ಚಾಲುಕ್ಯ ಉತ್ಸವ ಆಚರಣೆಗೆ ಶೀಘ್ರ ಪ್ರಸ್ತಾವನೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಸ್ತುವಾರಿ ಕಾರ್ಯದರ್ಶಿ ಕಳಸದ ಸೂಚನೆ; ಸದ್ಯಕ್ಕಿಲ್ಲ ಬೀಜ-ಗೊಬ್ಬರದ ಕೊರತೆ

Team Udayavani, Nov 29, 2022, 10:59 AM IST

6

ಬಾಗಲಕೋಟೆ: ಜಿಲ್ಲೆಯಲ್ಲಿ ಚಾಲುಕ್ಯ ಉತ್ಸವ ಆಯೋಜಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಪಂ ಸಭಾ ಭವನದಲ್ಲಿ ನಡೆದ ವಿವಿಧ ಇಲಾಖೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯತ್ತ ಪ್ರವಾಸಿಗರು ಹರಿದು ಬರುತ್ತಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಜಿಲ್ಲೆಗೆ ಸೆಳೆಯಲು ಚಾಲುಕ್ಯ ಉತ್ಸವ ಒಂದು ಉತ್ತಮ ವೇದಿಕೆಯಾಗಿದೆ. ಕೋವಿಡ್‌ ಕಾರಣದಿಂದ ಯಾವುದೇ ಉತ್ಸವಗಳಾಗದೇ ಅನುದಾನ ಕೂಡ ಹಾಗೆಯೇ ಉಳಿದಿದೆ. ಹೀಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಚಾಲುಕ್ಯ ಉತ್ಸವ ಆಯೋಜಿಸಬೇಕು ಎಂದು ಸೂಚಿಸಿದರು.

ಕಂದಾಯ ಇಲಾಖೆಯಿಂದ ನೀಡುವ ಭೂಮಿ, ಎಜೆಎಸ್‌ಕೆ ಹಾಗೂ ಸಕಾಲ ಸೇವೆಗಳಲ್ಲಿ ಬಾಗಲಕೋಟೆ ಜಿಲ್ಲೆ ಅಕ್ಟೋಬರ್‌ ಮಾಹೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಸಂತೋಷದ ವಿಷಯ. ಇದಕ್ಕೆ ಶ್ರಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಯಾವುದೇ ಬಿತ್ತನೆ ಬೀಜದ ಕೊರತೆ ಇರುವುದಿಲ್ಲ. ಅಕ್ಟೋಬರ್‌ ಮಾಹೆಯಿಂದ ಇಲ್ಲಿವರೆಗೆ ಒಟ್ಟಾರೆಯಾಗಿ 79,488 ಮೆಟ್ರಿಕ್‌ ಟನ್‌ ರಸಗೊಬ್ಬರಗಳು ಹಂಚಿಕೆಯಾಗಿದ್ದು ಸದ್ಯಕ್ಕೆ ಯಾವುದೇ ರಸಗೊಬ್ಬರದ ಕೊರತೆ ಇರುವುದಿಲ್ಲ ಮತ್ತು ಮುಂದೆ ಕೂಡ ಯಾವುದೇ ರಸಗೊಬ್ಬರದ ಸರಬರಾಜು, ಮಾರಾಟದಲ್ಲಿ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇ-ಕೆವೈಸಿ ಅಪ್ಡೇಶನ್‌ಗಾಗಿ ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಕಾರದೊಂದಿಗೆ ನವೆಂಬರ್‌ ಮಾಹೆಯಲ್ಲಿ ಶೇ.73 ಫಲಾನುಭವಿಗಳ ಇ ಕೆವೈಸಿ ಮಾಡಗಿದ್ದು, ಆದ್ಯತೆ ಮೇರೆಗೆ ಕ್ರಮವಹಿಸಿ ಮುಂದಿನ ಸಭೆ ಸೇರುವುದರೊಳಗಾಗಿ ಶೇ.100ರಷ್ಟು ಇ ಕೆವೈಸಿ ಮಾಡಲಾಗುವುದೆಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಸಭೆಗೆ ಮಾಹಿತಿ ನೀಡಿದರು.

ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ಈಗಾಗಲೇ ಲಸಿಕಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ರೋಗಗ್ರಸ್ತ ಜಾನುವಾರುಗಳಿಗೆ ಜಿಪಂ ಅನುದಾನದಡಿ ಈ ರೋಗಕ್ಕೆ ಅವಶ್ಯವಿರುವ ಔಷಧಿ ಗಳನ್ನು ತುರ್ತಾಗಿ ಖರೀದಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಪಂಗಳ ಮೂಲಕ ಪ್ರತಿಯೊಂದು ಹಳ್ಳಿಯಲ್ಲೂ ಫಾಗಿಂಗ್‌ ಮತ್ತು ಸ್ಯಾನಿಟೈಜೇಶನ್‌ ಕೈಗೊಳ್ಳಲಾಗುತ್ತಿದ್ದು, ರೋಗ ನಿಯಂತ್ರಣದಲ್ಲಿದೆ. ಮೃತಪಟ್ಟ ಜಾನುವಾರುಗಳಿಗೆ ಸರ್ಕಾರ ನಿಗದಿಪಡಿಸಿದ ಪರಿಹಾರಧನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಅರಣ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಹಿಂದುಳದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ಇತರೆ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿ ಕಾರಿ ಪಿ. ಸುನೀಲಕುಮಾರ, ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಟಿ. ಭೂಬಾಲನ್‌, ಕೃಷ್ಣಾ ಮೆಲ್ದಂಡೆ ಯೋಜನಾ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ಪಾಂಡೆ, ಪ್ರೊಬೇಶನರಿ ಐಎಎಸ್‌ ಅಧಿಕಾರಿ ರಮೇಶ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಇದ್ದರು.

ಜಿಲ್ಲೆಯತ್ತ ಪ್ರವಾಸಿಗರು ಹರಿದು ಬರುತ್ತಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಜಿಲ್ಲೆಗೆ ಸೆಳೆಯಲು ಚಾಲುಕ್ಯ ಉತ್ಸವ ಒಂದು ಉತ್ತಮ ವೇದಿಕೆಯಾಗಿದೆ. ಕೋವಿಡ್‌ ಕಾರಣದಿಂದ ಯಾವುದೇ ಉತ್ಸವಗಳಾಗದೇ ಅನುದಾನ ಕೂಡ ಹಾಗೆಯೇ ಉಳಿದಿದೆ. ಹೀಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಚಾಲುಕ್ಯ ಉತ್ಸವ ಆಯೋಜಿಸಬೇಕು.  –ಶಿವಯೋಗಿ ಕಳಸದ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.