ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ


Team Udayavani, Oct 15, 2024, 2:10 PM IST

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

■ ಉದಯವಾಣಿ ಸಮಾಚಾರ
ಕುಳಗೇರಿ ಕ್ರಾಸ್‌: ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ದೊರೆಸ್ವಾಮಿ ವಿರಕ್ತಮಠ ಭೈರನಹಟ್ಟಿ ಅವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚೊಳಚಗುಡ್ಡದಿಂದ ಭೈರನಹಟ್ಟಿಯವರೆಗೆ ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮೀಜಿ ಚಾಲನೆ ನೀಡಿದರು.

ನಂತರ ಮಾತನಾಡಿದ ಶ್ರೀಗಳು, ಕಾರ್ಗಿಲ್‌ ಹುತಾತ್ಮ ಯೋಧರ ಜ್ಯೋತಿ ರಥ ಎಳೆಯುತ್ತಿರುವುದು ದೇಶದಲ್ಲಿಯೇ ಪ್ರಥಮ.
ದೇಶಕ್ಕಾಗಿ ಮಡಿದ ಯೋಧರ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳುವುದರ ಜತೆಗೆ ನಮಗೆಲ್ಲ ನಮ್ಮ ಸೈನಿಕರನ್ನು ನೆನಪು
ಮಾಡಿಕೊಡುವ ಕೆಲಸ ಭೈರನಹಟ್ಟಿ ಶ್ರೀಮಠದಿಂದ ನಡೆಯುತ್ತಿದೆ. ಕಾರ್ಗಿಲ್‌ ವಿಜಯ ದಿನವನ್ನು ವಿವಿಧ ಕಾರ್ಯ ಕ್ರಮದೊಂದಿಗೆ ಶ್ರೀಮಠದಲ್ಲಿ ವಿನೂತನವಾಗಿ ಆಚರಿಸುತ್ತಿರುವುದು ದೇಶಭಕ್ತರಲ್ಲಿ ಸಂತಸ ತಂದಿದೆ ಎಂದು ಹೇಳಿದರು.

ಶ್ರೀ ವೀರಪುಲಿಕೇಶಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ
ರಾಜ್ಯ ಹೆದ್ದಾರಿ ಮೂಲಕ ಸಕಲ ವಾದ್ಯಗಳೊಂದಿಗೆ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ಮಾಡಲಾಯಿತು.

ನಂತರ ರಾಯಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ ಭೈರನಹಟ್ಟಿ ಪೂಜ್ಯ ಶಾಂತಲಿಂಗ ಸ್ವಾಮಿಜಿ ಮಾತನಾಡಿ, ಕಾರ್ಗಿಲ್‌ ವಿಜಯ
ಪತಾಕೆಯನ್ನು ಹಾರಿಸಿ 25 ವರ್ಷ ಗತಿಸಿದವು. ಅನ್ನ ನೀಡುವ ರೈತ, ದೇಶ ಕಾಯುವ ಸೈನಿಕರನ್ನ ನೆನೆಯುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಕಾರ್ಗಿಲ್‌ ಯುದ್ಧದಲ್ಲಿ ಪ್ರಥಮವಾಗಿ ಮಡಿದ ಚೊಳಚಗುಡ್ಡದ ಶಿವಬಸಯ್ಯ ಕುಲಕರ್ಣಿಯವರ ಸ್ಮಾರಕದಿಂದ ಪ್ರಾರಂಭವಾದ
ಜ್ಯೋತಿರಥಯಾತ್ರೆಯು ಬನಶಂಕರಿ, ಬಾದಾಮಿ, ಮುತ್ತಲಗೇರಿ, ತಿಮ್ಮಾಪೂರ ಎಸ್‌ ಎನ್‌, ಕುಳಗೇರಿ ಕ್ರಾಸ್‌ ಮಾರ್ಗವಾಗಿ
ಗೋವನಕೊಪ್ಪ, ಕೊಣ್ಣೂರ ಮೂಲಕ ಭೈರನಹಟ್ಟಿ ಶ್ರೀಮಠಕ್ಕೆ ತಲುಪಿತು. ಎಲ್ಲ ಗ್ರಾಮಸ್ಥರು, ಮಾಜಿ ಸೈನಿಕರು, ಗ್ರಾಪಂ
ಸಸಸ್ಯರು, ವಿವಿಧ ಕನ್ನಡಪರ ಸಂಘಟನೆಯವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.