ಬಿಜೆಪಿ ಸ್ಥಾಪನಾ ದಿನಾಚರಣೆ: ಕಾರ್ಯಕರ್ತರ ಜವಾಬ್ದಾರಿ ಹೆಚ್ಚಾಗಿದೆ; ಧರೆಪ್ಪ ಉಳ್ಳಾಗಡ್ಡಿ
Team Udayavani, Apr 6, 2022, 6:07 PM IST
ರಬಕವಿ-ಬನಹಟ್ಟಿ: ವಿಶ್ವದ ದೃಷ್ಠಿಕೋನ ಮತ್ತು ಭಾರತದ ದೃಷ್ಠಿಕೋನದಿಂದ ಬಿಜೆಪಿ ಪಕ್ಷದ ಹೊಣೆಗಾರಿಕೆ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ಹೊಣೆಗಾರಿಕೆ ಬಹಳಷ್ಟು ಮಹತ್ವದ್ದಾಗಿದೆ. ನಮ್ಮ ಪಕ್ಷಕ್ಕೆ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಾಗಿದೆ. ನಮ್ಮ ದೇಶದ ಹತ್ತಿರ ತನ್ನದೆ ಆದ ನೀತಿ ನಿಯಮಗಳಿವೆ. ಇದರಿಂದಾಗಿ ಭಾರತ ಇಂದು ಅನೇಕ ಕ್ಷೇತ್ರಗಳಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಸಾಧಿಸಿದೆ ಎಂದು ರಬಕವಿ ಬನಹಟ್ಟಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ ತಿಳಿಸಿದರು.
ಅವರು ಬುಧವಾರ ರಬಕವಿ ನಗರದ ಬೂತ್ ಮಟ್ಟದ ಅಧ್ಯಕ್ಷರ ಮನೆಯ ಮುಂಭಾಗದಲ್ಲಿ ಬಿಜೆಪಿ ಪಕ್ಷದ ಧ್ವಜವನ್ನು ಅನಾವರಣಗೊಳಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ನಗರಸಭೆಯ ಸದಸ್ಯ ಯಲ್ಲಪ್ಪ ಕಟಗಿ ಮಾತನಾಡಿ, ಈಚೇಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸಾಧನೆ ಗಮನ ಸೆಳೆಯುವಂತಹದು. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶವನ್ನು ಮುನ್ನಡೆಸಲು ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ನಿರ್ವಹಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಬೇಕು. ಪಕ್ಷಕ್ಕೆ ನಿಷ್ಠೆ ಉಳ್ಳವರಿಗೆ ಪಕ್ಷ ಫಲವನ್ನು ನೀಡುತ್ತದೆ ಎಂದರು.
ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ ಬಾಳೇಶ ಪಟೇಲ, ದಾನಪ್ಪ ತುಂಗಳ, ಪಕ್ಷದ ಪ್ರಧಾನ ಕಾರ್ಯದರ್ಶಿ ಈಶ್ವರ ಯಳಸಂಗ, ಕಾರ್ಯಕರ್ತರಾದ ಶಾಂತವೀರ ಗೋಣಿ, ರಾಘು ಖವಾಸಿ, ಗಿರೀಶ ರಾವಳ, ಆನಂದ ಚವಳಗಿ, ಅನ್ನಪ್ಪ ಚಾಪಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.