ಅಂಗನವಾಡಿ ಬಲವರ್ಧನೆಗೆ ಆನಂದಿಬೆನ್ ಸಲಹೆ
ಸಾನಿಧ್ಯ ವಹಿಸಿದ್ದ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀ ಆಶೀರ್ವಚನ ನೀಡಿದರು.
Team Udayavani, Mar 1, 2022, 5:18 PM IST
ಬಾಗಲಕೋಟೆ: ದೇಶದ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲು ಅಂಗನವಾಡಿ ಕೇಂದ್ರಗಳನ್ನು ಬದಲವರ್ಧನೆಗೊಳಿಸಬೇಕು. ಆಗ ಶಿಕ್ಷಣದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ. ಈ ನಿಟ್ಟಿನಲ್ಲಿ ಉತ್ತರಪ್ರದೇಶದಲ್ಲಿ ಪ್ರಯೋಗ ಮಾಡಲಾಗುತ್ತಿದೆ ಎಂದು ಉತ್ತರಪ್ರದೇಶ ರಾಜ್ಯಪಾಲರೂ ಆದ ಗುಜರಾತನ ಮಾಜಿ ಸಿಎಂ ಆನಂದಿಬೆನ್ ಪಟೇಲ್ ಹೇಳಿದರು.
ನಗರದಲ್ಲಿ ಸೋಮವಾರ ತೇಜಸ್ ಅಂತಾರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಬೇಧ-ಭಾವ ಇರಬಾರದು. ಪುರುಷ-ಮಹಿಳೆ, ಬಡವ-ಶ್ರೀಮಂತ ಎಂಬ ತಾರತಮ್ಯದಿಂದ ಈ ಮೂರು ಕ್ಷೇತ್ರಗಳು ಶ್ರೀಮಂತಗೊಳ್ಳುತ್ತಿಲ್ಲ. ಬಡ ಮಕ್ಕಳೇ ಮೊಟ್ಟ ಮೊದಲು ಶಿಕ್ಷಣ ಪಡೆಯುವ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ಖಾಸಗಿ ಸಂಘ-ಸಂಸ್ಥೆಗಳು, ದಾನಿಗಳು ಕೈಜೋಡಿಸಬೇಕು ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಂಗನವಾಡಿ ಕೇಂದ್ರಗಳಿಗೆ ಕಾಯಕಲ್ಪ ಸಿಗಬೇಕು. ಮಧ್ಯಮ, ಶ್ರೀಮಂತರ ಮಕ್ಕಳಿಗೆ ಉನ್ನತ ಶಿಕ್ಷಣ ದೊರೆಯುತ್ತದೆ. ಅಂಗನವಾಡಿ ಕೇಂದ್ರಗಳಲ್ಲಿ ಓದುವ ಬಡ ಮಕ್ಕಳು ಯಾವುದೇ ಸೌಲಭ್ಯದಿಂದ ವಂಚಿತರಾಗಬಾರದು. ಉತ್ತರಪ್ರದೇಶದಲ್ಲಿ ಎರಡು ಲಕ್ಷ ಅಂಗನವಾಡಿ ಕೇಂದ್ರಗಳಿವೆ. ಅಲ್ಲಿನ ರಾಜ್ಯಪಾಲೆಯಾಗಿ ನೇಮಕಗೊಂಡ ಬಳಿಕ ಪ್ರತಿಯೊಂದು ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕಟ್ಟಡ, ಅಡುಗೆ ಸಾಮಗ್ರಿ, ಮಕ್ಕಳಿಗೆ ಊಟದ ಸಾಮಗ್ರಿ, ಆಟಿಕೆ ವಸ್ತುಗಳು ಹೀಗೆ ಹಲವು ವಸ್ತುಗಳನ್ನು ದಾನಿಗಳಿಂದ ನೆರವಿನಿಂದ ಕಲ್ಪಿಸಲಾಗಿದೆ ಎಂದರು.
