ಮಂದಿರ ಧ್ವಂಸ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ
Team Udayavani, Dec 22, 2019, 11:43 AM IST
ಇಳಕಲ್ಲ: ಬಂಜಾರರ ಆರಾದ್ಯ ದೈವ ಸಂತ ಶ್ರೀ ಸೇವಾಲಾಲ ಮಂದಿರವನ್ನು ಮತ್ತು ಮರಿಯಮ್ಮದೇವಿ ಮಂದಿರವನ್ನು ಧ್ವಂಸ ಮಾಡಿದ ಕಲಬುರಗಿ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್‌ರ ಹೆಸರನ್ನು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಲಂಬಾಣಿ ಸಮಾಜ ಬಾಂಧವರು ಪ್ರತಿಭಟನೆ ನಡೆಸಿದರು.
ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರವಾಸಿ ಮಂದಿರ, ಕನಕದಾಸರ ವೃತ್ತ, ಮಹಾಂತ ಗಂಗೋತ್ರಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತಕ್ಕೆ ಆಗಮಿಸಿ ಅಲ್ಲಿ ಸಾರ್ವಜನಿಕ ಸಭೆಯಾಗಿ ಮಾರ್ಪಟ್ಟಿತ್ತು.ಸೇವಾಲಾಲ ಸಮಾಜದ ಧರ್ಮಗುರುಗಳು ಮಾತನಾಡಿ, ಕಲಬುರಗಿ ಜಿಲ್ಲೆಯ ಮಾದಿಹಾಳತಾಂಡಾದ ಸೇವಾಲಾಲ ಮಂದಿರವನ್ನು ಕಲಬುರಗಿ ವಿಮಾನ ಪ್ರಾಧಿಕಾರ ಧ್ವಂಸ ಮಾಡಿದೆ. ಇದರಿಂದಾಗಿ ರಾಜ್ಯದ ಲಂಬಾಣಿ ಸಮಾಜದವರಿಗೆ ಅನ್ಯಾಯವಾಗಿದ್ದು, ಕೂಡಲೇ ಆ ಮಂದಿರವನ್ನು ಪುನರ್ ನಿರ್ಮಿಸಬೇಕು ಎಂದು ಹೇಳಿದರು. ಜಿಪಂ ಮಾಜಿ ಅಧ್ಯಕ್ಷ ಹನಮಂತಪ್ಪ ರಾಠೊಡ, ಕೃಷ್ಣಾ ರಾಠೊಡ, ಮುತ್ತಣ್ಣ ಜಾಧವ, ವಿಠಲ ಜಾಧವ, ಬಲಕುಂದಿ ಗ್ರಾಪಂ ಅಧ್ಯಕ್ಷ ಶರಣಪ್ಪ ರಾಠೊಡ, ಶರಣಪ್ಪ ಪವಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.