ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ಬಿಜೆಪಿಯ ಪಾತ್ರವಿಲ್ಲ: ಈರಣ್ಣ ಕಡಾಡಿ
ರಾಜ್ಯಸಭೆ ಸದಸ್ಯ ಕಡಾಡಿ ಹೇಳಿಕೆ | ಆರು ತಿಂಗಳಿಂದ ತನಿಖೆ ನಡೆಸಿ ದಾಳಿ ಮಾಡ್ತಾರೆ
Team Udayavani, Oct 7, 2020, 1:49 PM IST
ಬಾಗಲಕೋಟೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಳೆ ಸಿಬಿಐ ದಾಳಿ ನಡೆಸಿರುವ ಹಿಂದೆ ಬಿಜೆಪಿಯ ಪಾತ್ರವಿಲ್ಲ. ನಮ್ಮ ಸರ್ಕಾರ ಅಥವಾ ಪಕ್ಷ ಸಂವಿಧಾನಾತ್ಮಕ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷರೂ ಆಗಿರುವ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಹಾಗೂ ಇಡಿಯವರು ಈ ಹಿಂದೆಯೇ ಡಿ.ಕೆ. ಶಿವಕುಮಾರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಅದರ ಮುಂದುವರೆದ ಭಾಗವಾಗಿ ಈಗ ಮತ್ತೆ ದಾಳಿ ನಡೆಸಿದ್ದಾರೆ. ಸಿಬಿಐನವರು ಏಕಾಏಕಿ ದಾಳಿ ನಡೆಸಲ್ಲ. ಅವರು ಆರು ತಿಂಗಳ ಕಾಲ ಸಮಗ್ರ ತನಿಖೆ ನಡೆಸಿ, ಅನುಮಾನ ಬಂದರೆ ದಾಳಿ ನಡೆಸುತ್ತಾರೆ ಎಂದರು.
ಕೇವಲ ಡಿಕೆಶಿ ಒಬ್ಬರೇ ಅಲ್ಲ. ಆರ್ಥಿಕ ಅಪರಾಧ ಯಾರೇ ಮಾಡಿದರೂ ಸಿಬಿಐ, ಇಡಿ ದಾಳಿ ನಡೆಸುತ್ತವೆ. ಕಾಂಗ್ರೆಸ್‌ನವರನ್ನು ಈ ವಿಷಯದಲ್ಲಿ ಗುರಿ ಮಾಡಲಾಗುತ್ತಿದೆ ಎಂಬುದು ಸುಳ್ಳು. ದಾಳಿ ಮಾಡಿರುವುದನ್ನೇ ಅನುಕಂಪ ಮಾಡಿಕೊಳ್ಳಲು ಕಾಂಗ್ರೆಸ್‌ನವರು ಹೊರಟಿದ್ದಾರೆ ಎಂದು ಟೀಕಿಸಿದರು.
ಯಾರೇ ಅಕ್ರಮ ಆಸ್ತಿ ಮಾಡಿದ್ದರೂ ಮುಚ್ಚಿಡಲು ಸಾಧ್ಯವಿಲ್ಲ. ಒಂದಿಲ್ಲ ಒಂದು ದಿನ ಹೊರ ಬರಲೇಬೇಕು. ಸೂಕ್ತ ದಾಖಲೆಗಳಿದ್ದರೆ ಸಿಬಿಐನವರು ಮಾಜಿ ಸಿದ್ದರಾಮಯ್ಯ ಅವರ ಮೇಲೂ ದಾಳಿ ನಡೆಸುತ್ತಾರೆ. ಸಿದ್ದರಾಮಯ್ಯನವರ ದಾಖಲೆ ಬೇಕಲ್ಲ. ಹೀಗಾಗಿ ದಾಖಲೆ ಸಿಕ್ಕವರ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಒಂದೇ ದಿನ ಲಕ್ಷ ಕೋವಿಡ್ ಪರೀಕ್ಷೆ: ಶೀಘ್ರವೇ ಈ ಪ್ರಮಾಣ 1.5 ಲಕ್ಷಕ್ಕೆ ಏರಿಕೆ: ಡಾ.ಸುಧಾಕರ್
ಸಿಬಿಐ ದಾಳಿ ವಿಷಯದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ದಾಳಿ ಮಾಡಲು ಬಿಜೆಪಿಯ ಯಾರೊಬ್ಬರೂ ಹೇಳಿಲ್ಲ. ಈ ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಿ, ಅನುಕಂಪ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ದೂರಿದರು.