ಶ್ರೀಮಂತ ವ್ಯಕ್ತಿಗಳು, ಅಂಗನವಾಡಿ ಕೇಂದ್ರಗಳನ್ನು ದತ್ತು ಪಡೆಯಬೇಕು. ದೇಶದಲ್ಲಿ ಬಡವ-ಶ್ರೀಮಂತ ಎನ್ನದೇ ಏಕರೂಪದ ಶಿಕ್ಷಣ ದೊರೆಯಬೇಕು. ಹಾರ ತುರಾಯಿ ಬದಲು, ಶಿಕ್ಷಣಕ್ಕೆ ಆ ವೆಚ್ಚದ ಹಣ ಬಳಸಬೇಕು ಎಂದು ಸಲಹೆ ನೀಡಿದರು. ಗುಜರಾತದಲ್ಲಿ ಭರತ ಪಟೇಲ್ ಎಂಬುವವರು ಅಲ್ಲಿನ 400 ಹಳ್ಳಿಗಳಲ್ಲಿ ಜಾನುವಾರುಗಳ ಸೆಗಣಿಯಿಂದ ಗ್ಯಾಸ್ ಉತ್ಪಾದನೆ ಮಾಡುತ್ತಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ನಿರಾಣಿ ಉದ್ಯಮ ಸಮೂಹದಿಂದ ಕಬ್ಬು ನುರಿಸುವ ಜತೆಗೆ 12 ವಿವಿಧ ಉಪಉತ್ಪನ್ನ ಉತ್ಪಾದಿಸುತ್ತಿರುವುದು ಹೆಮ್ಮೆಯ ಸಂಗತಿ. ಅಲ್ಲದೇ ನಿರಾಣಿ ಸಮೂಹದವರು ತ್ಯಾಜ್ಯವನ್ನೂ ಮರು ಬಳಕೆ ಮಾಡುವ ತಂತ್ರಜ್ಞಾನ ಅಳವಡಿಸಿಕೊಂಡಿರುವುದು ಇನ್ನೂ ಹೊಸತನ ಎಂದು ಶ್ಲಾ ಸಿದರು. ವಿದ್ಯಾರ್ಜನೆಯ ಜತೆಗೆ ದೇಶದ, ರಾಜ್ಯದ ಸಂಸ್ಕೃತಿ, ಪರಂಪರೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮಿಕೊಳ್ಳುವ ಅಗತ್ಯವಿದೆ ಎಂದರು.
ಗಂಡು, ಹೆಣ್ಣು ಬೇಧವಿಲ್ಲದೇ ಶಿಕ್ಷಣ, ಜೊತೆಗೆ ಸಂಸ್ಕೃತಿ, ಆರೋಗ್ಯ ಎಲ್ಲರಿಗೂ ಸಮಾನವಾಗಿ ದೊರೆಯಬೇಕಿದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಹೆಚ್ಚು ಶಿಕ್ಷಣ ನೀಡುವ ಅಗತ್ಯವಿದ್ದು, ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿಗಳು ಹೆಚ್ಚು ಅಭಿವೃದ್ಧಿಗೊಳ್ಳಬೇಕಿದೆ ಎಂದರು. ಗ್ರಾಮೀಣ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚು ಕಂಡುಬರುತ್ತಿದೆ. ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಉದ್ದೇಶದಿಂದ ಕನಿಷ್ಠ 6 ತಿಂಗಳಿಗೆ ಒಮ್ಮೆ ಪ್ರವಾಸಿ ತಾಣ, ನಿಸರ್ಗ ಪರಿಸರದೆಡೆಗೆ ಕೊಂಡೊಯ್ಯುವುದರಿಂದ ಮಕ್ಕಳಲ್ಲಿ ಮನೋವಿಕಾಸ ವೃದ್ಧಿಯಾಗುತ್ತದೆ. ಭಾರತದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪದ್ದತಿ ಹೇಗಿರಬೇಕು ಎಂಬುದಕ್ಕೆ ಬೆಂಗಳೂರಿನ ಕಾರ್ಯಕ್ರಮ ಒಂದು ನಿದರ್ಶನವಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹೇಗೆ ಬೆಳೆಯಬೇಕು, ಯುವ ಪೀಳಿಗೆ ಮುಂದೆ ಹೇಗೆ ಅಭಿವೃದ್ಧಿ ಹೊಂದಬೇಕು. ರೈತರ ಅಭಿವೃದ್ಧಿಯ ಬಗ್ಗೆ ಪ್ರಧಾನಮಂತ್ರಿಗಳು ಅನೇಕ ಯೋಜನೆ ರೂಪಿಸುತ್ತಿದ್ದಾರೆ ಎಂದರು.
