ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಲು ಕರೆ
•ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿಕೊಡಿ•ಶಿಕ್ಷಕರ ವೃತ್ತಿ ಪವಿತ್ರವಾದುದು
Team Udayavani, Jul 15, 2019, 2:06 PM IST
ಬಾಗಲಕೋಟೆ: ಸರ್ಕಾರಿ ನೌಕರರ ಸಂಘದ ನೂತನ ನಿರ್ದೇಶಕರಾಗಿ ಆಯ್ಕೆಯಾದ ತುಕಾರಾಮ ಲಮಾಣಿ ಅವರನ್ನು ವಿಕಲಚೇತನ ನೌಕರರ ಸಂಘದಿಂದ ಸನ್ಮಾನಿಸಲಾಯಿತು.
ಬಾಗಲಕೋಟೆ: ಪ್ರತಿಯೊಬ್ಬರು ತಮ್ಮ ಪಾಲಿನ ಜಬಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.
ನಗರ ಬಿಆರ್‌ಸಿ ಕಚೇರಿಯಲ್ಲಿ ವಿಕಲಚೇತನ ನೌಕರರ ಸಂಘದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಚಿಕ್ಕೋಡಿಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿಯಾದ ಎಂ.ಜಿ. ದಾಸರ ಮತ್ತು ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ವಿಕಲಚೇತನ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ತುಕಾರಾಮ ಎಸ್.ಲಮಾಣಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಜೀವನದಲ್ಲಿ ತಮಗೆ ನೀಡಿದ ಜವಾಬ್ದಾರಿ ಸರಿಯಾದ ರೀತಿಯಲ್ಲಿ ಕೆಲಸ ಮಾಡಿದಾಗ ಮಾತ್ರ ಮಾಡಿದ ಕಾರ್ಯ ಶಾಶ್ವತವಾಗಿ ನೆನಪಿನಲ್ಲಿ ಇರಲು ಸಾಧ್ಯ. ಸಾರ್ವಜನಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿಕೊಟ್ಟಾಗ ಮಾತ್ರ ಉತ್ತಮ ಅಧಿಕಾರಿಯಾಗಲು ಸಾಧ್ಯ ಎಂದರು.
ನಿವೃತ್ತ ಉಪನಿರ್ದೇಶಕ ಎಂ.ಜಿ. ದಾಸರ ಮಾತನಾಡಿ, ಶಿಕ್ಷಕರ ವೃತ್ತಿಯು ಎಲ್ಲ ವೃತ್ತಿಗಿಂತ ಪವಿತ್ರವಾದ ವೃತ್ತಿಯಾಗಿದೆ. ವೃತ್ತಿಯ ಪಾವಿತ್ರತೆಯನ್ನು ಪ್ರತಿಯೊಬ್ಬ ಶಿಕ್ಷಕರು ಕಾಪಾಡಿಕೊಳ್ಳಬೇಕು. ಶಿಕ್ಷಣ ಕ್ಷೇತ್ರವು ಸದಾ ಬದಲಾವಣೆಯಾಗುವ ಕ್ಷೇತ್ರವಾಗಿದೆ ಎಂದರು.
ವಿಕಲಚೇತನ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ತುಕಾರಾಮ ಲಮಾಣಿ ಮಾತನಾಡಿ, ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ ಬೆಳಗಲಿ, ಸಂಘದ ರಾಜ್ಯ ಖಜಾಂಚಿ ಮಂಜುನಾಥ ಹಿಂಡಿಹುಳಿ, ಕೊಪ್ಪಳ ತಾಲೂಕ ಅಧ್ಯಕ್ಷ ಅಂದಪ್ಪ ಇದ್ಲಿ, ಸಂಘದ ನಿರ್ದೇಶಕ ಅಶೋಕ ಕಂಚಗಾರ, ಜಾನಪದ ಪರಿಷತ್ತಿನ ಅಧ್ಯಕ್ಷ ಆನಂದ ಪೂಜಾರಿ, ಶಿಕ್ಷಕ ದೇವಪ್ಪ ಒಂಟಿಗಾರ, ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ಪರೀಟ, ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹುಲಸೂರ, ಹೊಳಿಬಸು ಚಿತ್ತರಗಿ ಉಪಸ್ಥಿತರಿದ್ದರು.
ಸಂಘದ ತಾಲೂಕ ಸಂಘಟನಾ ಕಾರ್ಯದರ್ಶಿ ಸಂಗಮೇಶ ಶಿರಗುಂಪಿ ಸ್ವಾಗತಿಸಿದರು. ಖಜಾಂಚಿ ಸುರೇಶ ಕಿಳ್ಯಾರ್ ನಿರೂಪಿಸಿದರು. ಡಿ.ಎಲ್. ರಾಠೊಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.