ನಿರಾಣಿ ದೂರದೃಷ್ಟಿ ನಾಯಕ; ಮತ್ತೊಮ್ಮೆ ಗೆಲ್ಲಿಸಿ


Team Udayavani, Apr 25, 2023, 10:12 AM IST

thumb

ಬಾಗಲಕೋಟೆ: ಕೇಂದ್ರ ಮತ್ತು ರಾಜ್ಯದಲ್ಲಿ ಎರಡು ಕಡೆ ಬಿಜೆಪಿ ಸರ್ಕಾರ ಇರುವುದರಿಂದ ರಾಜ್ಯದ ಅಭಿವೃದ್ದಿ ಕಾರ್ಯಗಳಿಗೆ ವೇಗ ದೊರಕಿದೆ. ಸಮರ್ಥ ನಾಯಕತ್ವ, ಸ್ವಚ್ಚ ಆಡಳಿತ, ಜನಪರ ಕಾರ್ಯಕ್ರಮಗಳು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಹಲವು ಹೊಸತನಗಳಿಗೆ ಸಾಕ್ಷಿಯಾಗಿದೆ. ಇದು ಯುವಕರ ಪಕ್ಷ ಹೀಗಾಗಿ ಕರ್ನಾಟಕಕ್ಕೆ ಬಿಜೆಪಿಯೇ ಭರವಸೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬೀಳಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಹೊಸ ಮುಖಗಳಿಗೆ ಆದ್ಯತೆ ನೀಡಿದೆ. ಇದರ ಫಲವಾಗಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಲಿದೆ. ಕಳೆದ 4 ವರ್ಷಗಳ ಅವಧಿಯಲ್ಲಿ ಬಿ. ಎಸ್‌. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೊವಿಡ್‌ ಸಂಕಷ್ಟದ ಮಧ್ಯೆಯೂ ಉತ್ತಮ ಆಡಳಿತ ನೀಡಿದೆ, ನೀರಾವರಿ, ಕೃಷಿ, ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ನೇಕಾರರು, ಮೀನುಗಾರರು, ಕುಶಲಕರ್ಮಿಗಳು ಸೇರಿದಂತೆ ಎಲ್ಲ ಶ್ರಮಿಕ ವರ್ಗಗಳ ಏಳ್ಗೆಗೆ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಯಕರ್ತರು ಸರ್ಕಾರದ ಸಾಧನೆಗಳನ್ನು ಜನತೆಗೆ ಮುಟ್ಟಿಸುವ ಜವಾಬ್ದಾರಿ ನಿರ್ವಹಿಸಬೇಕು ಎಂದು ತಿಳಿಸಿದರು.

ಮುರುಗೇಶ ನಿರಾಣಿ ದೂರದೃಷ್ಟಿಯ ನಾಯಕ. 2 ಬಾರಿ ಕೈಗಾರಿಕೆ ಸಚಿವರಾಗಿ ಕರ್ನಾಟಕ ಕೈಗಾರಿಕಾ ರಂಗಕ್ಕೆ ಹಲವು ಮಹತ್ವಾಕಾಂಕ್ಷೆಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯದ ಕೈಗಾರಿಕಾ ರಂಗ ವಿಸ್ತರಿಸುವ ಮೂಲಕ ರಾಜ್ಯದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವರು ಕಾರಣೀಕರ್ತರಾಗಿದ್ದಾರೆ. ಬೀಳಗಿ ಮತಕ್ಷೇತ್ರದಲ್ಲಿಯೂ ಅವರು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರೈತರ ಸಮಸ್ಯೆ ಅರಿತು ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಮತ್ತೂಮ್ಮೆ ಕಮಲ ಅರಳುವುದು ನಿಶ್ಚಿತ, ಮುರುಗೇಶ ನಿರಾಣಿಯವರನ್ನು ಮತ್ತೂಮ್ಮೆ ಗೆಲ್ಲಿಸುವ ಮೂಲಕ ಬಿಜೆಪಿಗೆ ಬೀಳಗಿಯ ಜನತೆ ಶಕ್ತಿ ತುಂಬಬೇಕು ಎಂದರು.

ವಿಧಾನಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ಅಭಿವೃದ್ದಿ ಕಾರ್ಯಗಳು, ಶೋಷಿತರು ಹಾಗೂ ಶ್ರಮಿಕರ ಕಲ್ಯಾಣಕ್ಕೆ ಹಮ್ಮಿಕೊಂಡ ಕಾರ್ಯಕ್ರಮಗಳು ಬಿಜೆಪಿ ಬಗೆಗಿನ ಜನರ ವಿಶ್ವಾಸವನ್ನು ಹೆಚ್ಚಿಸಿವೆ. ಆಡಳಿತಾತ್ಮಕವಾಗಿ ತುಂಬ ವಿಶಾಲವಾದ ಬೀಳಗಿ ಮತಕ್ಷೇತ್ರವನ್ನು ಮುರುಗೇಶ ನಿರಾಣಿಯವರು ಅಚ್ಚುಕಟ್ಟಾಗಿ ಮುನ್ನಡೆಸಿಕೊಂಡು ಹೊರಟಿದ್ದಾರೆ. ಎಲ್ಲ ವರ್ಗದ ಜನರನ್ನು ಪ್ರೀತಿಸುವ, ಗೌರವಿಸುವ ಮುರುಗೇಶ ನಿರಾಣಿಯವರಿಗೆ ಆಶಿರ್ವದಿಸುವ ಮೂಲಕ ಮತ್ತೂಮ್ಮೆ ದಾಖಲೆಯ ಅಂತರದಲ್ಲಿ ಗೆಲ್ಲಿಸಬೇಕೆಂದು ವಿನಂತಿಸಿಕೊಂಡರು.

ವಿಧಾನಪರಿಷತ್‌ ಸದಸ್ಯ ಹಣಮಂತ ನಿರಾಣಿ, ಬೀಳಗಿ ಮಂಡಲ ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಮಲ್ಲಪ್ಪ ಶಂಭೋಜಿ, ವೀರಣ್ಣ ತೋಟದ, ಹೊಳಬಸು ಬಾಳಶೆಟ್ಟಿ, ಮಹಾಂತೇಶ ಕೋಲಕಾರ, ವಿ.ಜಿ. ರೇವಡಗಾರ, ಮಲ್ಲಿಕಾರ್ಜುನ ಅಂಗಡಿ ಮುಂತಾದವರು ಉಪಸ್ಥಿತರಿದ್ದರು.

ಜನರ ಆಶೋತ್ತರಗಳಿಗೆ ಸ್ಪಂದಿಸಿದ ನಿರಾಣಿ: ಪ್ರಧಾನಮಂತ್ರಿ ಕೃಷಿ ಸಮ್ಮಾನ್‌ ಯೋಜನೆ ಮೂಲಕ 6 ಸಾವಿರ ಕೇಂದ್ರ ಸರ್ಕಾರ ನೀಡಿದರೆ ರಾಜ್ಯ ಸರ್ಕಾರ 4 ಸಾವಿರ ನೀಡುವ ಮೂಲಕ ವಾರ್ಷಿಕ 10 ಸಾವಿರ ನೀಡುವ ಮೂಲಕ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡುವ ಜೊತೆಗೆ ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳ ಶಿಕ್ಷಣಕ್ಕೆ ಜೊತೆಯಾಗಿ ನಿಂತಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ವಿಧಾನಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಹೇಳಿದರು.

ಗೋವಿನಕೊಪ್ಪ, ಕಲಾದಗಿ ಗ್ರಾಮದಲ್ಲಿ ಬೀಳಗಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಮಾತನಾಡಿ, ಕಳೆದ 5 ವರ್ಷಗಳಲ್ಲಿ ಮಾಡಿದ ಜನಸೇವೆಗೆ ಪ್ರತಿಫಲವಾಗಿ ಹೋದಲೆಲ್ಲ ನಮಗೆ ಅಭೂತಪೂರ್ವ ಬೆಂಬಲ ದೊರಕುತ್ತಿದೆ. ಜನತೆಯ ಆಶಯ-ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದೇನೆ. 3 ಬಾರಿ ಆಶಿರ್ವಾದ ಮಾಡಿದ್ದಿರಿ. ಈ ಬಾರಿಯೂ ನಿಮ್ಮ ಬೆಂಬಲ ಆಶೀರ್ವಾದ ಇರಲಿ ಮತದಾರರಲ್ಲಿ ವಿನಂತಿಸಿಕೊಂಡರು. ಕಾಂಗ್ರೆಸ್‌ ಜಾತಿ-ಜಾತಿಗಳಲ್ಲಿ ಜಗಳ ಹಚ್ಚುವ ಮೂಲಕ ಒಡೆದು ಆಳುವ ನೀತಿ ಅನುಸರಿಸುತ್ತದೆ. ಬೀಳಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ದು ಈ ಬಾರಿ ಖೇಲ್‌ ಕತಂ ನಾಟಕ ಬಂದ್‌ ಆಗಲಿದೆ ಎಂದು ಅವರು ಹೇಳಿದರು. ವೆಂಕಟೇಶ ದಾಸನ್ನವರ, ವಿಠuಲ ಸೊನ್ನದ, ಶ್ರೀನಿವಾಸ ಪೂಜಾರ, ಸುರೇಶ ಮಾದರ, ಮಂಜುಗೌಡ ಪಿ. ಪಾಟೀಲ, ಶಿವಪುತ್ರಪ್ಪ ದಾಸನ್ನವರ, ಉದಂಡಪ್ಪ ತಪರೇಶ ಹಾಗೂ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.