ಬನಹಟಿಯಲ್ಟಿ ನಿಷೇಧಾಜ್ಞೆ ಮುಂದುವರಿಕೆ
ಆರೋಪಿತರಲ್ಲಿ ಮತ್ತೋರ್ವನನ್ನು ಬಂಧಿಸಿದ್ದು, ಇದೀಗ ಒಟ್ಟು 14 ಜನರನ್ನು ಬಂಧಿಸಲಾಗಿದೆ.
Team Udayavani, Feb 11, 2022, 6:09 PM IST
ರಬಕವಿ-ಬನಹಟ್ಟಿ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹಿಂಸೆಗೆ ತಿರುಗಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 6ಗಂಟೆವರೆಗೆ ಜಾರಿಗೊಳಿಸಿದ್ದ 144 ನಿಷೇಧಾಜ್ಞೆಯನ್ನು ಶನಿವಾರ ಬೆಳಗ್ಗೆ 6 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ತಹಶೀಲ್ದಾರ್ ಸಂಜಯ ಇಂಗಳೆ ಸ್ಪಷ್ಟಪಡಿಸಿದ್ದಾರೆ.
ಬನಹಟ್ಟಿ ಹಾಗೂ ರಬಕವಿ ಪಟ್ಟಣದಲ್ಲೂ ನಿಷೇಧಾಜ್ಞೆ ಮುಂದುವರಿಸಿದ್ದು, ರ್ಯಾಲಿ ಹಾಗೂ ಕಾರ್ಯಕ್ರಮಗಳಿಗೆ ನಿಷೇಧ ಹೇರಿರುವ ಹಿನ್ನೆಲೆ ಈಗಷ್ಟೇ ಪೊಲೀಸರ ಹತೋಟಿಯಲ್ಲಿ ಬನಹಟ್ಟಿ ನಗರವಿದ್ದು, ಎಲ್ಲೆಂದರಲ್ಲಿ ಪೊಲೀಸ್ ಕಣ್ಗಾವಲು ಹೆಚ್ಚಾಗಿದ್ದು, ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾದ ಸ್ಥಳಗಳಲ್ಲಿ ಪೊಲೀಸ್ ಹೆಚ್ಚಿನ ಬಂದೋಬಸ್ತ್ ಒದಗಿಸಿ ಚಿತ್ರೀಕರಣಗಳೂ ಸಹಿತ ನಡೆಯುತ್ತಿವೆ.
ಮತ್ತೋರ್ವನ ಬಂಧನ: ಮಂಗಳವಾರ ಮಧ್ಯಾಹ್ನ ಶಿಕ್ಷಕನೋರ್ವನ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಲ್ಲಿ ಭಾಗಿಯಾದ ಆರೋಪಿತರಲ್ಲಿ ಮತ್ತೋರ್ವನನ್ನು ಬಂಧಿಸಿದ್ದು, ಇದೀಗ ಒಟ್ಟು 14 ಜನರನ್ನು ಬಂಧಿಸಲಾಗಿದೆ.
ಮಾರುಕಟ್ಟೆ ಸಂಪೂರ್ಣ ಬಂದ್: ನಿಷೇಧಾಜ್ಞೆ ಜಾರಿಯಲ್ಲಿ ರಬಕವಿ ಹಾಗೂ ಬನಹಟ್ಟಿ ಪಟ್ಟಣಗಳ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿ ಬಿಕೋ ಎನ್ನುತ್ತಿದ್ದವು. ಎಂದಿನಂತೆ ಸರ್ಕಾರಿ ಕಚೇರಿ, ಶಾಲೆ, ಖಾಸಗಿ ಹಣಕಾಸು, ಆಸ್ಪತ್ರೆ, ಮೆಡಿಕಲ್ ಹಾಗೂ ಅಗತ್ಯ ವಸ್ತುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದವು.
ಬಸ್ ಸಂಚಾರ ಸೇರಿದಂತೆ ಖಾಸಗಿ ವಾಹನಗಳ ಓಡಾಟಕ್ಕೆ ಯಾವದೇ ನಿರ್ಭಂಧ ಹೇರದೆ ರಾಜ್ಯ ಹೆದ್ದಾರಿಯಲ್ಲಿನ ಸಂಚಾರ ದೈನಂದಿನದಂತೆ ಕಾರ್ಯನಿರ್ವಹಿಸುತ್ತಿದ್ದವು.ಸೂಕ್ಷ್ಮವಾಗಿ ಗಮನಿಸುತ್ತಿರುವ ಜಿಲ್ಲಾಡಳಿತ: ಬನಹಟ್ಟಿಯಲ್ಲಿ ನಡೆದ ಘಟನೆಯನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ಷ್ಮವಾಗಿ ಗಮನಿಸುತ್ತಿದೆ.
ಖಾಸಗಿ ಸಮಾರಂಭಕ್ಕೆ ಅವಕಾಶ: ಮದುವೆ-ಮುಂಜಿವೆ, ವಾಸ್ತು ಶಾಂತಿ ಸೇರಿದಂತೆ ವೈಯಕ್ತಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸದೆ ಸರಾಗವಾಗಿ ಕಾರ್ಯಕ್ರಮಗಳು ನಡೆದಿರುವುದು ಜನರಲ್ಲಿ ನೆಮ್ಮದಿ ತಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.