ಬೆಳೆ ಹಾನಿಗೆ 50.01 ಕೋಟಿ ರೂ. ಇನ್‌ಪುಟ್ ಸಬ್ಸಿಡಿ
ರಬಕವಿಯಲ್ಲಿ ಲಭ್ಯವಿರುವ ಸರ್ಕಾರಿ ಖಾಲಿ ಜಾಗೆಯಲ್ಲಿ ನಿರ್ಮಿಸಲಾಗುತ್ತಿದೆ
Team Udayavani, Oct 8, 2022, 5:32 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಜೂನ್ ತಿಂಗಳಿಂದ ಈವರೆಗೆ ಮಳೆ-ಪ್ರವಾಹದಿಂದ ಹಾನಿಯಾದ ರೈತರ ಬೆಳೆಗಳಿಗೆ ಸರಕಾರದಿಂದ ನಾಲ್ಕು ಹಂತಗಳಲ್ಲಿ ಒಟ್ಟು 50.01 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿ ಪಾವತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಗಿರುವ ಜಿಪಂ ಆಡಳಿತಾಧಿಕಾರಿ ಶಿವಯೋಗ ಕಳಸದ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸೆಪ್ಟೆಂಬರ್ ಮಾಹೆಯ ಜಿ.ಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
56 ಸಾವಿರ ರೈತರ ಬೆಳೆ ಹಾನಿ: ಜಿಲ್ಲೆಯಲ್ಲಿ ಒಟ್ಟು 56916 ರೈತರ ಬೆಳೆಗಳು ಹಾನಿಗೊಳಗಾಗಿದ್ದು, ಈ ಪೈಕಿ 41723 ರೈತರಿಗೆ ಒಟ್ಟು 50.01 ಕೋಟಿ ರೂ. ಗಳ ಇನ್‌ಪುಟ್ ಸಬ್ಸಿಡಿ ಹಣ ಪಾವತಿಯಾಗಿರುತ್ತದೆ. ಮೊದಲನೇ ಹಂತದಲ್ಲಿ 773 ರೈತರಿಗೆ 1.12 ಕೋಟಿ ರೂ., ಎರಡನೇ ಹಂತದಲ್ಲಿ 12365 ರೈತರಿಗೆ 13.82 ಕೋಟಿ ರೂ., ಮೂರನೇ ಹಂತದಲ್ಲಿ 10630 ರೈತರಿಗೆ 13.46 ಕೋಟಿ ರೂ. ಹಾಗೂ ನಾಲ್ಕನೇ ಹಂತದಲ್ಲಿ 17955 ರೈತರಿಗೆ 21.59 ಕೋಟಿ ರೂ.ಗಳಷ್ಟು ಇನ್ ಪುಟ್ ಸಬ್ಸಿಡಿ ಪಾವತಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಉಂಟಾದ ಅಕಾಲಿಕ ಮಳೆ ಹಾಗೂ ಪ್ರವಾಹದಿಂದಾದ ಕೃಷಿ, ತೋಟಗಾರಿಕೆ, ರೇಷ್ಮೆ, ರಸ್ತೆ, ಸೇತುವೆ, ಹೆಸ್ಕಾಂ, ಕೈಮಗ್ಗ, ಶಾಲಾ ಕೊಠಡಿ ಹಾನಿಯ ಮಾಹಿತಿ ಹಾಗೂ ಪರಿಹಾರ ಪಾವತಿ ಹಾಗೂ ದುರಸ್ಥಿ ಕೈಗೊಂಡ ಬಗ್ಗೆ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ರೈತರ ಇ-ಕೆವೈಸಿ ಶೇ. 66 ರಷ್ಟು ಆಗಿದ್ದು, ನೂರಕ್ಕೆ ನೂರರಷ್ಟು ಆಗಬೇಕು. ಇದಕ್ಕಾಗಿ ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಸಹಕಾರ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಅವರಿಗೆ ತಿಳಿಸಿದರು.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಶೇ.75.21 ಮಾನವ ದಿನ ಸೃಜಿಸಲಾಗಿದೆ. ಪ್ರತಿ ತಾಲೂಕಿಗೆ ಮಾದರಿ ಶಾಲೆ ನಿರ್ಮಾಣ, ನರ್ಸರಿ ಹಾಗೂ ಅಮೃತ ಸರೋವರ ಯೋಜನೆಯಡಿ ಜಿಲ್ಲೆಯಲ್ಲಿ 75 ಕೆರೆಗಳ ಅಭಿವೃದ್ಧಿ ಕಾರ್ಯವನ್ನು ನರೇಗಾದಡಿ ಕೈಗೊಳ್ಳಲಾಗಿದೆ. ಸಮುದಾಯ ಕಾಮಗಾರಿಗಳಾದ ಶಾಲಾ ಆಟದ ಮೈದಾನ, ಶಾಲಾ ಶೌಚಾಲಯ, ಶಾಲಾ ಉದ್ಯಾನವನ, ಶಾಲಾ ಕಾಂಪೌಂಡ್ ನಿರ್ಮಾಣ ನರೇಗಾದಡಿ ಕೈಗೊಳ್ಳಲಾಗುತ್ತಿದೆ ಎಂದು ಜಿಪಂ ಸಿಇಒ ಟಿ.ಭೂಬಾಲನ್ ತಿಳಿಸಿದರು.
