ಮದರಸಾ ಮುಂಭಾಗ ಕರ್ತವ್ಯ ನಿರ್ವಹಿಸಿದ್ದ ಗುಪ್ತವಾರ್ತೆ ಪೊಲೀಸ್ ಪೇದೆಗೆ ಸೋಂಕು

Team Udayavani, Apr 15, 2020, 2:48 PM IST

ಮದರಸಾ ಮುಂಭಾಗ ಕರ್ತವ್ಯ ನಿರ್ವಹಿಸಿದ್ದ ಗುಪ್ತವಾರ್ತೆ ಪೊಲೀಸ್ ಪೇದೆಗೆ ಸೋಂಕು

ಬಾಗಲಕೋಟೆ : ಜಿಲ್ಲೆಯ ಮುಧೋಳ ಸಿಪಿಐ ಕಚೇರಿಯಲ್ಲಿ ಗುಪ್ತ ವಾರ್ತೆ ಸಿಬ್ಬಂಧಿಯಾಗಿ  ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗೂ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇದರಿಂದ ಲಾಕ್ ಡೌನ್ ಕಡ್ಡಾಯ  ಅನುಷ್ಠಾನಕ್ಕಾಗಿ ಕೋವಿಡ್-19  ವಿರುದ್ಧ ಹೋರಾಡುತ್ತಿದ್ದ ಪೊಲೀಸರಲ್ಲೂ  ಭೀತಿ ಹೆಚ್ಚಿದೆ.

ರಾಜ್ಯ ಸರ್ಕಾರ  ಬುಧವಾರ ಮಧ್ಯಾಹ್ನ ಕೋವಿಡ್-19 ಸೋಂಕಿತರ ಹೆಲ್ತ್ ಬುಲೆಟಿನ್ ಬಿಡುಗಡೆ  ಮಾಡಿದ್ದು,  ರೋಗಿ
ಸಂಖ್ಯೆ ಪಿ-262ನೇ ವ್ಯಕ್ತಿ,  ಮುಧೋಳದಲ್ಲಿ ಸೋಂಕು ತಗುಲಿದ  ಇಬ್ಬರು ವ್ಯಕ್ತಿಗಳಿದ್ದ  ಮದರಸಾ ಸುತ್ತ  ಕರ್ತವ್ಯ ನಿರ್ವಹಿಸುತ್ತಿದ್ದ  39  ವರ್ಷದ  ಪೊಲೀಸ್ ಪೇದೆಗೆ ಸೋಂಕು  ತಗುಲಿರುವುದು  ದೃಢಪಟ್ಟಿದೆ.

ಪೇದೆ ಮೂಲತಃಜಮಖಂಡಿಯವರಾಗಿದ್ದು, ಮುಧೋಳದ ಸಿಪಿಐ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾ.27ರಂದು ಮದರಸಾದಲ್ಲಿ ಲಾಕ್ ಡೌನ್ ಉಲ್ಲಂಘಿಸಿ, ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಮೊದಲಿಗೆ ಅಲ್ಲಿಗೆ ಭೇಟಿ ನೀಡಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಇದೇ ಪೇದೆ. ಅಲ್ಲದೇ ಜಮಖಂಡಿಂದ ನಿತ್ಯ ಮುಧೋಳಕ್ಕೆ ಬಂದು ಹೋಗುತ್ತಿದ್ದ ಅವರು, ಜಮಖಂಡಿಯಲ್ಲಿ ಮನೆ ಹೊಂದಿದ್ದಾರೆ. ಈಗ ಪೇದೆಗೆ ಸೋಂಕು ಖಚಿತವಾದ ಹಿನ್ನೆಲೆಯಲ್ಲಿ ಅವರ ಮನೆಯವರು, ಇಲಾಖೆಯಲ್ಲಿ ಕೆಲಸ ಮಾಡುವಾಗ ಅವರೊಂದಿಗೆ ನೇರ, ಪ್ರಾಥಮಿಕ ಹಾಗೂ ದ್ವಿತೀಯ ಹಂತದಲ್ಲಿ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈಗಾಗಲೇ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಗಂಟಲು ಮಾದರಿ ಪಡೆದು, ಪರೀಕ್ಷೆಗೆ ರವಾನಿಸಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ತೀವ್ರ ಜ್ವರ ಹಾಗೂ ನಿರಂತರ ಸೀನುವ ಸಮಸ್ಯೆಗೆ ಒಳಗಾಗಿದ್ದ ಪೊಲೀಸ್ ಪೇದೆಗೆ ಜಮಖಂಡಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಪರೀಕ್ಷೆಗೆ ಒಳಪಡಿಸಿದ್ದು, ಕೋವಿಡ್-19 ಖಚಿತಪಟ್ಟಿದೆ. ಸಧ್ಯ ಅವರನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ಯೂಶನ್ ಹೇಳುವ ಶಿಕ್ಷಕಿ ಪತಿಗೆ ಸೋಂಕು :
ಬಾಗಲಕೋಟೆ ಹಳೆಯ ನಗರದಲ್ಲಿ ಈಗಾಗಲೇ 10 ಸೋಂಕು ಪ್ರಕರಣ ಪತ್ತೆಯಾದ ಪ್ರದೇಶದಲ್ಲೇ ಬುಧವಾರ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಕಳೆದ ಏ.9ರಂದು ಕೋವಿಡ್-19 ಖಚಿತಪಟ್ಟ ರೋಗಿ ಸಂಖ್ಯೆ ಪಿ 186 ನ ನಾಲ್ಕು ವರ್ಷದ ಮಗುವಿನೊಂದಿಗೆ ಸಂಪರ್ಕವಿದ್ದ 52 ವರ್ಷದ ಪುರುಷ (ಪಿ262)ನಿಗೂ ಸೋಂಕು ಖಚಿತಪಟ್ಟಿದೆ. ಈ ಪುರುಷನ ಪತ್ನಿ ಮನೆಯಲ್ಲಿ ಮಕ್ಕಳಿಗೆ ಟ್ಯೂಶನ್ ಹೇಳುತ್ತಿದ್ದರು. ಈ ಪುರುಷನ ಪತ್ನಿಗೂ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಒಟ್ಟಾರೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ವರೆಗೆ ಒಟ್ಟು 14 ಜನರಿಗೆ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬ ವೃದ್ಧ ಮೃತಪಟ್ಟಿದ್ದಾನೆ. ಇದೀಗ ಟ್ಯೂಶನ್ ಹೇಳುವ ಮಹಿಳೆಯ ಪತಿ ಹಾಗೂ ಮುಧೋಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಜನರನ್ನು ತಪಾಸಣೆಗೆ ಒಳಪಡಿಸಬೇಕಾದ ತುರ್ತು ಅನಿವಾರ್ಯತೆ ಜಿಲ್ಲಾಡಳಿತಕ್ಕಿದೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.