15ರಂದು ಕಾಂಗ್ರೆಸ್‌ನಿಂದ ನವ ಸಂಕಲ್ಪ ಶಿಬಿರ
ಪಕ್ಷ ಸಂಘಟನೆ-ಯುಕೆಪಿ ಸೇರಿ ಇತರೆ ವಿಷಯಗಳ ಚರ್ಚೆ
Team Udayavani, Jul 12, 2022, 5:08 PM IST
ಬಾಗಲಕೋಟೆ: ಕಾಂಗ್ರೆಸ್ ಪಕ್ಷದಿಂದ ಜಿಲ್ಲಾ ಮಟ್ಟದ ನವಸಂಕಲ್ಪ ಚಿಂತನಾ ಶಿಬಿರವನ್ನು ಜು.15ರಂದು ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ಸೋಮವಾರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10:30ಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಬಿರ ಉದ್ಘಾಟಿಸಲಿದ್ದು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ಜಿಲ್ಲೆಗೆ ಸಂಬಂಧಿಸಿದ ಐದು ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಪಕ್ಷ ಸಂಘಟನೆ, ಸಾಮಾಜಿಕ ಜಾಲ ಸಬಲೀಕರಣ, ಮಹಿಳಾ ವಿಭಾಗದ ಸಂಘಟನೆ, ಮುಳುಗಡೆ ಸಮಸ್ಯೆ, ಯುಕೆಪಿ ಕುರಿತು ಚರ್ಚಿಸಲಾಗುವುದು ಎಂದರು.
ಸಂಜೆ 5ಕ್ಕೆ ನಡೆಯಲಿರುವ ಶಿಬಿರ ಸಮಾರೋಪ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಎಸ್.ಆರ್. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಎಂ. ನಾಗಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೀಣಾ ಕಾಶಪ್ಪನವರ, ಎಂ.ಎಚ್. ಚಲವಾದಿ ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಿಂದ 35 ಜನರಂತೆ ಒಟ್ಟು 350 ಜನ ಕಾರ್ಯಕರ್ತರು ಶಿಬಿರದಲ್ಲಿ ಪಾಲ್ಗೊಳ್ಳುವರು ಎಂದರು.
ಮಾಜಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಸಂತ್ರಸ್ತರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಲು ಹಿಂದೇಟು ಹಾಕಿದೆ. ಮುಳುಗಡೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸುವಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ದೂರಿದರು.
ಮಾಜಿ ಸಚಿವ ಎಚ್.ವೈ. ಮೇಟಿ ಮಾತನಾಡಿ, ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಬಾಗಲಕೋಟೆಗೆ ಮಂಜೂರ ಮಾಡಿದ ಸರ್ಕಾರಿ ಮೆಡಿಕಲ್ ಕಾಲೇಜು ಇನ್ನೂ ಜಾರಿಗೊಂಡಿಲ್ಲ. ಕಾಲೇಜು ಆರಂಭವಾದರೆ ಬಡಮಕ್ಕಳಿಗೆ ವೈದ್ಯಕೀಯ ಶಿಕ್ಷಣ ದೊರೆಯುತ್ತದೆ. ಅದರ ಕಡೆ ಸರ್ಕಾರ ಹೆಚ್ಚು ಗಮನ ಹರಿಸಲಿ ಎಂದು ಹೇಳಿದರು.
ಮಾಧ್ಯಮ ವಕ್ತಾರ ನಾಗ ರಾಜ ಹದ್ಲಿ, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಆನಂದ ಶಿಲ್ಪಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.