ಮಲೇರಿಯಾ ಹರಡದಂತೆ ಜಾಗೃತಿ ವಹಿಸಿ
Team Udayavani, Jul 20, 2020, 11:02 AM IST
ಗಲಗಲಿ: ಮಲೇರಿಯಾ ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಮಲೇರಿಯಾ ಬರದಂತೆ ಜಾಗೃತಿ ವಹಿಸಬೇಕು ಎಂದು ಗಲಗಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅನೀಲ ಕುಂಚನೂರ ಹೇಳಿದರು.
ಬಾಡಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಅರೋಗ್ಯ ವಿಸ್ತರಣಾ ಕೇಂದ್ರ ಹಾಗೂ ಬಾಡಗಿ ಗ್ರಾಮ ಪಂಚಾಯತ ಆಶ್ರಯದಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆಯ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ವಿವರಿಸಿದರಲ್ಲದೇ ಅಂಥ ರೋಗಗಳು ಹರಡದಂತೆ ತಡೆಯಲು ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ತಿಳಿಸಿದರು.
ಬಾಡಗಿ ಗ್ರಾಮ ಆರೋಗ್ಯ ವಿಸ್ತರಣಾ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರಕಾಶ ಪಡುಮುಖೀ ಮಾತನಾಡಿ, ಮನೆಯ ಸುತ್ತಲಿನ ಪರಿಸರದಲ್ಲಿ ಸೊಳ್ಳೆಗಳು ಬಾರದಂತೆ ಸ್ವಚ್ಛತೆಗೆ ಮಹತ್ವ ನೀಡಬೇಕು ಎಂದರಲ್ಲದೇ ಕೋವಿಡ್ ತಡೆಗಟ್ಟುವ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ ಪಿಡಿಒ ಲಕ್ಷ್ಮಣ ಆಲಗುಂಡಿ, ಕಾರ್ಯದರ್ಶಿ ಬಡಿಗೇರ, ರವಿ ಸಾಳುಂಕೆ ಮುಂತಾದವರು ಪಾಲ್ಗೊಂಡಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ಗಲಗಲಿಯ ಆರೋಗ್ಯ ಶಿಕ್ಷಣಾಧಿಕಾರಿ ಎ.ವಿ.ಗವಳಿ, ಈ ವರ್ಷದ ಘೋಷಣೆಯಾದ ಶೂನ್ಯ ಮಲೇರಿಯಾ ನಮ್ಮಿಂದ ಪ್ರಾರಂಭ ಎಂಬುದರ ಬಗ್ಗೆ ವಿವರಿಸಿದರು. ಸುನಂದಾ ಕಂಬಳೆ, ಶ್ರೀದೇವಿ ಮಾದರ, ವಿಜಯಲಕ್ಷ್ಮೀ ಚಿತವಾಡಗಿ, ಆನಂದ ಹಿರೇಮಠ, ಪ್ರಕಾಶ ಯಲಗೋಡ ಉಪಸ್ಥಿತರಿದ್ದರು. ಶಿವು ಗೋಕಾವಿ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.