರ್ದತಯುತವಾದ ಸಂಬಂಧಗಳು ಉಳಿಯುತ್ತವೆ. ಆದ್ದರಿಂದ ಲೋಕ ಅದಾಲತ್ ಮೂಲಕ ಪ್ರಕರಣಗಳನ್ನು ಇತ್ಯರ್ಥಿಗೊಳಿಸಿಕೊಳ್ಳಲು ಪ್ರತಿಯೊಬ್ಬರು ಪ್ರಯತ್ನಿಸಬೇಕು ಎಂದು ನ್ಯಾಯಾಧೀಶ ವಡಗೇರಿ ತಿಳಿಸಿದರು.
ಈ ಸಂದರ್ಭದಲ್ಲಿ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶೆ ಸುಶ್ಮಾ ಟಿ.ಸಿ, ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ, ಅರವಿಂದ ವ್ಯಾಸ್, ಜಿ.ಡಿ.ಪಾಟೀಲ, ಸುಜಾತಾ ನಿಡೋನಿ, ಶಿವಕುಮಾರ ಷಣ್ಮುಖ, ಕೆ.ಜಿ. ಸಾಲ್ಗುಡೆ, ಬಸವರಾಜ ಕುಂಬಾರ, ಶಶಿಧರ ಮೋಪಗಾರ, ಗಾಡಬೋಲೆ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.