ಚುನಾವಣೆ ಘೋಷಣೆ ಬಳಿಕ ಚರ್ಚೆ:
ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಪ ಚುನಾವಣೆ ಘೋಷಣೆಯಾಗಿಲ್ಲ. ಹೀಗಾಗಿ ಈಗಲೇ ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆಸಿಲ್ಲ. ಕೇಂದ್ರದ ರೈಲ್ವೆ ಖಾತೆಯ ಅತ್ಯಂತ ಕ್ರಿಯಾಶೀಲ ಸಚಿವರನ್ನು ಕಳೆದುಕೊಂಡ ದುಃಖದಲ್ಲಿದ್ದೇವೆ. ಆ ದುಃಖದಿಂದ ಇನ್ನೂ ನಾವು ಹೊರ ಬಂದಿಲ್ಲ. ಹೀಗಾಗಿ ಟಿಕೆಟ್ ಹಂಚಿಕೆ ಕುರಿತು ಚರ್ಚೆಯೂ ನಡೆದಿಲ್ಲ ಎಂದರು.
ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ಡಾ|ವೀರಣ್ಣ ಚರಂತಿಮಠ, ಮಾಜಿ ಶಾಸಕರಾದ ಪಿ.ಎಚ್. ಪೂಜಾರ, ನಾರಾಯಣಸಾ ಬಾಂಡಗೆ, ಬಿಜೆಪಿ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಉಪಚುನಾವಣೆಯಲ್ಲಿ ಬಿಜೆಪಿ ಸೋಲುವುದು ಖಚಿತವಾಗಿಯೇ ಸಿಬಿಐ ದಾಳಿ: ಎಂ.ಬಿ.ಪಾಟೀಲ್
ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈ
ಭೂ ಸುಧಾರಣೆ ಕಾಯಿದೆ, ಎಪಿಎಂಸಿ ಸಹಿತ ವಿವಿಧ ಕಾನೂನು ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಯಗಳ ಹೆಸರಿನಲ್ಲಿ ನಡೆದ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಪ್ರತಿಭಟನೆ ನಡೆಸಿದವರು ನಿಜವಾದ ರೈತ ಸಂಘಟನೆಯವರಲ್ಲ. ಹೀಗಾಗಿ ಬಿಜೆಪಿ ರೈತ ಮೋರ್ಚಾದಿಂದ ರಾಜ್ಯಾದ್ಯಂತ ರೈತ ಜಾಗೃತಿ ಅಭಿಯಾನ ಆರಂಭಿಸಿದ್ದು, ಗ್ರಾಮಸಭೆ ಮೂಲಕ ತಿದ್ದುಪಡಿ ಮಸೂದೆಗಳ ಕುರಿತು ರೈತರಿಗೆ ಅರಿವು ಮೂಡಿಸಲಾಗುವುದು ಎಂದು ಈರಣ್ಣ ಕಡಾಡಿ ತಿಳಿಸಿದ್ದಾರೆ.
ಇದನ್ನೂ ಓದಿ: ಹತ್ರಾಸ್ ಪ್ರಕರಣ:ತನಿಖಾ ವರದಿ ಸಲ್ಲಿಸಲು ಎಸ್ ಐಟಿಗೆ ಮತ್ತೆ 10 ದಿನಗಳ ಕಾಲಾವಕಾಶ: ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.