ಅತಿಥಿ ಉಪನ್ಯಾಸಕ ಹಾಗೂ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ: ಹಣಮಂತ ನಿರಾಣಿ ಆಗ್ರಹ
Team Udayavani, May 20, 2021, 12:46 PM IST
ಬನಹಟ್ಟಿ : ಶಿಕ್ಷಣ ಇಲಾಖೆಯಲ್ಲಿನ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಯಲ್ಲಿ ಕೆಲಸ ಮಾಡುವ ಅತಿಥಿ ಉಪನ್ಯಾಸಕರು, ಶಿಕ್ಷಕರಿಗೆ ಕೋವಿಡ್‌ನಿಂದಾಗಿ ಸಾಕಷ್ಟು ತೊಂದರೆ ಇದ್ದು, ಆರ್ಥಿಕ ಭದ್ರತೆ ಇಲ್ಲದ ಕಾರಣ ಅವರಿಗೂ ಕೂಡಾ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಆಗ್ರಹಿಸಿದರು.
ಬನಹಟ್ಟಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯ ಮಂತ್ರಿಗಳು ಎರಡನೇ ಅಲೆಯ ಹಿನ್ನಲೆಯಲ್ಲಿ ವಿಶೇಷ ಪ್ಯಾಕೇಜ್‌ನ್ನು ವಿವಿಧ ಕ್ಷೇತ್ರಗಳಿಗೆ ಹಂಚಿಕೆ ಮಾಡಿದ್ದಾರೆ. ಅದಕ್ಕೆ ಸರಕಾರವನ್ನು ಅಭಿನಂದಿಸುತ್ತೇನೆ. ಶಿಕ್ಷಕರನ್ನು ಕರೋನಾ ವಾರಿಯರ್ಸ್ ಎಂದು ಗುರುತಿಸಬೇಕು ಎಂದು ಮೊದಲನೇ ಅಲೆಯಲ್ಲೂ ಹಾಗೂ ಈಗಲೂ ಕೂಡಾ ಮುಖ್ಯಮಂತ್ರಿಗಳ ಮತ್ತು ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದೆವು. ಅವರು ಇಂದು ಶಿಕ್ಷಕರನ್ನು ಕರೋನಾ ವಾರಿಯರ್ಸ್ ಎಂದು ಘೋಷಿಸಿದ್ದಾರೆ. ಕಾರಣ ಶಿಕ್ಷಕರ ವತಿಯಿಂದ ಹಾಗೂ ಶಿಕ್ಷಕರ ಪ್ರತಿನಿಧಿಯಾಗಿ ಸರಕಾರವನ್ನು ಅಭಿನಂದಿಸುತ್ತೇನೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.