ರಬಕವಿ-ಸಂಗಮದಲ್ಲಿ ಗೋ ಶಾಲೆ: ಜಿಲ್ಲೆಗೆ ಎರಡು ಸರಕಾರಿ ಗೋ ಶಾಲೆ ಸ್ಥಾಪನೆಗೆ ಮಂಜೂರಾಗಿದ್ದು, ರಬಕವಿ ಮತ್ತು ಕೂಡಲಸಂಗಮದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ರಬಕವಿಯಲ್ಲಿ ಲಭ್ಯವಿರುವ ಸರ್ಕಾರಿ ಖಾಲಿ ಜಾಗೆಯಲ್ಲಿ ನಿರ್ಮಿಸಲಾಗುತ್ತಿದೆ. ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಗೆ 13 ಸಂಚಾರಿ ವಾಹನ ನೀಡಿದ್ದು, ಸದ್ಯದಲ್ಲಿಯೇ ಕಾರ್ಯಾರಂಭಗೊಳ್ಳಲಿವೆ. ಪುಣ್ಯಕೋಟಿ ದತ್ತು ಯೋಜನೆಯಡಿ 10 ಖಾಸಗಿ ಗೋ ಶಾಲೆಗಳಲ್ಲಿರುವ 1194 ಜಾನುವಾರುಗಳ ವಿವರಗಳನ್ನು ಈ ಯೋಜನೆಯ ಪೋರ್ಟಲ್‌ನಲ್ಲಿ ದಾಖಲಿಸಲಾಗಿದೆ ಎಂದರು.
ತೋಟಗಾರಿಕೆ ವಿವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಪಿಜಿ ವಿದ್ಯಾರ್ಥಿಗಳಿಗೆ ವಸತಿ ನಿಲಯ ಮಂಜೂರಾಗಿದೆ. ಅಲ್ಲದೇ ಎರಡು ಪೋಸ್ಟ್ ಮೆಟ್ರಿಕ್ ವಸತಿ ನಿಲಯ ಮಂಜೂರಾಗಿವೆ. ಎಲ್ಲ ವಸತಿ ನಿಲಯಗಳಿಗೂ ನಿವೇಶನ ಇರುವುದಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹಣಮರಟ್ಟಿ ತಿಳಿಸಿದರೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ, 17 ವಸತಿ ನಿಲಯಗಳ ಕಟ್ಟಡ ನಿರ್ಮಾಣ ಪೈಕಿ ಒಂದಕ್ಕೆ ಅನುದಾನ ಬಿಡುಗಡೆಯಾಗಿದ್ದು, ಗೃಹ ಮಂಡಳಿಗೆ ವಹಿಸಲಾಗಿದೆ ಎಂದರು. ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ. ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಜಿ.ಪಂ ಯೋಜನಾ ನಿರ್ದೇಶಕ ಸಿ.ಆರ್. ಮುಂಡರಗಿ, ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ, ಉಪ ವಿಭಾಗಾಧಿಕಾರಿಗಳಾದ ಸಿದ್ದು ಹುಲ್ಲೊಳ್ಳಿ, ಶ್ವೇತಾ ಬೀಡಿಕರ ಉಪಸ್ಥಿತರಿದ್ದರು.
ಜಿಲ್ಲೆಗೆ ಎರಡು ಸರಕಾರಿ ಗೋ ಶಾಲೆ ಸ್ಥಾಪನೆಗೆ ಮಂಜೂರಾಗಿದ್ದು, ರಬಕವಿ ಮತ್ತು ಕೂಡಲಸಂಗಮದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ರಬಕವಿಯಲ್ಲಿ ಲಭ್ಯವಿರುವ ಸರ್ಕಾರಿ ಖಾಲಿ ಜಾಗೆಯಲ್ಲಿ ನಿರ್ಮಿಸಲಾಗುತ್ತಿದೆ. ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಗೆ 13 ಸಂಚಾರಿ ವಾಹನ ನೀಡಿದ್ದು, ಸದ್ಯದಲ್ಲಿಯೇ ಕಾರ್ಯಾರಂಭಗೊಳ್ಳಲಿವೆ.
*ಶಿವಯೋಗಿ ಕಳಸದ,
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.