ಚಾಮರಾಜನಗರ: ಇಂದು 94 ಮಂದಿಗೆ ಸೋಂಕು ದೃಢ: 73 ಮಂದಿ ಗುಣಮುಖ
Team Udayavani, Oct 15, 2020, 8:16 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 94 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ವೇಳೆ 73 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ತಾಲೂಕಿನ ಆಲೂರು ಗ್ರಾಮದ ನಿವಾಸಿ 68 ವರ್ಷದ ವ್ಯಕ್ತಿ ಅ.4 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಅ. 15 ರಂದು ಮೃತರಾಗಿದ್ದಾರೆ. ಬಲಚವಾಡಿ ಗ್ರಾಮದ ನಿವಾಸಿ 80 ವರ್ಷದ ವೃದ್ಧ ಅ.9 ರಂದು ದಾಖಲಾಗಿದ್ದು, ಚಿಕಿತ್ಸೆ ಫಲಿಸದೇ ಗುರುವಾರ ಮೃತರಾದರು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಈವರೆಗೆ 5245 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 4363 ಮಂದಿ ಗುಣಮುಖರಾಗಿದ್ದಾರೆ. 772 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೆ ಒಟ್ಟು 110 ಮಂದಿ ಕೋವಿಡ್ ಹಾಗೂ ಕೋವಿಡೇತರ ಕಾರಣದಿಂದ ಮೃತಪಟ್ಟಿದ್ದಾರೆ. 44 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 200 ಮಂದಿ ಮನೆಯಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಗುರುವಾರ ಒಟ್ಟು 1209 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.
ಇಂದಿನ ಪ್ರಕರಣಗಳು: 94
ಇಂದು ಗುಣಮುಖ: 73
ಒಟ್ಟು ಗುಣಮುಖ: 4363
ಇಂದಿನ ಸಾವು: 02
ಒಟ್ಟು ಸಾವು: 110
ಸಕ್ರಿಯ ಪ್ರಕರಣಗಳು: 772
ಒಟ್ಟು ಸೋಂಕಿತರು: 5245
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Mahalingpur: ಎರಡು ವರ್ಷದ ಮಹಾಲಿಂಗಪುರದ ನೂತನ ಬಸ್ ನಿಲ್ದಾಣದಲ್ಲಿ ನೂರೆಂಟು ಸಮಸ್ಯೆಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.