ಮೋದಿ ಮತ್ತೆ ಪ್ರಧಾನಿ ಆಗಲು ರೈತನ ಕಠಿಣ ಮೌನಾನುಷ್ಠಾನ
Team Udayavani, May 22, 2019, 4:06 PM IST
ಬೀಳಗಿ (ಬಾಗಲಕೋಟೆ): ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕೆಂದು ಸಂಕಲ್ಪಿಸಿ ತಾಲೂಕಿನ ತೋಳಮಟ್ಟಿ ರೈತ ಮೂರು ದಿನಗಳಿಂದ ಅನ್ನ, ನೀರು ತ್ಯಜಿಸಿ ಕಠೊರ ಮೌನಾನುಷ್ಠಾನ ಕೈಗೊಂಡಿದ್ದಾರೆ. ತೋಳಮಟ್ಟಿ ಗ್ರಾಮದ ಮಲ್ಲಪ್ಪ ಅಪ್ಪಣ್ಣ ಭಾವಿ (75) ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮೌನಾನುಷ್ಠಾನ ಕೈಗೊಂಡಿದ್ದಾರೆ.
ಹಿಂದೆ ಘಟಪ್ರಭಾ ಎಡದಂಡೆ ಕಾಲುವೆಗೆ ಟೆಲೆಂಡ್‌ವರೆಗೆ ನೀರು ಹರಿಸುವಂತೆ ಒತ್ತಾಯಿಸಿ ಮೂರು ದಿನ ಒಂಟಿ ಕಾಲಿನ ಮೇಲೆ ನಿಂತು ಕಠಿಣ ಹೋರಾಟ ಮಾಡಿದ್ದರು. ಕಬ್ಬಿಗೆ ದರ ನಿಗದಿಗೊಳಿಸಬೇಕೆಂದು ಒತ್ತಾಯಿಸಿ 23 ದಿನ ಉಪವಾಸ ಸತ್ಯಾಗ್ರಹ ಮಾಡಿದ್ದರು. ಇವರನ್ನು ರೈತಪರ ಧ್ವನಿಯಾಗಿ ಜನ ಗುರುತಿಸುತ್ತಾರೆ.
ರೈತಸಂಘದಲ್ಲಿನ ಸೇವೆ ಇವರಲ್ಲಿ ಹೋರಾಟದ ಕಿಚ್ಚು ತುಂಬಿದೆ. ಮಲ್ಲಪ್ಪ ಭಾವಿ, ಮಲ್ಲಿಕಾರ್ಜುನ ಸ್ವಾಮಿಯ ಪರಮಭಕ್ತ. ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ದೇಶದಲ್ಲಿ ಸಮೃದ್ಧವಾದ ಮಳೆ, ಬೆಳೆ ಬರಬೇಕು, ವಿಶ್ವ ಶಾಂತಿ ನೆಲೆಸಬೇಕೆಂದು ಕಠಿಣ ಮೌನಾನುಷ್ಠಾನ ಆರಂಭಿಸಿದ್ದಾರೆ. ಅವರ ಆರೋಗ್ಯದ ಮೇಲೆ ಸ್ಥಳೀಯರು ನಿಗಾ ಇಟ್ಟಿದ್ದಾರೆ.
● ರವೀಂದ್ರ ಕಣವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.