ಪಪಂ ಆಗಿ ವರ್ಷವಾದ್ರೂ ಇನ್ನೂ ನಡೆಯದ ಚುನಾವಣೆ
Team Udayavani, May 21, 2022, 6:04 PM IST
ಶಿರೂರ: ಶಿರೂರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿ ಒಂದು ವರ್ಷ ಗತಿಸಿದರೂ ಇನ್ನೂ ಚುನಾವಣೆ ನಡೆದಿಲ್ಲ. ಪಪಂ ಸದಸ್ಯರಾಗಬೇಕೆಂಬ ಕನಸು ಕಾಣುತ್ತಿರುವ ಆಕಾಂಕ್ಷಿ ಯುವಕರು ಚುನಾವಣೆ ಯಾವಾಗ ನಡೆಯುತ್ತದೆ ಎಂಬುದನ್ನು ಕಾಯುತ್ತಿದ್ದಾರೆ.
ಶಾಸಕ ಡಾ|ವೀರಣ್ಣ ಚರಂತಿಮಠ ಅವರು ತಮ್ಮ ಕ್ಷೇತ್ರದಲ್ಲಿ ಬರುವ ಶಿರೂರನ್ನು ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸರಕಾರದ ಮೇಲೆ ಒತ್ತಡ ಹಾಕಿದ್ದರು. ಪರಿಣಾಮ 2021 ಏಪ್ರಿಲ್ 21ರಂದು ಶಿರೂರ, ನೀಲಾನಗರ, ಗುಂಡನಪಲ್ಲೆ ಗ್ರಾಮಗಳು ಸೇರಿ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೇರಿ ಕಾರ್ಯ ನಿರ್ವಹಿಸುತ್ತಿದೆ. ಆದರೆ ಚುನಾವಣೆ ಇಲ್ಲದ ಕಾರಣ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಚರ್ಚೆಗೆ ಕಾರಣವಾಗಿದೆ.
ಅಧಿಕಾರಿಗಳಿಂದ ಆಡಳಿತ: ಜನಪ್ರತಿನಿಧಿಗಳು ಇಲ್ಲದಿದ್ದರೂ ಅಧಿಕಾರಿಗಳ ನೇತೃತ್ವದಲ್ಲಿ ಆಡಳಿತ ನಡೆಯುತ್ತಿದೆ. ಪಟ್ಟಣದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಆಡಳಿತ ನಡೆಯುತ್ತಿದೆ.
ವಾರ್ಡ್ ವಿಂಗಡನೆ: ಕಳೆದ ನಾಲ್ಕು ತಿಂಗಳಿಂದಲೇ ಪಪಂ ವಾರ್ಡ್ ವಿಂಗಡಣೆ ಮಾಡಲಾಗಿದ್ದು, ಶಿರೂರಲ್ಲಿ 12, ನೀಲಾನಗರದಲ್ಲಿ 04, ಗುಂಡನಪಲ್ಲೆ ಗ್ರಾಮದಲ್ಲಿ 01 ಸೇರಿ ಒಟ್ಟು 17 ವಾರ್ಡ್‌ಗಳನ್ನು ವಿಂಗಡಣೆ ಮಾಡಲಾಗಿದೆ. ಈಗಾಗಲೇ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಪಟ್ಟಣದಲ್ಲಿ ಸಂಚರಿಸಿ ನಿಯಮಾನುಸಾರವಾಗಿ ವಾರ್ಡ್‌ಗಳನ್ನು ಪರಿಶೀಲಿಸಿದ್ದಾರೆ.
ತಕರಾರು ಅರ್ಜಿ ಸಲ್ಲಿಕೆ: ಶಿರೂರ ಪಪಂ ವ್ಯಾಪ್ತಿಗೆ ಬರುವ ನೀಲಾನಗರ ಬಂಜಾರಾ ಸಮಾಜದವರು ನೀಲಾನಗರ ಗ್ರಾಮವನ್ನು ಶಿರೂರ ಪಪಂಗೆ ಸೇರಿಸಬಾರದು. ಇದರಿಂದ ಶಾಲಾ ಮಕ್ಕಳಿಗೆ ಗ್ರಾಮೀಣ ಅಂಕ ಇತ್ಯಾದಿ ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹೀಗಾಗಿ ಗ್ರಾಮ ಪಂಚಾಯಿತಿಯೇ ಇರಲಿ ಎಂದು ಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದಾರೆ.
2011ರ ಜನಗಣತಿಯ ಬ್ಲಾಕ್‌ಗಳ ಆಧಾರಿತ ಮೇಲೆ ರಚಿಸಿದ 17 ವಾರ್ಡ್‌ಗಳನ್ನು ಉಪ ವಿಭಾಗಾಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಲು ಪ್ರಸ್ತಾಪಿಸಿದ್ದೆವು. ಅದರ ಪ್ರಕಾರ ಉಪವಿಭಾಗಾಕಾರಿಗಳಾದ ಶ್ವೇತಾ ಬೀಡಿಕರ್ ಅವರು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿ ಯಾವುದೇ ವ್ಯಕ್ತಿಗಳು ಆಕ್ಷೇಪಣೆ- ಸಲಹೆಗಳನ್ನು ಪ್ರಕಟಣೆಗೊಂಡ 15 ದಿನಗಳೊಳಗೆ ಸಲ್ಲಿಸಲು ಸೂಚಿಸಿದ್ದಾರೆ. ಈ ಪ್ರಕ್ರಿಯೆ ಮುಗಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಐ.ಜಿ ಕೊಣ್ಣೂರ, ಪಪಂ ಅಧಿಕಾರಿ, ಶಿರೂರ.
ಪಟ್ಟಣ ಅಭಿವೃದ್ಧಿಗೆ ಜನಪ್ರತಿನಿಧಿಗಳ ಸಹಕಾರ ಅಗತ್ಯವಿದ್ದು, ಸರಕಾರ ಕಾನೂನು ತೊಡಕುಗಳನ್ನು ಸರಿಪಡಿಸಿ ಕೂಡಲೇ ಚುನಾವಣೆ ಘೋಷಿಸಬೇಕು. –ಕಲ್ಲಪ್ಪ ಭಗವತಿ, ಶಿರೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.