ಬಿಜೆಪಿ ಈಗ ಮೋದಿ-ಶಾ ಪಾರ್ಟಿ: ಪಾಟೀಲ

Team Udayavani, Apr 20, 2019, 11:49 AM IST

bag-1

ಬಾಗಲಕೋಟೆ: ದೇಶದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿದವರು ವಾಜಪೇಯಿ ಮತ್ತು ಅಡ್ವಾನಿಯವರು. ಆಗ ಭಾರತೀಯ ಜನತಾ ಪಕ್ಷವಾಗಿದ್ದ ಬಿಜೆಪಿ, ಇಂದು ಮೋದಿ-ಶಾ ಪಕ್ಷವಾಗಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಂತೆ, ಮೋದಿ ನೋಡಿ ಮತ ಹಾಕಿ ಎಂದು ಹೇಳುತ್ತಿದ್ದಾರೆ. ಹೀಗಾಗಿ ಬಾಗಲಕೋಟೆಯೂ ಸೇರಿದಂತೆ ಎಲ್ಲೆಡೆ ಬಿಜೆಪಿಗೆ ಬಹುಮತದ ಸೋಲು ಖಚಿತ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರು ಸೋಲಿನ ಭೀತಿಯಿಂದ ಭಾವನಾತ್ಮಕವಾಗಿ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ದೇಶದ ಗಡಿ ಕಾಯುವ ಸೈನಿಕರ ಹೆಸರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಇಂತಹ ಸುಳ್ಳುಗಳಿಗೆ ಜಿಲ್ಲೆಯ ಜನರು ಕಿವಿಗೊಡಲ್ಲ ಎಂದರು.

ಬಾಗಲಕೋಟೆ ಹರಿಯುವ ನೀರಾಗಲಿ: ಜಿಲ್ಲೆಯ ಜನರು 15 ವರ್ಷಗಳ ಕಾಲ ಗದ್ದಿಗೌಡರನ್ನು ಆಯ್ಕೆ ಮಾಡಿದ್ದಾರೆ. ಮೋದಿಯಿಂದಾಗಲಿ, ಗದ್ದಿಗೌಡರಿಂದಾಗಲಿ ಜಿಲ್ಲೆಗೆ ಅನುಕೂಲವಾಗಿಲ್ಲ. ಹೀಗಾಗಿ ಜನರು ಬದಲಾವಣೆ ಬಯಸುತ್ತಿದ್ದಾರೆ. ಬಾಗಲಕೋಟೆ ಜನರು, ಹರಿಯುವ ನೀರಿನಂತವರು. ನಿಲ್ಲುವ ನೀರಲ್ಲ. ಈ ಬಾರಿ, ಹರಿಯುವ ನೀರಾಗಲಿದೆ ಎಂದರು.

