ಗುಣಮಟ್ಟದ ಬೀಜೋತ್ಪಾದನೆಯಿಂದ ಬಿತ್ತನೆ ಕೈಗೊಳ್ಳಿ
ಗುಣಮಟ್ಟದ ಬೀಜಗಳನ್ನು ಉತ್ಪಾದಿಸಿ ವಿಶ್ವವಿದ್ಯಾಲಯಕ್ಕೆ ನೀಡಲು ಕೈಜೋಡಿಸುವಲ್ಲಿ ಮುಂದಾಗಬೇಕು
Team Udayavani, Mar 18, 2022, 5:38 PM IST
ಬಾಗಲಕೋಟೆ: ರೈತರು ನಕಲಿ ಬೀಜಗಳು ಬಿತ್ತದೆ ಗುಣಮಟ್ಟದ ಬೀಜಗಳಿಂದ ಬಿತ್ತನೆ ಮಾಡುವ ಮೂಲಕ ಉತ್ತಮ ಫಸಲು ಪಡೆದುಕೊಳ್ಳಲು ಮುಂದಾಗಬೇಕು ಎಂದು ತೋವಿ ವಿಶ್ವವಿದ್ಯಾಲಯದ ಕುಲಪತಿ ಡಾ|ಕೆ.ಎಂ. ಇಂದಿರೇಶ ಹೇಳಿದರು.
ನವನಗರದ ಸೆಕ್ಟರ್ ನಂ.1 ರಲ್ಲಿ ಬೀಜ ಘಟಕ ಹಾಗೂ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈರುಳ್ಳಿ ಬೀಜೋತ್ಪಾದನಾ ಕ್ಷೇತ್ರೋತ್ಸವದಲ್ಲಿ ಮಾತನಾಡಿದರು.
ಸಂಶೋಧನಾ ನಿರ್ದೇಶಕ ಡಾ|ಎಚ್.ಪಿ. ಮಹೇಶ್ವರಪ್ಪ ಮಾತನಾಡಿ, ಬೀಜೋತ್ಪಾದನೆಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಬೇಕು. ರೈತರು ಯಾವಾಗಲೂ ಒಂದೇ ಬೆಳೆಯ ಮೇಲೆ ಅವಲಂಬಿತರಾಗದೆ ಬೇಡಿಕೆ ಇರುವ ಹೆಚ್ಚು ಇಳುವರಿ ಕೊಡುವ ತಳಿಗಳ ಜೋತ್ಪಾದನೆಯನ್ನು ಮಾಡಿ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ|ರಾಹುಲಕುಮಾರ ಬಾವಿದೊಡ್ಡಿ ಮಾತನಾಡಿ, ತೋವಿವಿಯ ಶಿಫಾರಿತ ಹಾಗೂ ತೋವಿವಿಯಲ್ಲಿ ಲಭ್ಯವಿರುವ ಬೀಜಗಳನ್ನು ಪಡೆದು ಬಿತ್ತನೆ ಮಾಡುವುದು ರೈತರ ಅಭಿಲಾಷೆಯಾಗಬೇಕು. ರೈತರ ಕ್ಷೇತ್ರಗಳಲ್ಲಿ ವಿಶ್ವವಿದ್ಯಾಲಯ ಹೆಚ್ಚಿನ ಬೀಜೋತ್ಪಾದನೆ ಕೈಗೊಂಡರೆ ಹೆಚ್ಚು ರೈತರಿಗೆ ಬೀಜ ಒದಗಿಸಬಹುದು ಎಂದರು.
ವಿಸ್ತರಣಾ ನಿರ್ದೇಶಕ ಡಾ|ಎಸ್.ಐ. ಅಥಣಿ ಮಾತನಾಡಿ, ರೈತರು ವಿಶ್ವವಿದ್ಯಾಲಯದಿಂದ ಬಿಡುಗಡೆಯಾಗಿರುವ ತಂತ್ರಜ್ಞಾನಗಳ ಬಗ್ಗೆ ವಿಜ್ಞಾನಿಗಳಿಂದ ಮಾಹಿತಿ ಪಡೆದು ಅವುಗಳನ್ನು ತಮ್ಮ ಹೊಲಗಳಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ರೈತರು ತಾವೇ ವೈಜ್ಞಾನಿಕ ರೀತಿಯಲ್ಲಿ ಬೀಜೋತ್ಪಾದನೆಯನ್ನು ಕೈಗೊಂಡು ಇತರೆ ರೈತರಿಗೆ ಗುಣಮಟ್ಟದ ಬೀಜಗಳನ್ನು ಒದಗಿಸಬೇಕು ಹಾಗೂ ವಿಶ್ವವಿದ್ಯಾಲಯದ ಜತೆಗೆ ಒಪ್ಪಂದ ಮಾಡಿಕೊಂಡು ಉತ್ತಮ
ಗುಣಮಟ್ಟದ ಬೀಜಗಳನ್ನು ಉತ್ಪಾದಿಸಿ ವಿಶ್ವವಿದ್ಯಾಲಯಕ್ಕೆ ನೀಡಲು ಕೈಜೋಡಿಸುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು.
ಬೀಜ ಘಟಕದ ವಿಶೇಷಾಧಿ ಕಾರಿ ಡಾ| ಎಂ.ಎಸ್. ಲೋಕೇಶ್, ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕ ಡಾ|ಕುಲಪತಿ ಹಿಪ್ಪರಗಿ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ವಿಸ್ತರಭಾ ಮುಂದಾಳು ಡಾ|ಶಶಿಕುಮಾರ ಎಸ್., ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಸಹಾಯಕ ನಿರ್ದೇಶಕ ಶ್ರೀಕಾಂತ ಗಿಡಗಂಟಿ ಹಾಗೂ ವಿಶ್ವವಿದ್ಯಾಲಯದ ಇತರೆ ಅ ಕಾರಿಗಳು, ವಿಜ್ಞಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ ಈರುಳ್ಳಿ ಬೀಜೋತ್ಪಾದಕರಿಗೆ ತಾಂತ್ರಿಕ ಮಾರ್ಗದರ್ಶನ, ಸಲಹೆ, ಸಂಯೋಜನೆ ಕುರಿತಾಗಿ ಚರ್ಚೆ ಹಾಗೂ ಸಂವಾದ ನಡೆಸಿದರು.
ವಿಸ್ತರಣಾ ಮುಂದಾಳು ಡಾ| ಶಶಿಕುಮಾರ ಎಸ್. ಸ್ವಾಗತಿಸಿದರು. ಡಾ|ಎಂ.ಎಸ್. ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಡಾ| ಶಿವಯೋಗಿ ರ್ಯಾವಳದ, ಡಾ| ಬಾಪುರಾಯಗೌಡ ಪಾಟೀಲ ಬೀಜೋತ್ಪಾದನೆಯ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು. ಸಹಾಯಕ ಪ್ರಾಧ್ಯಾಪಕಿ ಡಾ|ನಮಿತಾ ರಾವುತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.