ನೀರು ಪೂರೈಕೆಗೆ ಆಗ್ರಹಿಸಿ ಗ್ರಾಪಂಗೆ ಮುತ್ತಿಗೆ

ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ; ನೀರು ಕೊಡದಿದ್ದರೆ ಗ್ರಾಪಂ ಕಚೇರಿ ಮುಚ್ಚಿ

Team Udayavani, Jul 22, 2022, 3:20 PM IST

19

ಲೋಕಾಪುರ: ಚೌಡಾಪುರ ಗ್ರಾಮದ ಎಸ್‌ಸಿ ಕಾಲೋನಿಗೆ ಕಳೆದ ಹಲವು ತಿಂಗಳಿಂದ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡುತ್ತಿಲ್ಲ. ಗ್ರಾಪಂ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿಗೆ ಮಹಿಳೆಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನೀರು ಕೇಳಿದರೆ ಅಧಿಕಾರಿಗಳು ಮತ್ತು ಜನಪ್ರತಿನಿ ಧಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.

ನೀರಿಗಾಗಿ ಪರದಾಟ: ಬೈಕ್‌-ಸೈಕಲ್‌ಗ‌ಳಲ್ಲಿ ಹಾಗೂ ನಡೆದುಕೊಂಡು ಒಂದು ಕಿಲೋ ಮೀಟರ್‌ ಕ್ರಮಿಸಿ ನೀರು ತರುವ ಪರಿಸ್ಥಿತಿ ಎದುರಾಗಿದೆ. ಸಮರ್ಪಕ ನೀರು ಪೂರೈಕೆಗಾಗಿ ಹಲವು ಬಾರಿ ಗ್ರಾಪಂ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಪಂ ಅಧಿಕಾರಿಗಳು ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ ಕೊಡುವಂತೆ ಪಿಡಿಒ ಗಮನಕ್ಕೆ ತಂದರೂ ಸರಿಯಾಗಿ ಸ್ಪಂದಿಸುತ್ತಿಲ್ಲ, ಬೇಸಿಗೆ ಸಮಯದಲ್ಲಿ ತುಂಬ ತೊಂದರೆ ಅನುಭವಿಸುವಂತಾಗುತ್ತದೆ. ಕೂಡಲೇ ಸಮಸ್ಯೆ ಪರಿಹರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ನಮಗೆ ನೀರು ಕೊಡಿ, ಇಲ್ಲದಿದ್ದರೆ ಗ್ರಾಪಂ ಕಚೇರಿ ಮುಚ್ಚಿ: ತೆರಿಗೆ ಮಾತ್ರ ಸಮಯಕ್ಕೆ ಸರಿಯಾಗಿ ವಸೂಲಿ ಮಾಡುತ್ತೀರಿ. ಆದರೆ, ಜನರ ಸಮಸ್ಯೆಗಳಿಗೆ ಪರಿಹಾರ ನೀಡದ ಪಂಚಾಯಿತಿ ಕಚೇರಿ ನಮಗೆ ಬೇಕಾಗಿಲ್ಲ. ಕೂಡಲೇ ನೀರಿನ ವ್ಯವಸ್ಥೆ ಕಲ್ಪಿಸಿ ಇಲ್ಲವಾದಲ್ಲಿ ಈ ಪಂಚಾಯತ್‌ಗೆ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿ ನಮಗೆ ನೀರು ಕೊಡಿ, ಇಲ್ಲದಿದ್ದರೆ ಗ್ರಾಪಂ ಮುಚ್ಚಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹನಮವ್ವ ದೊಡಮನಿ, ಶಾಮಲವ್ವ. ದೊಡಮನಿ, ಗೀತಾ ದೊಡಮನಿ, ನಾಗವ್ವ ದೊಡಮನಿ, ರಂಗವ್ವಾ ದೊಡಮನಿ, ಯಲ್ಲವ್ವಾ ದೊಡಮನಿ, ಶಾಂತವ್ವ ದೊಡಮನಿ, ಗಂಗವ್ವಾ ಮಾದರ, ಹವಳಪ್ಪ ಯರಗಟ್ಟಿ, ರಮೇಶ ಯರಗಟ್ಟಿ, ರಾಮಣ್ಣ ದೊಡಮನಿ, ಕಾಶಪ್ಪ ದೊಡಮನಿ, ಕೃಷ್ಣಾ ದೊಡಮನಿ, ವೆಂಕಣ್ಣ ದೊಡಮನಿ, ಭೀಮಶಿ ನಾಯಕ, ಶೆಟ್ಟೆಪ್ಪ ಇದ್ದರು.

ಸಮಸ್ಯೆ ಕುರಿತು ನಮ್ಮ ಗಮನಕ್ಕೆ ಬಂದಿದ್ದು, ನೀರು ಸರಬರಾಜು ಮಾಡಲು ಒಂದು ಬೋರ್‌ ಕೊರೆಯಿಸಲಾಗಿದ್ದು, ಅದಕ್ಕೆ ವಿದ್ಯುತ್‌ ಟಿಸಿ ಅಳವಡಿಸಲು ಮನವಿ ಮಾಡಲಾಗಿದೆ. ಗ್ರಾಮಸ್ಥರು ಇದಕ್ಕೆ ಸಹಕಾರ ನೀಡಬೇಕು. ಬೇಗ ಈ ಸಮಸ್ಯೆ ನಿವಾರಿಸಲಾಗುವದು. –ಎಸ್‌.ವೈ. ನರಸನ್ನವರ ಪಿಡಿಒ, ಲಕ್ಷಾನಟ್ಟಿ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.