ಬಾಗಲಕೋಟೆ: ಅನಕ್ಷರಸ್ಥರಿಂದ ಜಾನಪದ ಕಲೆ ಜೀವಂತ
Team Udayavani, Jan 29, 2024, 3:56 PM IST
ಬಾಗಲಕೋಟೆ: ಕಲೆ ಮತ್ತು ಕಲಾವಿದರನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಜನಪರ ಉತ್ಸವದಂತಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರೋತ್ಸಾಹಿಸುತ್ತಿದೆ ಎಂದು ಶಾಸಕ ಎಚ್.ವೈ. ಮೇಟಿ ಹೇಳಿದರು.
ತಾಲೂಕಿನ ಬೇವೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಪರ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನಪದ ಕಲೆಯು ಗ್ರಾಮೀಣ ಭಾಗದ ಬಡವರು, ಹಿಂದುಳಿದವರು ಮತ್ತು ಅನಕ್ಷರಸ್ತರಲ್ಲಿ ಮಾತ್ರ ಉಳಿದಿದೆ. ಹಾಗಾಗಿ ಈ ಕಲೆಯನ್ನು ತಮ್ಮ ಯುವ ಪೀಳಿಗೆಗೆ ಮುಂದುವರೆಸಿಕೊಂಡು ಹೋಗಲು ಅವರಿಗೂ ಕಲಿಸಬೇಕು. ಇಂದಿನ ಕಲೆಯಲ್ಲಿ ಯಾವುದೇ ಸಂಸ್ಕೃತಿ ಉಳಿದಿಲ್ಲ.
ಹಿಂದೆ ನಮ್ಮ ಹಿರಿಯರು ನಮಗೆ ಹಲವಾರು ಜನಪದ ಹಾಡುಗಳನ್ನು ಕಲಿಸುತ್ತಿದ್ದರು. ಹಳ್ಳಿಗಳಲ್ಲಿ ನಾಟಕ, ಕೋಲಾಟ ಮತ್ತು ಭಜನೆ ಪದಗಳನ್ನು ನಾವು ಹಿಂದೆ ಕುಳಿತು ಕೇಳುತ್ತಿದ್ದೆವು. ಈಗ ಇಂಥಹ ಕಲೆಗಳು ನಶಿಸುತ್ತಿದ್ದು, ಅದನ್ನು ತಾವುಗಳು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದರು.
ಜನಮನ ಸೆಳೆದ ಜನಪರ ಉತ್ಸವ: ಗ್ರಾಮೀಣ ಸಂಸ್ಕೃತಿ, ಸಂಪ್ರದಾಯ ಬಿಂಬಿಸುವ ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಜನಪರ ಉತ್ಸವ ಜನಮನಸೂರೆಗೊಂಡಿತು. ಗಾನ ವೈವಿಧ್ಯತೆಗಳ ಗಾಯಕರ ಸಮೂಹ ಗಾಯನ ಜನಮನ ತಣಿಸಿತು.
ಕಾರ್ಯಕ್ರಮದಲ್ಲಿ ಕಲಾವಿದರು ದೀಪ ನೃತ್ಯ, ತತ್ವ ಪದ, ಜಾನಪದ ಗೀತೆ, ಶಿವ ಭಜನೆ ಹಾಡು, ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ಸಮೂಹ ನೃತ್ಯ, ಸಂಪ್ರದಾಯ ಪದ, ಶಹನಾಯಿ ವಾದನ, ವಚನ ಗಾಯನ, ಭಜನೆ ಪ್ರದರ್ಶನ ಮಾಡಿದರು. ಇದಕ್ಕೂ ಮುನ್ನ ಗ್ರಾಮದ ವಿವಿಧ ಬೀದಿಗಳಲ್ಲಿ ಕಲಾ ತಂಡಗಳ ಮೆರವಣಿಗೆಗೆ ಶಾಸಕ ಎಚ್.ವೈ. ಮೇಟಿ, ಗ್ರಾಮದ ಮುಖಂಡರು,
ಸಾರ್ವಜನಿಕರು ಜಗ್ಗಲಿಗಿ ಬಾರಿಸಿ ಚಾಲನೆ ನೀಡಿದರು.
ಹಲಿಗಿವಾದನ, ತಮಟೆ, ಡೊಳ್ಳು ಕುಣಿತ, ಖನಿವಾದನ, ಕರಡಿ ಮಜಲು ಮೆರವಣಿಗೆಯ ಮೆರಗು ಹೆಚ್ಚಿಸಿತು. ಈ ಸಂದರ್ಭದಲ್ಲಿ ಜಿ. ಜಿ. ಮಾಗನೂರು, ಎಂ. ಮ್. ವೈಜಾಪುರ. ರತನಕುಮಾರ್ ವೈಜಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ, ಬಾಗಲಕೋಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನ್ನವರ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.