ಕಾರಜೋಳ-ಪಾಟೀಲ ವಾಕ್ಸಮರ ; ಜಾತಿ ಬಣ್ಣ ಬೇಡ

Team Udayavani, Jan 17, 2022, 10:11 PM IST

ರತಯುಹಗ್ಷಱ

ಬಾಗಲಕೋಟೆ: ಜಲಸಂಪನ್ಮೂಲ ಇಲಾಖೆಯ ಸಚಿವ ಗೋವಿಂದ ಕಾರಜೋಳ ಹಾಗೂ ಮಾಜಿ ಸಚಿವ ಎಂ.ಬಿ. ಪಾಟೀಲರ ಮಧ್ಯೆ ನಡೆಯುತ್ತಿರುವ ವಾಕ್ಸಮರಕ್ಕೆ ಕೆಲವರು ಜಾತಿಯ ಬಣ್ಣ ಬಳಿದು, ಸಮಾಜದಲ್ಲಿ ಸಾಮರಸ್ಯ ಕೆಡಿಸುತ್ತಿದ್ದಾರೆ. ಇಂತಹ ಸಾಮರಸ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ ಹೇಳಿದರು.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂ.ಬಿ. ಪಾಟೀಲರು, ಜಲ ಸಂಪನ್ಮೂಲ ಇಲಾಖೆಗೆ ಸಂಬಂ ಧಿಸಿದಂತೆ ಸಚಿವ ಗೋವಿಂದ ಕಾರಜೋಳರ ಬಗ್ಗೆ ರಾಜಕೀಯವಾಗಿ ಟೀಕೆ ಮಾಡಿದ್ದಾರೆ. ಅದನ್ನು ರಾಜಕೀಯವಾಗಿಯೇ ಎದುರಿಸಬೇಕು. ಆದರೆ, ಅದಕ್ಕೆ ಜಾತಿಯ ಬಣ್ಣಹಚ್ಚಿ, ಎಂ.ಬಿ. ಪಾಟೀಲರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಪಾಟೀಲರನ್ನು ನಿಂದಿಸಲಾಗಿದೆ.

ಇದು ಖಂಡನೀಯ ಎಂದರು. ಕಾರಜೋಳರು ಶರಣ ಸಂಸ್ಕೃತಿಯಲ್ಲಿ ಬೆಳೆದು ಬಂದಿದ್ದಾರೆ. ಅವರ ಬಗ್ಗೆ ನಮಗೂ ಗೌರವವಿದೆ. ಎಂ.ಬಿ. ಪಾಟೀಲರು ಕೂಡ ರಾಜ್ಯದ ಜಲ ಸಂಪನ್ಮೂಲ ಸಚಿವರಾಗಿ, ಗೃಹ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನೀರಾವರಿ ಸಚಿವರಾಗಿದ್ದಾಗ ಬರಡು ಭೂಮಿಗೆ ನೀರು ಕಲ್ಪಿಸಿ ಭಗೀರಥರಾಗಿದ್ದಾರೆ. ರಾಜಕೀಯ ಟೀಕೆ-ಆರೋಪ-ಪ್ರತ್ಯಾರೋಪ ಬಂದಾಗ ಅವುಗಳನ್ನು ರಾಜಕೀಯವಾಗಿಯೇ ಎದುರಿಸಬೇಕು. ಅದನ್ನು ಬಿಟ್ಟು, ಜಾತಿಯ ಬಣ್ಣಹಚ್ಚಿ, ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು. ಕಾರಜೋಳರ ಬಗ್ಗೆ ಎಂ.ಬಿ. ಪಾಟೀಲರು ಬಳಸಿದ ಕೆಲವು ಪದಗಳನ್ನು ನಾವು ಒಪ್ಪುವುದಿಲ್ಲ. ಅವರ ಮನೆಯ ಎದುರು ಪ್ರತಿಭಟನೆ ಹಾಗೂ ಪದ ಬಳಕೆ ಮಾಡಿರುವುದನ್ನು ಒಪ್ಪುವುದಿಲ್ಲ. ಇಬ್ಬರೂ ದೊಡ್ಡ ನಾಯಕರು.

ಅವರ ರಾಜಕೀಯ ವಾಕ್ಸಮರ, ರಾಜಕೀಯವಾಗಿಯೇ ಇರಲಿ ಎಂದರು. ಜಿಲ್ಲೆಯಾದ್ಯಂತ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಶೇ.70ರಷ್ಟು ಪೂರ್ಣಗೊಂಡಿದ್ದು, ಬೂತ್‌ ಹಾಗೂ ತಾಲೂಕು ಮಟ್ಟದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಆನ್‌ಲೈನ್‌ ಮೂಲಕವೂ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ ಎಂದು ತಿಳಿಸಿದರು. ದೇಶ ವಿರೋಧಿ  ಹೇಳಿಕೆ ನೀಡಿರುವ ಎಂಐಎಂ ಪಕ್ಷದ ರಾಜ್ಯಾಧ್ಯಕ್ಷ ಉಸ್ಮಾನಗಣಿ ಹುಮನಾಬಾದ್‌ ಅವರ ವಿರುದ್ಧ ದೇಶದ್ರೋಹದ ಕೇಸ್‌ ದಾಖಲಿಸಬೇಕು ಎಂದು ನಾಗರಾಜ ಹದ್ಲಿ ಒತ್ತಾಯಿಸಿದರು.

ನಗರಸಭೆ ಸದಸ್ಯ ಚನ್ನವೀರ ಅಂಗಡಿ, ಬಾಗಲಕೋಟೆ ಗ್ರಾಮೀಣ ಬ್ಲಾಕ್‌ ಅಧ್ಯಕ್ಷ ಎಸ್‌.ಎನ್‌. ರಾಂಪುರ, ಮುಖಂಡರಾದ ಸಂಗಮೇಶ ದೊಡಮನಿ, ಎನ್‌.ಜಿ. ಕೋಟಿ, ಗಿರೀಶ ಹೆಬ್ಬಳ್ಳಿ ಮುಂತಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.