ಬಾಲ್ಯ ವಿವಾಹಕ್ಕೆ ತಡೆ
Team Udayavani, Apr 27, 2020, 3:54 PM IST
ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಮಕ್ಕಳ ಸಹಾಯವಾಣಿ 1098ಗೆ ಬಂದ ಕರೆಯ ಮೇರೆಗೆ ಜಿಲ್ಲೆಯ ಮುಧೋಳ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ರವಿವಾರ ತಡೆಯಲಾಯಿತು.
ಬೆಳಗ್ಗೆ ಮಕ್ಕಳ ಸಹಾಯವಾಣಿ 1098ಗೆ ಮುಧೋಳ ತಾಲೂಕಿನ ಮಳಲಿ ಗ್ರಾಮದಲ್ಲಿ ಬಾಲ್ಯ ವಿವಾಹ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ರೀಚ್ ಸಂಸ್ಥೆಯ ಮಕ್ಕಳ ಸಹಾಯವಾಣಿ ತಂಡದ ಸದಸ್ಯ ಮಲ್ಲಪ್ಪ ಮೆಳ್ಳಿಗೇರಿ, ಅಂಗನವಾಡಿ ಮೇಲ್ವಿಚಾರಕಿ ಸುಧಾ ಮಂಟೂರ, ಅಂಗನವಾಡಿ ಕಾರ್ಯಕರ್ತೆ ಭಾರತಿ ಬಾಳಗಿ, ಪಿಡಿಓ ಮನೋಹರ ಬ್ಯಾಕೋಡ, ಪೊಲೀಸ್ ಅಧಿಕಾರಿ ಜಗದೀಶ ದಳವಾಯಿ ಸಹಕಾರದೊಂದಿಗೆ ಬಾಲ್ಯ ವಿವಾಹ ತಡೆದರು.
ಬಾಲಕಿ ಮನೆಗೆ ಬೆಳಿಗ್ಗೆ 11 ಗಂಟೆಗೆ ತೆರಳಿದಾಗ ಈ ಹೆಣ್ಣು ಮಗು 16 ವರ್ಷದ ಬಾಲಕಿಯಾಗಿದ್ದು, 10ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಪರೀಕ್ಷೆ ತಯಾರಿಯೂ ನಡೆಸುತ್ತಿದ್ದಳು. ಈ ಬಾಲಕಿಯನ್ನು ತೆವರಟ್ಟಿ ಗ್ರಾಮದ 36 ವರ್ಷದ ವ್ಯಕ್ತಿಯೊಂದಿಗೆ ರವಿವಾರ 12 ಗಂಟೆಗೆ ಮದುವೆ ನಿಶ್ಚಯವಾಗಿತ್ತು. ಇದನ್ನು ತಡೆಯುವ ಮೂಲಕ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಿಂದ ಮಗುವಿನ ಪಾಲಕರಿಗೆ ಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂಕಾನೂನಿನ ಅರಿವು ನೀಡಿ ಪೋಷಕರಿಂದ ತಮ್ಮ ಮಗಳಿಗೆ 18 ವರ್ಷ ಮುಗಿಯುವವರೆಗೆ ಮದುವೆ ಮಾಡುವುದಿಲ್ಲ ಎಂಬ ಮುಚ್ಚಳಿಕೆ ಪತ್ರವನ್ನು ಬರೆಸಿಕೊಳ್ಳಲಾಯಿತು.
ಕೋವಿಡ್ 19 ದಿಂದಾಗಿ ಮಗುವನ್ನು ಮನೆಯಲ್ಲೇ ಬಿಡಲಾಗಿ ಪ್ರತಿದಿನ ಪಂಚಾಯತ ಅಭಿವೃದ್ಧಿ ಅಧಿಕಾರಿ ಮನೋಹರ ಬ್ಯಾಕೋಡ ಮನೆ ಭೇಟಿ ನೀಡುವ ಮೂಲಕ ಅನುಸರಣೆ ಮಾಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.