ಸರಳ ಗಣೇಶೋತ್ಸವಕ್ಕೆ ಮನವಿ
Team Udayavani, Aug 26, 2019, 10:05 AM IST
ಬಾಗಲಕೋಟೆ: ಜಿಲ್ಲೆಯ ಲಕ್ಷಾಂತರ ಜನ ಪ್ರವಾಹಕ್ಕೆ ಒಳಗಾಗಿ ಸಂಕಷ್ಟದಲ್ಲಿರುವುದರಿಂದ ಈ ಬಾರಿ ಗಣೇಶೋತ್ಸವ ಹಾಗೂ ಮೊಹರಂ ಹಬ್ಬವನ್ನು ಸರಳವಾಗಿ ಶ್ರದ್ಧಾ-ಭಕ್ತಿ ಪೂರ್ವಕವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮನವಿ ಮಾಡಿದ್ದಾರೆ.
ಜಿಲ್ಲಾಡಳಿತದ ಸಭಾ ಭವನದಲ್ಲಿಂದು ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬಗಳ ಶಾಂತಿಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿಯ ಗಣೇಶೋತ್ಸವ ಸರಳವಾಗಿ ಆಚರಿಸಿ ನೊಂದ ಜೀವಿಗಳಿಗೆ ಸಹಾಯಹಸ್ತ ನೀಡುವಂತೆ ವಿನಂತಿಸಿದರು. ವಾಯು ಮಾಲಿನ್ಯ ತಡೆಗೆ ಪಿಒಪಿ ಗಣಪತಿ ಬಳಸದೇ ಕೇವಲ ಮಣ್ಣಿನ ಗಣೇಶ ಮೂರ್ತಿಗಳನ್ನು ಪೂಜಿಸಬೇಕು ಎಂದು ತಿಳಿಸಿದರು.
ಸ್ವಚ್ಛತೆ ಹಾಗೂ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ತಡೆಯಲು ಪಟಾಕಿ ಹಾಗೂ ಕರ್ಕಶ ಧ್ವನಿಯ ಡಿ.ಜೆ ಗಳನ್ನು ಬಳಸಬಾರದು. ಇಡೀ ದೇಶದಲ್ಲಿ ಸ್ವಚ್ಚ ಭಾರತ ಅಭಿಯಾನವು ಚಾಲನೆಯಲ್ಲಿದ್ದು, ಜಿಲ್ಲೆಯ ಸಾರ್ವಜನಿಕರು ಸ್ಚಚ್ಛತೆಯ ಅಭಿಯಾನದಲ್ಲಿ ಕೈ ಜೋಡಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ಗಣೇಶ ಹಾಗೂ ಮೊಹರಂ ಏಕಕಾಲಕ್ಕೆ ಬಂದಿರುವುದರಿಂದ ಶಾಂತಿ, ಸಹಕಾರದಿಂದ ಸೌಹಾರ್ದಯುತವಾಗಿ ಆಚರಿಸಬೇಕೆಂದು.
ಸಿಮೆಂಟ್ ಕ್ವಾರಿ, ಮಹಾ ರುದ್ರಪ್ಪನ ಹಳ್ಳದಲ್ಲಿ ಸಾರ್ವಜನಿಕರು ಗಣೇಶ ಮೂರ್ತಿಯನ್ನು ರಾತ್ರಿ 10ರ ಒಳಗಾಗಿ ವಿಸರ್ಜಿಸಬೇಕು. ಎಲ್ಲೆಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು ಹಾಗೂ ಸಾರ್ವಜನಿಕ ಗಣೇಶೋತ್ಸವವನ್ನು 5 ಮತ್ತು 7 ದಿನಗಳ ಮಾತ್ರ ಆಚರಿಸಲು ಸೂಚಿಸಿದರು.
ರಾಜು ನಾಯ್ಕರ ಮಾತನಾಡಿ, ಮದ್ಯ ಮಾರಾಟ ನಿಷೇಧ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಎಮ್.ಎಸ್.ಆಯ್.ಎಲ್ ತೆರೆದಿರುತ್ತವೆ. ಈ ಬಗ್ಗೆ ಪೊಲೀಸ್ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.
ಎಂ.ಎ. ದಂಡಿಯಾ ಮಾತನಾಡಿ ಮಾತನಾಡಿ. ಸೆ. 5ರಂದು ಹಾಗೂ 10ರಂದು ಮೊಹರಂ ನಿಮಿತ್ತ ನಗರದ ಪಂಖಾ ಮಸೀದಿ ಹತ್ತಿರ ಪಂಜಾಗಳು ಕೂಡುವ ಹಿನ್ನೆಲೆಯಲ್ಲಿ ಜನ ದಟ್ಟಣೆಯಾಗುವುದರಿಂದ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು. ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಗರಿಮಾ ಪವ್ವಾರ, ಉಪ ವಿಭಾಗಾಧಿಕಾರಿ ಎಚ್.ಜಯಾ, ಮಾಧವ ಸೇವಾ ಕೇಂದ್ರದ ಅಧ್ಯಕ್ಷ ನಾಗರಾಜ ಹದ್ಲಿ, ಮುಖಂಡರಾದ ಮಾಧವಿ ರಾಠೊಡ, ಹನುಮಂತ ನಾರಾಯಣಿ, ಜ್ಯೋತಿ ಭಜಂತ್ರಿ, ಎನ್.ಜಿ.ಪವಾರ, ಮನೋಹರ ಎಳ್ಳೆಮ್ಮಿ, ವೈ.ಜೆ. ಪಠಾಣ, ಹಾಜಿಸಾಬ ದಂಡಿನ್, ಶಪೀಕ ದೊಡಕಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.