ಭಗವಾನ್ ಮಹಾವೀರ-ಡಾ|ಜಗಜೀವನರಾಮ್ ಜಯಂತಿ
ಜಿಲ್ಲಾಡಳಿತದಿಂದ ಸರಳವಾಗಿ ಜಯಂತಿ ಆಚರಣೆ
Team Udayavani, Apr 7, 2020, 6:04 PM IST
ಬಾಗಲಕೋಟೆ: ಜಿಲ್ಲಾಡಳಿತದಿಂದ ಭಗವಾನ್ ಮಹಾವೀರ ಜಯಂತಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ ಅವರು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಅರ್ಪಿಸಿದರು. ಜಿಪಂ ಸಿಇಒ ಗಂಗೂಬಾಯಿ ಮಾನಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಶಿರೂರ, ಕೃಷಿ ಇಲಾಖೆಯ ಉಪ ನಿರ್ದೇಶಕ ಕೊಂಕವಾಡ ಉಪಸ್ಥಿತರಿದ್ದರು.
ಡಾ|ಬಾಬು ಜಗಜೀವನರಾಮ್ ಜಯಂತಿ: ದೇಶದ ಮಾಜಿ ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ಜಯಂತಿ ಆಚರಿಸಲಾಯಿತು. ಬೆನಕಟ್ಟಿ ಗ್ರಾಮದಲ್ಲಿ ಕೊರೊನಾ
ಲಾಕ್‌ಡೌನ್ ಹಿನ್ನೆಲೆಯಲ್ಲಿ ಡಾ|ಬಾಬು ಜಗಜೀವನರಾಮ್ ಮತ್ತು ಡಾ|ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಅವರ ಜಯಂತಿ ಆಚರಿಸಿ ಕೊರೊನಾ ಮುಕ್ತವಾಗಲಿ ಎಂದು ಪ್ರಾರ್ಥಿಸಲಾಯಿತು. ಡಾ| ಬಾಬು ಜಗಜೀವನರಾಮ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಹನಮಂತ ಮಾದರ, ಉಪಾಧ್ಯಕ್ಷ ಮಲ್ಲು ಬಡಿಗೇರ, ಕಾರ್ಯದರ್ಶಿ ನಾಗರಾಜ ಕಟ್ಟಿಮನಿ, ಖಜಾಂಚಿ ಕನಕಪ್ಪ ಮಾದರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.