ಬಾಗಲಕೋಟೆ: ಡಿ. 29ರಿಂದ ಮೂರು ದಿನ ತೋಟಗಾರಿಕೆ ಜಾತ್ರೆ

ಸುಗಂಧ ದ್ರವ್ಯ ಬೆಳೆಗಳ ಪ್ರದರ್ಶನಗಳು ಈ ಬಾರಿಯ ಮೇಳದ ವಿಶೇಷತೆಗಳಾಗಿರುತ್ತವೆ

Team Udayavani, Dec 28, 2022, 5:25 PM IST

ಬಾಗಲಕೋಟೆ: ಡಿ. 29ರಿಂದ ಮೂರು ದಿನ ತೋಟಗಾರಿಕೆ ಜಾತ್ರೆ

ಬಾಗಲಕೋಟೆ: ಸಾವಯವ ಕೃಷಿಗಾಗಿ ತೋಟಗಾರಿಕೆ ಎಂಬ ಧ್ಯೇಯವಾಕ್ಯದೊಂದಿಗೆ ಡಿ. 29, 30 ಮತ್ತು 31 ರವರೆಗೆ ಮೂರು ದಿನಗಳ ಕಾಲ ತೋಟಗಾರಿಕೆ ಮೇಳ ಆಯೋಜಿಸಲಾಗುತ್ತಿದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ| ಕೆ.ಎಮ್‌. ಇಂದಿರೇಶ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಯವ ತೋಟಗಾರಿಕೆ ಚಿಂತನೆಗೆ ಪೂರಕ ಮತ್ತು ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಿ ರೈತರಿಗೆ ಲಾಭವಾಗಲಿ ಎಂಬ ಉದ್ದೇಶದಿಂದ ತೋಟಗಾರಿಕೆ ಮೇಳ ಜರುಗಿಸಲಾಗುತ್ತಿದೆ. ಪ್ರಸ್ತುತ ಸನ್ನಿವೇಶದಲ್ಲಿ ಸಾವಯವ ಕೃಷಿಗಾಗಿ ತೋಟಗಾರಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿ, ಸವಾಲುಗಳು ಹಾಗೂ ಅವಕಶಾಶಗಳು, ಹವಾಮಾನ ವೈಪರೀತ್ಯಗಳ ತಲ್ಲಣಗಳು, ತೋಟಗಾರಿಕೆ ಬೆಳೆಗಳಿಗೆ ಕೈಗೊಳ್ಳಬೇಕಾದ ಎಚ್ಚರಿಕೆ ಹಾಗೂ ಸಂಶೋಧನಾ ಕ್ರಮಗಳು, ಬೆಳೆಗಳ ಮಾರಾಟ ಮತ್ತು ರಫ್ತು ಅಭಿವೃದ್ಧಿಯಲ್ಲಿ ರೈತ ಉತ್ಪಾದನಾ ಸಂಸ್ಥೆಗಳ ಪಾತ್ರ
ಸೇರಿದಂತೆ ಇತರ ವಿಷಯಗಳ ಕುರಿತು ಪರಿಣಿತರು ವಿಶೇಷ ಮಾಹಿತಿಯನ್ನು ಮೇಳದಲ್ಲಿ ನೀಡಲಿದ್ದಾರೆ ಎಂದರು.

ನವನಗರ ಉದ್ಯಾನಗಿರಿಯಲ್ಲಿ ನಡೆಯಲಿರುವ ಮೇಳದಲ್ಲಿ ಒಟ್ಟು 176 ಮಳಿಗೆಗಳನ್ನು ಹಾಕಲಾಗುತ್ತಿದ್ದು, ಸಸ್ಯ ಸಂರಕ್ಷಣೆಯಲ್ಲಿ ಡ್ರೋಣ ಬಳಕೆ, ಜೇನು ಕೃಷಿ-ಮಧುವನ, ವಿಜ್ಞಾನಿಗಳಿಂದ ತಾಂತ್ರಿಕ ಮಾಹಿತಿ, ಹೂವು ಹಾಗೂ ಅಲಂಕಾರಿಕೆ, ಸಸ್ಯಗಳ ಮೌಲ್ಯವರ್ಧನೆ, ಕೌಶಲ್ಯ ಪ್ರಾತ್ಯಕ್ಷಿಕೆಗಳು, ಕೃಷಿ ಯಂತ್ರೋಪಕರಣ-ಉಪಕರಣ, ಪರಿಕರಗಳು ಹಾಗೂ ಔಷಧಿ ಮತ್ತು ಸುಗಂಧ ದ್ರವ್ಯ ಬೆಳೆಗಳ ಪ್ರದರ್ಶನಗಳು ಈ ಬಾರಿಯ ಮೇಳದ ವಿಶೇಷತೆಗಳಾಗಿರುತ್ತವೆ ಎಂದು ತಿಳಿಸಿದರು.

ತೋಟಗಾರಿಕೆ ಮೇಳ 2022ಕ್ಕೆ ಡಿ. 29ರಂದು ತೋಟಗಾರಿಕೆ ಸಚಿವ ಮುನಿರತ್ನ ಚಾಲನೆ ನೀಡಲಿದ್ದು, ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ ಸೇರಿ ಸ್ಥಳಿಯ ಶಾಸಕರು ಮತ್ತು ಜನಪ್ರತಿನಿಧಿಗಳು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಮೇಳದಲ್ಲಿ ಮೊದಲನೆಯ ದಿನ ತೋವಿವಿ ಬಾಗಲಕೋಟೆ ಕಾರ್ಯವ್ಯಾಪ್ತಿಗೊಳಪಡುವ ಜಿಲ್ಲೆಗಳಿಂದ ಆಯ್ಕೆಯಾದ 10, ಎರಡನೆ ದಿನ 10 ಹಾಗೂ ಮೂರನೆ ದಿನದಂದು 4ರಂತೆ ಒಟ್ಟು 24 ಪ್ರಗತಿಪರ ಶ್ರೇಷ್ಠ ತೋಟಗಾರಿಕೆ ಕೃಷಿಕರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ. ಪ್ರತಿ ದಿನವೂ ಸಾದಕ ರೈತರು ತಮ್ಮ ಅನುಭವಗಳನ್ನು ಇತರೇ ರೈತರೊಂದಿಗೆ ಹಂಚಿಕೊಳ್ಳಲಿದ್ದಾರೆ. ಅಲ್ಲದೇ ವಿಜ್ಞಾನಿಗಳು ಪ್ರಗತಿಪರ ರೈತರು ಮತ್ತು ಇತರೇ ರೈತರ ಜತೆಗೆ ಸಂವಾದ ನಡೆಸುವರು ಎಂದು ಮಾಹಿತಿ ನೀಡಿದರು.

ತೋವಿವಿಯ ಕುಲಸಚಿವ ಡಾ| ಟಿ.ಬಿ.ಅಳ್ಳೊಳ್ಳಿ, ವಿಸ್ತರಣಾ ನಿರ್ದೇಶಕ ಡಾ| ಎಸ್‌.ಐ. ಅಥಣಿ, ಸಹ ಸಂಶೋಧನಾ ನಿರ್ದೇಶಕ ಡಾ| ಕುಲಪತಿ ಹಿಪ್ಪರಗಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

5

Chikkodi: ಕಾನೂನು ಪದವಿ ಓದುತ್ತಿದ್ದ ಯುವಕ ಆತ್ಮಹ*ತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.