ನಿರಾಣಿ ಗ್ರೂಪ್ ಆಫ್ ಇಂಡಸ್ಟ್ರೀಸ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ಸಕ್ಕರೆ ಕಾರ್ಖಾನೆಗಳು ಇಡೀ ರಾಷ್ಟ್ರದಲ್ಲಿಯೇ ಹೆಚ್ಚಿನ ಖ್ಯಾತಿ ಪಡೆದಿವೆ. ಸಕ್ಕರೆ ಕಾರ್ಖಾನೆಗಳ ಇತರೆ ಉತ್ಪನ್ನಗಳು ಸಹ ಹೊಸ ಹೊಸ ಪದ್ದತಿ ಅಳವಡಿಸಿರುವುದು ಶ್ಲಾಘನೀಯ ವಿಷಯವಾಗಿದೆ. ಸಕ್ಕರೆಯ ಜತೆಗೆ ಎಥೆನಾಲ್, ಸಿಎನ್‌ಜಿ ಸೇರಿದಂತೆ 12 ಸಹ ಉತ್ಪಾದನೆಗಳನ್ನು ತಯಾರಿಸುತ್ತಿದ್ದಾರೆ. ಇಂಥ ಉತ್ಪಾದನೆಗಳ ಬಗ್ಗೆ ಇನ್ನು ಹೆಚ್ಚಿನ ಸಂಶೋಧನೆಗಳು ಆಗಬೇಕು. ಸಗಣಿಯ ಉಪಯೋಗ ಹೆಚ್ಚಾಗಬೇಕಿದೆ.
ಸಗಣಿಯಿಂದ ಅನೇಕ ಉತ್ಪನ್ನಗಳನ್ನು ತಯಾರಿಕೆಯಿಂದ ಆರ್ಥಿಕ ಅಭಿವೃದ್ಧಿ ಆಗುತ್ತದೆ ಎಂದು ತಿಳಿಸಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಾತನಾಡಿ, ಶಿಕ್ಷಕಿಯಾಗಿ ಶಿಕ್ಷಣದ ಗುಣಮಟ್ಟ, ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ಈಗ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಮಾತೃ ಸ್ವರೂಪಿಣಿ ಆನಂದಿಬೆನ್ ಪಟೇಲ್ ಓರ್ವ ಪರಿಪೂರ್ಣ ಮಹಿಳೆಯಾಗಿದ್ದು ಮಾದರಿಯಾಗಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅನುಭವ ಹೊಂದಿರುವ ಆನಂದಿಬೆನ್ ಅವರು ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂಬ ಕನಸು ಹೊತ್ತಿದವರಾಗಿದ್ದಾರೆ ಎಂದು ಹೇಳಿದರು. ಅವರ ಆಗಮದಿಂದ ಜಿಲ್ಲೆಯ ಮಹಿಳೆಯರ, ಮಕ್ಕಳ ಸ್ಫೂರ್ತಿ ತುಂಬಲೆಂಬ ದೃಷ್ಟಿಯಿಂದ ಜಿಲ್ಲೆಗೆ ಕರೆತರಲಾಗಿದ್ದು, ಅವರ ಪ್ರೇರಣೆಯಿಂದ ಮುಂದಿನ ದಿನಗಳಲ್ಲಿ ನಿರಾಣಿ ಉದ್ಯಮ ಸಮೂಹದಿಂದ ಒಂದು ಕಾರ್ಖಾನೆಯಿಂದ ಪ್ರಾರಂಭಗೊಂಡ ಉದ್ಯಮ 100 ಕಾರ್ಖಾನೆ ಸ್ಥಾಪಿಸುವತ್ತ ಮುನ್ನಡೆಸಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯನ್ನು ಮೈಸೂರು ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ದಾವಣಗೆರೆ ಸಂಸದ ಸಿದ್ದೇಶ್ವರ ಮಾತನಾಡಿ, ಕೇವಲ ಒಂದು ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಮೂಲಕ ಪ್ರಾರಂಭದಲ್ಲಿ 500ರಿಂದ ಇಂದು ಲಕ್ಷಾಂತರ ಟನ್
