ಸಾಧ್ಯವಾದ್ರೆ ಸಹಾಯ ಮಾಡಿ; ತೊಂದ್ರೆ ಕೊಡಬೇಡಿ


Team Udayavani, Feb 2, 2019, 8:59 AM IST

february-17.jpg

ಬಾಗಲಕೋಟೆ: ನಮ್ಮಿಂದ ಸಾಧ್ಯವಾದರೆ, ಸಮುದಾಯದ ಜನರಿಗೆ ಸಹಾಯ- ಸಹಕಾರ ಮಾಡಬೇಕು. ಇಲ್ಲದಿದ್ದರೆ ತೊಂದರೆ ಕೊಡುವ ಕೆಲಸ ಮಾಡಬಾರದು ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹೇಳಿದರು.

ನವನಗರದ ಡಾ| ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಕಾಲ ಕಾಲಕ್ಕೆ ಮಾರ್ಗದರ್ಶನ ನೀಡಲಿಕ್ಕೆ ತಮ್ಮ ಜೀವನದ ಆಂದೋಲನ ಮೂಲಕ ಮುಂದಿನ ಪೀಳಿಗೆಗೆ ಕೊಡುಗೆ ಬಿಟ್ಟುಹೋಗಿದ್ದಾರೆ. ಹಿಂದೆ ಇದ್ದ ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶ ಸದಾ ಕಾಲ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ನಮ್ಮಿಂದ ಸಾಧ್ಯವಿದ್ದಲ್ಲಿ ಮತ್ತೂಬ್ಬರಿಗೆ ಸಹಕಾರಿ ನೀಡಬೇಕು. ಇಲ್ಲದಿದ್ದರೆ ಮತ್ತೂಬ್ಬರಿಗೆ ತೊಂದರೆ ಮಾಡಬಾರದು ಎಂದರು. ಜಿಪಂ, ತಾಪಂ, ಹಾಗೂ ಗ್ರಾಪಂ ಮಟ್ಟದಲ್ಲಿ ಪ್ರತಿಯೊಂದು ಮನೆಗೆ ಶೌಚಾಲಯ ನಿರ್ಮಾಣ ಮಾಡಲು ಮುಂದಾಗಿದ್ದು, ಬಯಲು ಶೌಚಮುಕ್ತ ಗ್ರಾಮಗಳನ್ನಾಗಿ ಮಾಡಲು ಕೈಜೋಡಿಸಬೇಕೆಂದು ಮನವಿ ಮಾಡಿದರು.

ತಾಪಂ ಅಧ್ಯಕ್ಷ ಚನ್ನನಗೌಡರ ಪರನಗೌಡ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದಂತಹ ಮಹತ್ವ ಮತ್ತೂಂದು ಇಲ್ಲ. ಸಮುದಾಯ ಒಗ್ಗಟ್ಟಿನ ಸಂದೇಶ ಸಾರುವ ಮೂಲಕ ತಮ್ಮ ಬಲ ವೃದ್ಧಿಸಿ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಹೊಸತನ ರೂಪಿಸಿಕೊಳ್ಳಿ: ಮಡಿವಾಳ ಜನಾಂಗ ಕೊಳೆಯಾದ ಬಟ್ಟೆ ಶುಚಿಗೊಳಿಸಿ ಅದರಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದು, ಕಾಲಕ್ಕೆ ಅನುಗುಣವಾಗಿ ಬದುಕಿನಲ್ಲಿ ಹೊಸತನ ರೂಪಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.

ಪೂರ್ವಜರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ಸಮುದಾಯದವರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಆಗ ಮಾತ್ರ ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯ. ಬಸವಾದಿ ಪ್ರಮತರ ಸಾಲಿನಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯ ಸ್ಥಾನ ಪಡೆದವರಾಗಿದ್ದು, ಅವರ ಆದರ್ಶ ಮತ್ತು ತತ್ವ ಪಾಲಿಸಲು ತಿಳಿಸಿದರು. ಅಥಣಿ ತಾಲೂಕಿನ ಜಿಂಜವಾಡದ ಬಸವರಾಜೇಂದ್ರ ಶರಣರು ಉಪನ್ಯಾಸ ನೀಡಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ದುರಗೇಶ ರುದ್ರಾಕ್ಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಕಂದಾಯ ಇಲಾಖೆ ಶಿರಸ್ತೇದಾರ ಎಂ.ಬಿ. ಗುಡೂರ, ಗೋಪಾಲ ಮಡಿವಾಳರ ಇದ್ದರು. ಇದಕ್ಕೂ ಮುಂಚೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಡಿವಾಳ ಮಾಚಿದೇವ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರದ ವಿವಿಧೆಡೆ ಸಂಚರಿಸಿ ಡಾ|ಬಿ.ಆರ್‌. ಅಂಬೇಡ್ಕರ್‌ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವರು. ಕುಂಭ ಹೊತ್ತ ಮಹಿಳೆಯರು ಮೆರವಣಿಗೆ ಕೇಂದ್ರ ಬಿಂದು ಆಗಿದ್ದರು.

ಭಾರತ ಗ್ರಾಮಗಳಿಂದ ಕೂಡಿದ ದೇಶ. ಪ್ರತಿಯೊಂದು ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಉತ್ತಮ ನಾಗರಿಕ, ಮಾನವೀಯ, ಸಂಸ್ಕೃತಿ ಕಾಪಾಡಿಕೊಳ್ಳಬೇಕಾದರೆ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಬೇಕು. ಆಗ ಮಾತ್ರ ಸುಂದರ, ಸ್ವಚ್ಛ ಸಮಾಜ ನಿರ್ಮಾಣ ಮಾಡಲು ಸಾಧ್ಯ.
•ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.