![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 15, 2019, 2:10 PM IST
ಜಮಖಂಡಿ: ಮುಧೋಳ, ಬೀಳಗಿ ಮತ್ತು ಜಮಖಂಡಿ ತಾಲೂಕಿನಲ್ಲಿ ಮುಂಗಾರು ಬಿತ್ತನೆಗೆ ಚಾಲನೆ ನೀಡಿರುವ ರೈತ ಸಮೂಹ.
ಜಮಖಂಡಿ: ಸತತ ಸುರಿಯುತ್ತಿರುವ ಮಳೆಯಿಂದ ಮುಂಗಾರು ಬಿತ್ತನೆಗೆ ರೈತರು ಅಣಿಯಾಗಿದ್ದು, ಭೂಮಿ ಹದಗೊಳಿಸಿ ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ರೈತರ ಅಗತ್ಯಗನುಗುಣವಾಗಿ ಕೃಷಿ ಇಲಾಖೆ ಅಗತ್ಯ ಬೀಜ, ರಸಗೊಬ್ಬರ ವಿತರಣೆ ಸಿದ್ಧತೆ ನಡೆಸಿದೆ.
ಪ್ರಸಕ್ತ ಹಂಗಾಮಿನಲ್ಲಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಿತ್ತನೆ ಬೀಜ ವಿತರಣೆಗೆ ಸಿದ್ಧಗೊಂಡಿದ್ದು, ಸಜ್ಜೆ, ಜೋಳ, ಮೆಕ್ಕೆಜೋಳ, ನವಣೆ, ಸಾಮೆ, ತೊಗರಿ, ಹೆಸರು, ಉದ್ದು, ಶೇಂಗಾ ಮತ್ತು ಸೂರ್ಯಕಾಂತಿ ಬೀಜಗಳನ್ನು ವಿತರಿಸಲಿದೆ. ಎಲ್ಲ ವರ್ಗದ ರೈತರಿಗೆ ಗರಿಷ್ಠ 2 ಹೆಕ್ಟೆರ್ ಅಥವಾ ಅವರ ಹಿಡುವಳಿ ವಿಸ್ತೀರ್ಣಕ್ಕೆ ಸೀಮಿತಗೊಳಿಸಿ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಸಾಮಾನ್ಯ ರೈತರಿಗೆ ಶೇ. 50ರಷ್ಟು ಸಹಾಯಧನದಲ್ಲಿ ವಿತರಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ ಶೇ. 75ರ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ ನಡೆಯುತ್ತಿದೆ.
ಜಮಖಂಡಿ, ತೇರದಾಳ ಮತ್ತು ಸಾವಳಗಿ ರೈತ ಸಂಪರ್ಕ ಕೇಂದ್ರಗಳಲ್ಲದೆ, ಹೆಚ್ಚುವರಿ ಬೀಜ ಮಾರಾಟ ಕೇಂದ್ರಗಳಾದ ತೇರದಾಳ ರೈತ ಸಂಪರ್ಕ ಕೇಂದ್ರದ ಹೆಚ್ಚುವರಿ ಶಾಖೆಗಳಾದ ಜಮಖಂಡಿ, ಚಿಕ್ಕಲಕಿಕ್ರಾಸ್, ಗೋಠೆ ಕೇಂದ್ರಗಳಲ್ಲಿ ಬೀಜ ವಿತರಣೆ ವ್ಯವಸ್ಥೆ ಮಾಡಲಾಗಿದೆ. ಮುಧೋಳ ತಾಲೂಕಿನಲ್ಲಿ ಹೆಚ್ಚುವರಿಯಾಗಿ ಬೆಳಗಲಿ, ಮಹಾಲಿಂಗಪುರ, ಲೋಕಾಪುರ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಬೀಳಗಿ ತಾಲೂಕಿನ ರೈತ ಸಂಪರ್ಕ ಕೇಂದ್ರ, ಅನಗವಾಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.