ಉಪಯೋಗಕ್ಕೆ ಬಾರದ ಬಹುಗ್ರಾಮದ ಯೋಜನೆ
Team Udayavani, Jul 15, 2020, 9:55 AM IST
ಬಾದಾಮಿ: ಸುಕ್ಷೇತ್ರ ಶಿವಯೋಗಮಂದಿರ ಹತ್ತಿರದ ಮಲಪ್ರಭಾ ನದಿ ದಂಡೆಯಲ್ಲಿ ನಿರ್ಮಿಸಿದ ಬಹುಗ್ರಾಮದ ಕುಡಿಯುವ ನೀರಿನ ಯೋಜನೆ ಮತ್ತು ಏತನೀರಾವರಿ ಯೋಜನೆ ಪೂರ್ಣಗೊಂಡು ಹಲವಾರು ವರ್ಷಗಳೇ ಕಳೆದರೂ ಇನ್ನೂ ಕಾರ್ಯಾರಂಭ ಆಗಿಲ್ಲ. ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನ ಜಲ ನಿರ್ಮಲ ಯೋಜನೆಯಡಿ 2012-13ರಲ್ಲಿ 1.35 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಇದರಿಂದ ಸುತ್ತಮುತ್ತಲಿನ ಗ್ರಾಮಗಳಾದ ಮಂಗಳೂರ, ಗೋನಾಳ ಮತ್ತು ಶಿರಬಡಗಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಆಗಬೇಕಿತ್ತು. ಸಣ್ಣ ನೀರಾವರಿ ಇಲಾಖೆಯಿಂದ ಏತ ನೀರಾವರಿ ಯೋಜನೆಗೆ 3 ಕೋಟಿ ವೆಚ್ಚ ಮಾಡಲಾಗಿದೆ. ಕೆರೆಗೆ ನೀರು ತುಂಬಿಸಿ ಕೆರೆಯಿಂದ ಹೊಲಗಳಿಗೆ ನೀರು ಬಿಡುವ ಯೋಜನೆಯೂ 2012-13 ರಲ್ಲಿ ಮುಕ್ತಾಯಗೊಂಡಿದೆ. ಆದರೆ, ರೈತರ ಉಪಯೋಗಕ್ಕೆ ಬಾರದಂತಾಗಿದೆ. ಇದರಿಂದ ರೈತರು ಶೀಘ್ರ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ವರ್ಷ ಬಂದ ನೆರೆಹಾವಳಿಗೆ ಜಾಕ್‌ವೆಲ್ ಶಿಥಿಲಗೊಂಡಿವೆ. ಅದರೊಳಗಿನ ಉಪಕರಣ ಕಾರ್ಯ ನಿರ್ವಹಿಸದೇ ಸ್ಥಗಿತವಾಗಿವೆ. ಕುಡಿಯುವ ನೀರಿನ ಯೋಜನೆ ಮತ್ತು ಏತ ನೀರಾವರಿ ಯೋಜನೆಗಳು ಜನರಿಗೆ ಮತ್ತು ರೈತರಿಗೆ ಉಪಯೋಗಕ್ಕೆ ಬಾರದಂತಾಗಿದೆ. ಕಾಮಗಾರಿಗೆ ಜನಪ್ರತಿನಿಧಿ ಗಳು ಬಂದು ಶಂಕು-ಸ್ಥಾಪನೆ ನೆರವೇರಿಸಿದ್ದಾರೆಲ್ಲದೇ, ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾರ್ಯ ನಿರ್ವಹಿಸಿದ್ದಾರೆ. ಆದರೆ, ಸರ್ಕಾರದ ಯೋಜನೆಗಳು ಜನರಿಗೆ ತಲುಪದೇ ನದಿ ಪಾಲಾಗುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನೀರು ಶುದ್ಧೀಕರಣ ಘಟಕದಲ್ಲಿ ನಾಲ್ಕು ಬಾರಿ ವಿದ್ಯುತ್ ಮೋಟಾರ್ ಸುಟ್ಟಿದೆ. ಹೆಸ್ಕಾಂ ಇಲ್ಲಿಗೆ ನಿರಂತರ ಜ್ಯೋತಿ ಲೈನ್ ಕೊಟ್ಟರೆ ಯೋಜನೆ ಆರಂಭವಾಗುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ವಿನಾಯಕ ಪತಂಗಿ ಹೇಳಿದರು. ಪ್ರವಾಹದಿಂದ ಜಾಕ್‌ವೆಲ್‌ನ ಉಪಕರಣ ಹಾನಿಗೀಡಾಗಿವೆ. 15 ದಿನಗಳಲ್ಲಿ ಏತ ನೀರಾವರಿ ಯೋಜನೆ ಆರಂಭಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.