ಅಧಿಕಾರಿಗಳಿಗೆ ಸಿದ್ದು ಆಡಳಿತ ಪಾಠ

•ರೈತರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಬಗೆಹರಿಸಿ•ನಿಖರ ಮಾಹಿತಿ ಇಲ್ಲದೇ ಸಭೆಗೆ ಬಂದಿದ್ದ ಅಧಿಕಾರಿಗಳ ತರಾಟೆ

Team Udayavani, Jun 30, 2019, 9:57 AM IST

bk-tdy-1..

ಬಾಗಲಕೋಟೆ: ನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬಾಗಲಕೋಟೆ: ಬಾದಾಮಿ ಶಾಸಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಹಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಜತೆಗೆ ಅಭಿವೃದ್ಧಿ ಹಾಗೂ ಆಡಳಿತದ ಪಾಠ ಮಾಡಿದರು.

ಸಭೆ ಆರಂಭಕ್ಕೂ ಮೊದಲೇ ಆಗಮಿಸಿದ್ದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಸುಮಾರು ಅರ್ಧ ಗಂಟೆ ಕಾದು ಕುಳಿತರು. ಸಭೆ ಆರಂಭಗೊಳ್ಳುತ್ತಿದ್ದಂತೆ, ಮೊದಲ ಬಾರಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಜಿಪಂನಿಂದ ಸನ್ಮಾನಿಸಲಾಯಿತು.

ಕೃಷಿ ಇಲಾಖೆಯೊಂದಿಗೆ ಆರಂಭಗೊಂಡ ಕೆಡಿಪಿ ಸಭೆ, ಬಿಟಿಡಿಎ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಮೂಲಕ ಮುಕ್ತಾಯಿತು. ಸಭೆಯುದ್ದಕ್ಕೂ ಜಿಲ್ಲೆಯ ವಿವಿಧ ಶಾಸಕರು, ಸಚಿವರ ಮಾತು ಆಲಿಸುತ್ತಿದ್ದ ಸಿದ್ದು, ಅಧಿಕಾರಿಗಳಿಗೆ ಛಾಟಿ ಬೀಸುತ್ತಲೇ ಇದ್ದರು.

ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳ ತರಾಟೆಗೆ: ಸಭೆ ಆರಂಭದಲ್ಲೇ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಖರ ಮಾಹಿತಿ ಇಲ್ಲದೇ ಸಭೆಗೆ ಆಗಮಿಸಿದ್ದ ಇಬ್ಬರೂ ಅಧಿಕಾರಿಗಳ ಕುರಿತು ಮಾತನಾಡಿ, ಹೋಂ ವರ್ಕ್‌ ಇಲ್ಲದೇ ಸಭೆಗೆ ಏಕೆ ಬರುತ್ತೀರಿ. ಕೃಷಿ ಅಧಿಕಾರಿಗಳು, ರೈತರೇ ನಮ್ಮ ಬಳಿಗೆ ಬರಲಿ ಎಂದು ಕಾಯುತ್ತೀರಿ. ನೀವೆಲ್ಲ ನಿಮ್ಮದೇ ಆದ ಲೋಕದಲ್ಲಿದ್ದೀರಿ. ರೈತರ ಮನೆ ಬಾಗಿಲಿಗೆ ನೀವು ಹೋಗಬೇಕು. ವಿಜ್ಞಾನ-ತಂತ್ರಜ್ಞಾನ ಇಂದು ಬೆಳೆದಿದೆ. ಕೃಷಿ-ತೋಟಗಾರಿಕೆಯಲ್ಲೂ ಹೊಸ ಹೊಸ ಸಂಶೋಧನೆ ಬಂದಿವೆ. ಆದರೂ, ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೇ ಇದು ಹೀಗೆಯೇ ಮುಂದುವರೆದರೆ, ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಸಚಿವರು ಹೇಳಿದರೂ ಟಿಸಿ ಕೊಡಲ್ಲ; ಹೆಸ್ಕಾಂ ಕುರಿತ ಚರ್ಚೆ ವೇಳೆ, ಸುಟ್ಟ ಟಿಸಿ ಬದಲಾಯಿಸಿ ಕೊಡಲು ಹೆಸ್ಕಾಂ ಅಧಿಕಾರಿಗಳು ರೈತರಿಂದ 30ರಿಂದ 50 ಸಾವಿರ ಲಂಚ ಪಡೆಯುತ್ತಾರೆ. ಶಾಸಕರು, ಸಚಿವರು ಹೇಳಿದರೆ 10 ದಿನವಾದರೂ ಟಿಸಿ ಬರಲ್ಲ. ಅದೇ ರೈತರು ನೇರವಾಗಿ ಹಣ ಕೊಟ್ಟರೆ ಟಿಸಿ ಕೊಡುತ್ತಾರೆ ಎಂದು ಸಕ್ಕರೆ ಸಚಿವ ಆರ್‌.ಬಿ. ತಿಮ್ಮಾಪುರ ಆರೋಪಿಸಿದರು.

