ಮತದಾರರ ಪಟ್ಟಿಗೆ ಅರ್ಹರ ಹೆಸರು ಸೇರಿಸಿ

Team Udayavani, Jan 25, 2020, 11:39 AM IST

bk-tdy-1

ಬಾಗಲಕೋಟೆ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಯುವ ಮತದಾರರು ಬಿಟ್ಟು ಹೋಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಎಂದು ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕ ಮನೋಜ್‌ ಜೈನ್‌ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಮತದಾರರ ಪಟ್ಟಿ ಪರಿಷ್ಕರಣ ಕಾರ್ಯದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಯುವ ಮತದಾರರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆಯಾ ಬೂತ್‌ ಮಟ್ಟದ ಬಿಎಲ್‌ಒಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಸೆಕ್ಟರ್‌ ಅಧಿಕಾರಿಗಳನ್ನು ನೇಮಿಸಿ ಭೇಟಿ ನೀಡಿ ಪರಿಶೀಲಿಸುವ ಕಾರ್ಯವಾಗಬೇಕು ಎಂದರು. ಮತದಾರರ ಪಟ್ಟಿಯಲ್ಲಿ ಅಲೇಮಾರಿ ಜನಾಂಗ ಹಾಗೂ ಸುಡಗಾಡ ಸಿದ್ದರು ಬಿಟ್ಟು ಹೋಗಬಾರದು. ಎಲ್ಲ ತಹಶೀಲ್ದಾರರು ಚುರುಕಾಗಿ ಕಾರ್ಯನಿರ್ವಹಿಸಿ ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಮಟ್ಟದಲ್ಲಿ ದಿನ 24 ಗಂಟೆಗಳ ಕಂಟ್ರೋಲ್‌ ರೂಂ ತೆರೆಯಲು ತಿಳಿಸಿದರು. ಸ್ವೀಪ್‌ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡಬೇಕು. ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಕ್ಯಾಪ್ಟನ ಡಾ| ಕೆ.ರಾಜೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಮಿಂಚಿನ ನೋಂದಣಿಯಲ್ಲಿ 18-19 ವಯಸ್ಸಿನ 5640 ಮತದಾರರು ಹೆಸರು ನೋಂದಾಯಿಸಿದ್ದಾರೆ. ಕಳೆದ ಡಿಸೆಂಬರ್‌ 16ರಿಂದ ಜ.23 ರವರೆಗೆ ಜಿಲ್ಲೆಯಲ್ಲಿ ಒಟ್ಟು 31,880 ಅರ್ಜಿಗಳನ್ನು ಡಿಜಿಟೈಜಡ್‌ ಮಾಡಲಾಗಿದೆ ಎಂದರು.

ವಿವಿಧ ಹಂತದಲ್ಲಿ ಎಲ್ಲ ಅಧಿಕಾರಿಗಳು ಮತದಾರರ ಪಟ್ಟಿ ಪರಿಶೀಲಿಸಿದ್ದು, ಈವರೆಗೆ 3,204 ಅರ್ಜಿಗಳನ್ನು ಪರಿಶೀಲಿಸಲಾಗಿದೆ. 42,246 ಹೊಸ ಮತದಾರರ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಜಿಲ್ಲೆಯ 7 ಮತಕ್ಷೇತ್ರಗಳಲ್ಲಿ ಜ.13ರ ಅಂತ್ಯಕ್ಕೆ ಹಕ್ಕು ಮತ್ತು ಆಕ್ಷೇಪಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಮೂನೆ-6ಕ್ಕೆ ಸಂಬಂಧಿಸಿದಂತೆ 26,671, ಹೆಸರು ತೆಗೆದು ಹಾಕಲು ನಮೂನೆ-7ಕ್ಕೆ 6,489, ಲೋಪದೋಷ ಸರಿಪಡಿಸಲು ನಮೂನೆ-8ಕ್ಕೆ 21,753 ಹಾಗೂ ಅದೇ ವಿಧಾನಸಭೆ ಕ್ಷೇತ್ರದ ಒಂದು ಮತಗಟ್ಟೆಯಿಂದ ಬೇರೊಂದು ಮತಗಟ್ಟೆ ಸ್ಥಳಾಂತರಕ್ಕೆ ನಮೂನೆ-8ಎಗೆ ಸಂಬಂಧಿಸಿದಂತೆ 3,665 ಆಕ್ಷೇಪಣೆಯ ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತರಬೇತಿ ಐಎಎಸ್‌ ಅಧಿಕಾರಿ ಗರಿಮಾ ಪನ್ವಾರ ಇದ್ದರು.

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.