ಕುಳಗೇರಿಯಲ್ಲಿ ಹೆಚ್ಚಿ ಬೈಕ್ ಕಳ್ಳತನ
ಗ್ರಾಮದ ಸಿಸಿ ಕ್ಯಾಮೆರಾ ಬಂದ್ಪೊಲೀಸ್ ಸಿಬ್ಬಂದಿಯಿಂದ ಗ್ರಾಮ ಗಸ್ತು ಸಂಚಾರ
Team Udayavani, Jun 23, 2021, 5:00 PM IST
ಕುಳಗೇರಿ ಕ್ರಾಸ್: ಗ್ರಾಮದ ಮನೆಗಳ ಮುಂಭಾಗದಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳಲ್ಲಿನ ಪೆಟ್ರೋಲ್, ರಸ್ತೆಬದಿ ನಿಂತ ಲಾರಿಗಳ ಡೀಸೆಲ್ ಕಳ್ಳತನ ಮಾಡುತ್ತಿದ್ದ ಕಳ್ಳರು, ಇದೀಗ ಗ್ರಾಮದಲ್ಲಿನ ಬೈಕ್ ಕಳ್ಳತನ ಮಾಡುತ್ತಿದ್ದಾರೆ. ಇದರಿಂದ ಬೆ„ಕ್ ಕಳೆದುಕೊಂಡ ಮಾಲೀಕರು ಹಾಗೂ ಗ್ರಾಮಸ್ಥರು ಆತಂಕ ಪಡುವಂತಾಗಿದೆ.
ಕಳೆದ ಎರಡು ದಿನಗಳ ಹಿಂದೆ ಅದೆ ಕ್ಲಿನಿಕ್ ಮುಂಭಾಗದಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಮತ್ತೂಂದು ಬೈಕ್‌ನ ಲಾಕ್ ಮುರಿದ ಕಳ್ಳರು ಎರಡು ತಿಂಗಳ ಅಂತರದಲ್ಲಿ ಎರಡು ಬೈಕ್ ಕಳ್ಳತನ ಮಾಡಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಠಾಣೆಗೆ ದೂರು ಸಹ ನೀಡಿದ್ದಾರೆ.
ಹಾಡ ಹಗಲೇ ಕಳ್ಳತನ: ಜೂನ್ 20ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಮದ ಪೊಲೀಸ್ ಠಾಣೆಯ ಎದುರಿಗೆ ಹೊಟೇಲ್ ಮಾಲಿಕನ ಹಿರೋಹೋಂಡಾ ಬೈಕ್ ಕಳ್ಳತನವಾಗಿದೆ. ಗ್ರಾಮದಲ್ಲಿ ಸಾಕಷ್ಟು ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು ಈ ಬಗ್ಗೆ ಠಾಣೆಗೆ ದೂರು ನೀಡಿದ್ದರೂ ಯಾವುದೆ ಪ್ರಯೋಜನವಾಗುತ್ತಿಲ್ಲ. ಈ ಹಿಂದೆ ಸಾಕಷ್ಟು ಬೈಕ್ ಕಳ್ಳತನವಾಗಿದ್ದರೂ ಬೈಕ್ ಕಳ್ಳರ ಸುಳಿವೇ ಸಿಗುತ್ತಿಲ್ಲ ಎಂಬುದೆ ಗ್ರಾಮಸ್ಥರ ಆರೋಪವಾಗಿದೆ.
ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಂದು ಸೇರುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಚಲನ-ವಲನ ಸೆರೆಹಿಡಿಯಲು ದೊಡ್ಡದಾದ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಆದರೆ, ಸುಮಾರು ವರ್ಷಗಳಿಂದ ಸಿಸಿ ಕ್ಯಾಮೆರಾ ಕೆಟ್ಟು ಹೋಗಿದ್ದು, ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.