ಇದಕ್ಕೆ ಜಮಖಂಡಿ ಶಾಸಕ ಆನಂದ ನ್ಯಾಮಗೌಡ, ತೇರದಾಳ ಶಾಸಕ ಸಿದ್ದು ಸವದಿ ಕೂಡ ಧ್ವನಿಗೂಡಿಸಿದರು. ಚಿಮ್ಮಡದ ಸುಟ್ಟ ಟಿಸಿ ಬದಲಿಸಿಕೊಡಲು ಎಷ್ಟು ದಿನ ಬೇಕಾಯಿತು. ಎಷ್ಟು ಹಣ ಕೊಟ್ಟಾಗ ಟಿಸಿ ಕೊಟ್ಟರೂ ನೀವೇ ಹೇಳಿ ಎಂದು ಸಿದ್ದು ಸವದಿ ಹೆಸ್ಕಾಂ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರ ಮಾತು ಆಲಿಸಿದ ಸಿದ್ದರಾಮಯ್ಯ, ಹೆಸ್ಕಾಂ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ಕುಡಿಯುವ ನೀರಿಗೆ ಸಂಬಂಧಿಸಿದ ಟಿಸಿ ತಕ್ಷಣ ಬದಲಿಸಬೇಕು. ರೈತರ ಟಿಸಿಗಳಿದ್ದಲ್ಲಿ ಲಂಚ ಪಡೆಯದೇ ಬದಲಿಸಿಕೊಡಬೇಕು ಎಂದು ತಿಳಿಸಿದರು. ಹೆಸ್ಕಾಂ ಎಸ್‌ಇ ಹಿರೇಮಠ, ಲಂಚ ಪಡೆದು ಟಿಸಿ ಬದಲಿಸುವ ಪದ್ಧತಿ ಇಲ್ಲ. ಈಗ ಪಾರದರ್ಶಕ ಹಾಗೂ ಕಟ್ಟುನಿಟ್ಟಾಗಿ ಆಡಳಿತ ನಡೆದಿದೆ ಎಂದು ಉತ್ತರಿಸಿದರು.

ಹೆಸ್ಕಾಂ ಅಧಿಕಾರಿಯ ಈ ಹೇಳಿಕೆಗೆ ಮತ್ತಷ್ಟು ಗರಂ ಆದ ಸಿದ್ದು, ಲಂಚ ಪಡೆದು ಟಿಸಿ ಕೊಟ್ಟಿದ್ದರೆ, ನೀನು ರಾಜೀನಾಮೆ ಕೊಡ್ತಿಯಾ ಎಂದು ಪ್ರಶ್ನಿಸಿದರು.