ಕಬ್ಬು ನುರಿಸುತ್ತಿದ್ದಾರೆ. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಎಥನಾಲ್ ಉತ್ಪಾ ಸುವ ಮೂಲಕ ಏಶಿಯಾ ಖಂಡದಲ್ಲಿಯೇ ಹೆಗ್ಗಳಿಕೆಗೆ ಪಾತ್ರವಾಗಿದೆ. ಆತ್ಮ ನಿರ್ಭರ ಭಾರತ ಯೋಜನೆಗೆ ಅಪಾರ ಕೊಡುವ ನೀಡಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳನ್ನು ಸಹ ಮಾಡಿದ್ದಾರೆ. ಇದಕ್ಕೆ ಅವರ ಕುಟುಂಬದ ಎಲ್ಲ ಸದಸ್ಯರು ಸಾಥ್ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಸಾನಿಧ್ಯ ವಹಿಸಿದ್ದ ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ತೇಜಸ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಪ್ರಕಾಶ ತಪಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಹನಮಂತ ನಿರಾಣಿ, ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ಎಂ.ಕೆ. ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತ, ನಾರಾಯಣಸಾ ಭಾಂಡಗೆ, ಮುಖಂಡ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ, ವಿಜಯ ನಿರಾಣಿ, ತೇಜಸ್ ಅಂತಾರಾಷ್ಟ್ರೀಯ ಶಾಲೆಯ ಅಧ್ಯಕ್ಷೆ ಮಾಧುರಿ ಮುಧೋಳ, ತೇಜಸ್ ಪಿಯು ಕಾಲೇಜು ಪ್ರಾಂಶುಪಾಲೆ ಮೃಣಾಲಿ ಚೌಧರಿ, ಅನಾರಿಬೇನ್, ಶಹ, ಭಗವಾನದಾಸ್ ಜಾಜು, ಶ್ರೀರಂಗ ಖಾಸನಿಸ್ ಉಪಸ್ಥಿತರಿದ್ದರು.
ಜಿಲ್ಲೆಯ ಮಹಿಳೆಯರು, ಹೆಣ್ಣು ಮಕ್ಕಳಿಗೆ ಶಿಕ್ಷಣದ ಜತೆಗೆ ಸರ್ವ ರಂಗದಲ್ಲೂ ಸಾಧಿಸುವ ಛಲ ಮೂಡಬೇಕು. ಆ ಪ್ರೇರಣೆ ಉತ್ತರಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರಿಂದ ದೊರೆಯಲಿದೆ ಎಂಬ ವಿಶ್ವಾಸದಿಂದಲೇ ಇಂದಿನ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲಾಗಿದೆ. ಮುಧೋಳದಲ್ಲಿ ಸಣ್ಣ ಒಂದು ಕಾರ್ಖಾನೆಯಿಂದ ಆರಂಭಗೊಂಡ ಉದ್ಯಮ ಸಮೂಹ ಇಂದು ಏಳಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆ ನಡೆಸುತ್ತಿದೆ. ರಾಜ್ಯಾದ್ಯಂತ 100 ಕಾರ್ಖಾನೆ ಆರಂಭಿಸುವ ಆಶಯವಿದೆ.
ಮುರುಗೇಶ ನಿರಾಣಿ, ಬೃಹತ್ ಮತ್ತು
ಮಧ್ಯಮ ಕೈಗಾರಿಕೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.