ಗೈರು: ಶೋಕಾಸ್‌ ನೋಟಿಸ್‌ ನೀಡಲು ಸೂಚನೆ


Team Udayavani, Sep 18, 2019, 10:31 AM IST

bk-tdy-2

ಬಾಗಲಕೋಟೆ: ಜಿಪಂ ಕೆಡಿಪಿ ಸಭೆಯಲ್ಲಿ ಸಿಇಒ ಮೊಹ್ಮದ ಇಕ್ರಮ್‌ಮುಲ್ಲಾ ಶರೀಫ್‌ ಮಾತನಾಡಿದರು.

ಬಾಗಲಕೋಟೆ: ಜಿಪಂ ಮಾಸಿಕ ಕೆಡಿಪಿ ಸಭೆಗೆ ಅನುಮತಿ ಪಡೆಯದೇ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡುವಂತೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಜಿಪಂ ಸಿಇಒಗೆ ಸೂಚಿಸಿದರು.

ಜಿಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿಯೊಂದು ಸಭೆಗೆ ಸ್ವತಃ ಅಧಿಕಾರಿಗಳೇ ಹಾಜರಾಗಬೇಕು. ಅನಿವಾರ್ಯ ಕಾರಣಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆದು ತಮ್ಮ ಪ್ರತಿನಿಧಿಗಳನ್ನು ಕಳುಹಿಸಬೇಕು. ಇಲ್ಲವಾದಲ್ಲಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ನಂತರ ಕಳೆದ ಜೂನ್‌ ಮಾಹೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಡುವಳಿಗಳ ಮೇಲಿನ ಅನುಸರಣಾ ವರದಿ ಬಗ್ಗೆ ಚರ್ಚಿಸಲಾಯಿತು. ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಗಳ 2018-19ನೇ ಸಾಲಿನಲ್ಲಿ ಒಟ್ಟು 157 ಫಲಾನುಭವಿಗಳು ಪ್ರಯೋಜನ ಪಡೆದಿದ್ದು, ಬೀಜ ವಿತರಣೆ ವೇಳೆಯಲ್ಲಿ ಜನಪ್ರತಿನಿದಿಗಳ ಗಮನಕ್ಕೆ ತರಲು ಆಯಾ ತಾಲೂಕಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಪ್ರಭುರಾಜ ಹಿರೇಮಠ ತಿಳಿಸಿದರು. ನೆಡತೋಪು ನಿರ್ಮಾಣ, ನಿರ್ವಹಣೆ ಹಾಗೂ ಕಾಮಗಾರಿಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಸ್ವಚ್ಛಮೇವ ಜಯತೆ ಆಂದೋಲನದಡಿ ವೈಯಕ್ತಿಕ ಶೌಚಾಲಯಗಳ ಬಳಕೆ ಮತ್ತು ಸುಸ್ಥಿರತೆ ಕುರಿತು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೇಸ್‌ಲೈನ್‌ ಸಮೀಕ್ಷೆಯಿಂದ ಹೊರಗುಳಿದ ಕುಟುಂಬಗಳಿಗೆ ಶೌಚಾಲಯದ ಸೌಲಭ್ಯ ನೀಡಲಾಗುತ್ತಿದ್ದು, ಇಲ್ಲಿವರೆಗೆ 2269 ಕುಟುಂಬಗಳಿಗೆ ಪ್ರೋತ್ಸಾಹಧನ ನೀಡಲಾಗಿದೆ. ಇನ್ನುಳಿದ ಕುಟುಂಬಗಳಿಗೆ ಸೆಪ್ಟೆಂಬರ್‌ ಮಾಹೆಯ ಅಂತ್ಯಕ್ಕೆ ಶೌಚಾಲಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಭೆಗೆ ತಿಳಿಸಲಾಯಿತು.

ಜಿಲ್ಲೆಯಲ್ಲಿ ಒಟ್ಟು 158 ಕೆರೆಗಳು ಇರುವ ಬಗ್ಗೆ ಸಮೀಕ್ಷೆಯಿಂದ ಮಾಹಿತಿ ಪಡೆಯಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕೆರೆ ಸಂಜೀವಿನಿ, ಜಲಾಮೃತ ಯೋಜನೆಯಡಿ ಬಾದಾಮಿ, ಹುನಗುಂದ, ಬೀಳಗಿ ಮತ್ತು ಮುಧೋಳ ತಾಲೂಕಿನ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಕಾರ್ಯನಿವಾಹಕ ಅಭಿಯಂತರ ವಿಜಯಕುಮಾರ ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲಿ 4 ಜನ ಸ್ತ್ರೀರೋಗ ತಜ್ಞರು ಕಾರ್ಯನಿರ್ವಹಿಸುತ್ತಿದ್ದು, ಸಿಜರಿನ್‌ ಮಾಡುವ ವ್ಯವಸ್ಥೆ ಕೈಗೊಳ್ಳಲಾಗಿದೆ. ತಾಲೂಕ ಮಟ್ಟದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ಅರಿವು ಮೂಡಿಸುವ ಕಾರ್ಯಕ್ರಮ, ಪ್ರತಿ ತಿಂಗಳು ಜಿಲ್ಲಾ ಕುಷ್ಟರೋಗ ಅಧಿಕಾರಿಗಳು ಕುಷ್ಟರೋಗಗಳಿಗೆ ಕಾಲೋನಿಗಳಿಗೆ ಭೇಟಿ ನೀಡಿ ಉಪಚಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಅನಂತ ದೇಸಾಯಿ ಸಭೆಗೆ ತಿಳಿಸಿದರು.

ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಸಿಇಒ ಮೊಹ್ಮದ ಇಕ್ರಮ್‌ಮುಲ್ಲಾ ಶರೀಫ್‌, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ದಡ್ಡಿ, ಶಿಕ್ಷಣ ಮತ್ತು ಆರೋಗ್ಯ ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ಸಿಂಗಾಡೆ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಪಾಟೀಲ, ಜಿಪಂ ಉಪಕಾರ್ಯದರ್ಶಿ ಎ.ಜಿ.ತೋಟದ, ಯೋಜನಾ ನಿರ್ದೇಶಕ ವಿ.ಎಸ್‌.ಹಿರೇಮಠ, ಮುಖ್ಯಲೆಕ್ಕಾಧಿಕಾರಿ ಶಾಂತಾ ಕಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.