ಜಿಲ್ಲಾದ್ಯಂತ ಆರಂಭಗೊಂಡ ಅಂಗನವಾಡಿ
ಆರೋಗ್ಯ ತಪಾಸಣೆ, ಪೌಷ್ಟಿಕ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
Team Udayavani, Nov 9, 2021, 6:35 PM IST
ಬಾಗಲಕೋಟೆ: ಸರಕಾರದ ಆದೇಶದನ್ವಯ ಜಿಲ್ಲೆಯಾದ್ಯಂತ ಸೋಮವಾರ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು, ತಾಲೂಕಿನ ಮುರನಾಳ ಆರ್.ಸಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿಪಂ ಸಿಇಒ ಟಿ.ಭೂಬಾಲನ್ ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡರು.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ಬಳಿಕ ಅಂಗನವಾಡಿ ಶಾಲೆಗಳು ಸೋಮವಾರದಿಂದ ಪುನಃ ಆರಂಭಗೊಂಡಿದ್ದು, ಅಂಗನವಾಡಿ ಸಿಬ್ಬಂದಿ ಶಾಲೆಗೆ ಆಗಮಿಸಿದ ಮಕ್ಕಳ ಮೇಲೆ ಪುಷ್ಪವೃಷ್ಟಿಗೈದು ಅದ್ಧೂರಿಯಿಂದ ಬರಮಾಡಿಕೊಳ್ಳಲಾಯಿತು. ಶಾಲೆಗೆ ಆಗಮಿಸಿದ ಮಕ್ಕಳಿಗೆ ಜಿಪಂ ಸಿಇಒ ಹೂ ನೀಡುವುದರ ಜತೆಗೆ ಪೆನ್ಸಿಲ್ ಕೂಡಾ ವಿತರಿಸಿದರು. ಸಮವಸ್ತ್ರದೊಂದಿಗೆ ಮಕ್ಕಳ ಖುಷಿಯಿಂದ ಶಾಲೆಗೆ ಆಗಮಿಸಿದ್ದರು.
ನಂತರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಒ ಟಿ.ಭೂಬಾಲನ್, ಆರಂಭಿಕ ಹಂತದಲ್ಲಿ ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಅಗತ್ಯವಾಗಿದ್ದು, ಸರಕಾರ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಉತ್ತಮ ಬೆಳವಣಿಗೆ ಕಾಣಲು ಸಾಧ್ಯವಾಗುತ್ತದೆ.
ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಸರಕಾರ ಒದಗಿಸಿದ ಆಹಾರಧಾನ್ಯ ವಿತರಣೆಯಲ್ಲಿ ಯಾವುದೇ ವ್ಯತ್ಯಾಸವಾಗಬಾರದು ಎಂದು ತಿಳಿಸಿದರು. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪಾಲನೆಯಾಗಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ನಿಗಾ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ
ಶೇಂಗಾ ಉಂಡೆ ಮತ್ತು ಬೇಯಿಸಿದ ತತ್ತಿಯನ್ನು ನೀಡಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ ಮಾತನಾಡಿ, ಮಕ್ಕಳ ಮತ್ತು ತಾಯಂದಿರ ಮರಣ ಕಡಿಮೆಗೊಳಿಸುವುದು, ವಿವಿಧ ಇಲಾಖೆಯ ಸಹಕಾರದಿಂದ ಅಂಗನವಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಹಕಾರಿಯಾಗುವಂತಹ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು ಎಂದರು. ಆರೋಗ್ಯ ತಪಾಸಣೆ, ಪೌಷ್ಟಿಕ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸರಕಾರ ಯೋಜನೆಗಳು ಯಶಸ್ವಿಗೆ ಎಲ್ಲ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿರೂಪನಾಧಿಕಾರಿ ರಮೇಶ ಸೂಳಿಕೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ, ಪಿಡಿಒ ಮಹಾಂತೇಶ ನಾಲತ್ವಾಡ ಉಪಸ್ಥಿತರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.