ಭೂ ಬ್ಯಾಂಕ್‌ ಸ್ಥಾಪಿಸಿ: ಜಿಲ್ಲೆಯಲ್ಲಿ ವಿದ್ಯುತ್‌ ವಿತರಣೆ ಕೇಂದ್ರ, ವಸತಿ ನಿಲಯ, ಅಂಗನವಾಡಿ ಹೀಗೆ ವಿವಿಧ ಹೊಸ ಯೋಜನೆಗಳಿಗೆ ಭೂಮಿ ದೊರೆಯುತ್ತಿಲ್ಲ. ಇದರಿಂದ ಯೋಜನೆ ವಿಳಂಬವಾಗುತ್ತಿವೆ. ಹೀಗಾಗಿ ನಾನು ಸಿಎಂ ಆಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ಭೂ ಬ್ಯಾಂಕ್‌ ರಚಿಸಲು ಸೂಚಿಸಿದ್ದೆ. ಈಗ ಜಿಲ್ಲೆಯ ಎಲ್ಲ ತಾಲೂಕು ಮಟ್ಟದಲ್ಲಿ ಸರ್ಕಾರಿ ಭೂಮಿ ಎಷ್ಟಿದೆ, ಒತ್ತುವರಿಯಾದ ಭೂಮಿ ಎಷ್ಟು, ಯಾವ ಹಂತದಲ್ಲಿದೆ ಎಂಬುದು ಸಮೀಕ್ಷೆ ಮಾಡಿ, ಸರ್ಕಾರಿ ಭೂಮಿ ಗುರುತಿಸಿ, ಭೂ ಬ್ಯಾಂಕ್‌ ಸ್ಥಾಪಿಸಬೇಕು. ಅಗತ್ಯ ಯೋಜನೆಗಳಿಗೆ ಆ ಭೂಮಿ ಹಂಚಿಕೆ ಮಾಡಬೇಕು ಎಂದು ತಿಳಿಸಿದರು.

ಹೆರಕಲ್ ಯೋಜನೆ; ಜಂಟಿ ಪರಿಶೀಲನೆ: ಹೆರಕಲ್ ಬಳಿಯ ಘಟಪ್ರಭಾ ನದಿಯಿಂದ ಬಾಗಲಕೋಟೆಗೆ ಶಾಶ್ವತ ಕುಡಿಯುವ ನೀರು ಪೂರೈಕೆಯ 72 ಕೋಟಿ ಯೋಜನೆ ವಿಳಂಬ ಕುರಿತು ಕೆಡಿಪಿ ಸಭೆಯಲ್ಲಿ ಬಿಸಿ ಬಿಸಿ ಚರ್ಚೆಯಾಯಿತು. ಬಿಟಿಡಿಎ ಮತ್ತು ಅರಣ್ಯ ಅಧಿಕಾರಿಗಳನ್ನು ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ನಿರಾಣಿ ತರಾಟೆಗೆ ತೆಗೆದುಕೊಂಡರು.

2014ರಿಂದ ಆರಂಭಗೊಂಡ ಯೋಜನೆ ಇನ್ನೂ ಮುಗಿದಿಲ್ಲ. ಬಿಟಿಡಿಎ ಅಧಿಕಾರಿಗಳು, ಅರಣ್ಯ ಇಲಾಖೆ ಅನುಮತಿ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಇಲ್ಲಿನ ಅಧಿಕಾರಿಗಳಲ್ಲಿ ಸಮನ್ವಯತೆ ಇಲ್ಲ. ಪರಸ್ಪರ ಒಬ್ಬರಿಗೊಬ್ಬರು ಭೇಟಿಯಾಗಿ ಮಾತನಾಡುವುದೇ ಪ್ರತಿಷ್ಠೆ ಮಾಡಿಕೊಂಡಿದ್ದಾರೆ. ಎಲ್ಲ ಇಲಾಖೆಯ ಅಧಿಕಾರಿಗಳಲ್ಲಿ ಸಮನ್ವಯತೆ ಇರಬೇಕು. ಡಿಸಿ, ಸಿಇಒ ಇದನ್ನು ಮಾಡಬೇಕು ಎಂದು ಸೂಚಿಸಿದರು.

ಹೆರಕಲ್ ಯೋಜನೆ ಕುರಿತು ಜನಪ್ರತಿನಿಧಿಗಳು, ಬಿಟಿಡಿಎ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆಗೆ ಜು. 6ರಂದು ದಿನ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.