ಮಾತಿನಲ್ಲಿ ಮನೆ ಕಟ್ಟುವ ಮೋದಿ: ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರನ್ನು ಗೆಲ್ಲಿಸಿದಂತಹ ಕ್ಷೇತ್ರವಿದು. ಇಲ್ಲಿನ ಮತದಾರರು ಪ್ರಭುದ್ಧರಿದ್ದಾರೆ. ಸುಳ್ಳು ಭರವಸೆಗೆ ಒಂದು ಬಾರಿ ಮತ ಕೊಟ್ಟಿದ್ದಾರೆ. ಮತ್ತೆ ಅದೇ ಸುಳ್ಳು ಹೇಳುವವರಿಗೆ ಮತ ಕೊಡುವುದಿಲ್ಲ. ಮೋದಿ ಕೇವಲ ಮಾತಿನಲ್ಲೇ ಮನೆ ಕಟ್ಟುವ ಪ್ರಧಾನಿ. ಹೀಗಾಗಿ ಜನ ಒಂದು ಬಾರಿ ನಂಬಿ ಮೋಸ ಹೋಗಿದ್ದಾರೆ. ಮತ್ತದೇ ತಪ್ಪು ಮಾಡಲ್ಲ ಎಂಬ ವಿಶ್ವಾಸವಿದೆ. ಆದ್ದರಿಂದ ವಿಜಯಪುರ ಕ್ಷೇತ್ರದಲ್ಲಿ ಡಾ| ಸುನೀತಾ ಚವ್ಹಾಣ, ಬಾಗಲಕೋಟೆಯಲ್ಲಿ ವೀಣಾ
ಕಾಶಪ್ಪನವರ ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗದ್ದಿಗೌಡರ ಒಂದು ಸಭೆಗೂ ಭಾಗವಹಿಸಿಲ್ಲ: ಆಲಮಟ್ಟಿ ಜಲಾಶಯದಿಂದ ಮುಳುಗಡೆಯಾದ ನಗರದ ಜನರಿಗೆ ಪುನರ್‌ವಸತಿ, ಪುನರ್‌ ನಿರ್ಮಾಣ, ಸೌಲಭ್ಯ ಕಲ್ಪಿಸುವ ಮಹತ್ವದ ಬಿಟಿಡಿಎ ಸಭೆಗೆ ಒಂದು ಬಾರಿಯೂ ಗದ್ದಿಗೌಡರ ಭಾಗವಹಿಸಿಲ್ಲ. ಸಂತ್ರಸ್ತರ ಬಗ್ಗೆ ಧ್ವನಿ ಎತ್ತಿಲ್ಲ. ಹೀಗಾಗಿ ಜಿಲ್ಲೆಯ ಜನರು ಪಕ್ಷಾತೀತವಾಗಿ ಗದ್ದಿಗೌಡರ ವಿರುದ್ಧ ಮಾತನಾಡುತ್ತಿದ್ದಾರೆ. ಬಿಜೆಪಿಯ ಹಲವು ಕಾರ್ಯಕರ್ತರು, ಗದ್ದಿಗೌಡರು ಏನೂ ಮಾಡಿಲ್ಲ. ನಾವು ಕಾಂಗ್ರೆಸ್‌ಗೆ ಮತ ಹಾಕುತ್ತೇವೆ ಎನ್ನುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ಸೌದಾಗರ, ಓಬಿಸಿ ಜಿಲ್ಲಾ ಘಟಕದ ಅಧ್ಯಕ್ಷ ಡಾ| ದೇವರಾಜ ಪಾಟೀಲ, ವಕ್ತಾರ ಆನಂದ ಜಿಗಜಿನ್ನಿ, ಮುಖಂಡರಾದ ಡಾ| ಎಂ.ಎಸ್‌. ದಡ್ಡೇನವರ, ಜಿ.ಎಂ. ಸಿಂಧೂರ ಇದ್ದರು.

ಕಾಂಗ್ರೆಸ್‌ನಲ್ಲಿ ಯಾವುದೇ ರೀತಿಯ ಆಂತರಿಕ ಭಿನ್ನಾಭಿಪ್ರಾಯವಿಲ್ಲ. ಮುಧೋಳದಲ್ಲಿ ಸಚಿವ ತಿಮ್ಮಾಪುರ-ಸತೀಶ ಬಂಡಿವಡ್ಡರ ಕೂಡಿ ಪ್ರಚಾರ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಅಜಯಕುಮಾರ ಸರನಾಯಕರು ನಿತ್ಯ ಕ್ಷೇತ್ರದಲ್ಲಿ ಮತಯಾಚಿಸುತ್ತಿದ್ದಾರೆ. ಎಸ್‌. ಆರ್‌. ಪಾಟೀಲರು, ಇಡೀ ಕ್ಷೇತ್ರದಲ್ಲಿ ಸಂಚರಿಸಿ, ಕಾಂಗ್ರೆಸ್‌ ಗೆಲುವಿಗಾಗಿ ಕೆಲಸ ಮಾಡುತ್ತಿದ್ದಾರೆ. ಹೀಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಕ್ರಿಯಾಶೀಲ ಅಭ್ಯರ್ಥಿ ವೀಣಾ ಕಾಶಪ್ಪನವರ ಗೆಲುವಿಗೆ ಶ್ರಮ ಹಾಕುತ್ತಿದ್ದಾರೆ.
ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.