ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಚರಂತಿಮಠ ವಿರೋಧ
Team Udayavani, May 19, 2020, 11:18 AM IST
ಬಾಗಲಕೋಟೆ: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷರೂ ಆಗಿರುವ ಬಾಗಲಕೋಟೆ ಶಾಸಕ ಡಾ| ವೀರಣ್ಣ ಚರಂತಿಮಠ ವಿರೋಧ ವ್ಯಕ್ತಪಡಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಸರ್ಕಾರಕ್ಕೆ ನಷ್ಟವಾಗಲಿದೆ. ಈಗಾಗಲೇ ಇರುವ ಎಪಿಎಂಸಿ ವ್ಯವಸ್ಥೆಯಿಂದ ರೈತರಿಗೆ ಯಾವುದೇ ಸಮಸ್ಯೆ ಇಲ್ಲ. ಆದರೂ ಇದರ ತಿದ್ದುಪಡಿ ಅಗತ್ಯದಬಗ್ಗೆ ತಿಳಿದಿಲ್ಲ ಎಂದರು. ರೈತರ ಉತ್ಪನ್ನಗಳನ್ನು ಎಪಿಎಂಸಿ ಮೂಲಕ ಮಾರಿದರೆ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗುತ್ತದೆ. ಎಪಿಎಂಸಿಗೂ ಶೇ. ಒಂದೂವರೆಯಷ್ಟು ಸೆಸ್ ಬರುತ್ತದೆ. ಸರ್ಕಾರಕ್ಕೂ ಜಿಎಸ್‌ಟಿ ಮೂಲಕತೆರಿಗೆ ಬರುತ್ತದೆ. ರೈತರು ಎಲ್ಲೆಂದರಲ್ಲಿ ತಮ್ಮ ಬೆಳೆ ಮಾರಾಟ ಮಾಡಿದರೆ, ಖರೀದಿ ಮಾಡಿದವರು ಹಣ ಕೊಡದೆ ಮೋಸ ಮಾಡುವ ಸಾಧ್ಯತೆ ಹೆಚ್ಚು. ಇಂತಹ ಪ್ರಕರಣಗಳು ಸಾಕಷ್ಟು ನಡೆದಿವೆ. ಎಪಿಎಂಸಿ ಮೂಲಕ ಮಾರಿದರೆ ರೈತರಿಗೆ ಮೋಸವಾಗಲ್ಲ ಎಂದರು.
ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಸಿಎಂ ಆಗಿದ್ದಾಗ ವಿಧಾನಸಭೆಯಲ್ಲಿ ಈ ಕಾನೂನು ತಿದ್ದುಪಡಿ ಮಾಡಲಾಗಿತ್ತು. ಆದರೆ ವಿಧಾನ ಪರಿಷತ್ ನಲ್ಲಿ ಅದನ್ನು ಹಿಂಪಡೆಯಲಾಯಿತು. ಹೀಗಾಗಿ ಮಹಾರಾಷ್ಟ್ರದಲ್ಲಿ ಈ ತಿದ್ದುಪಡಿ ಜಾರಿಯಾಗಿಲ್ಲ. ಆದ್ದರಿಂದ ರಾಜ್ಯದಲ್ಲೂ ಈ ಹಿಂದಿನ ಎಪಿಎಂಸಿ ಪದ್ಧತಿಯನ್ನೇ ಮುಂದುವರಿಸಲು ಸಿಎಂಗೆ ಮನವಿ ಮಾಡುತ್ತೇನೆ ಎಂದರು.
ವಿಧಾನಸಭೆಯಲ್ಲಿ ಚರ್ಚೆ: ಎಪಿಎಂಸಿ ಕಾಯ್ದೆ ತಿದ್ದುಪಡಿ ಕಾನೂನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿದೆ. ಇದಕ್ಕೆ ಕರಡು ಸಿದ್ಧಗೊಳ್ಳಬೇಕು. ಆಗ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತದೆ. ನನ್ನ ಅಭಿಪ್ರಾಯ ಕುರಿತೂ ಚರ್ಚಿಸುತ್ತೇವೆ. ಆದರೆ, ತಿದ್ದುಪಡಿ ಕಾನೂನು ಪರವಾಗಿ ಮತ ಹಾಕಲೇಬೇಕಾದ ಅನಿವಾರ್ಯತೆ ಬಂದರೆ ನಾವೂ ಪರವಾಗಿ ಮತ ಹಾಕುತ್ತೇವೆ. ಆದರೆ, ನಮ್ಮ ಅಭಿಪ್ರಾಯ ಹೇಳಿಕೊಳ್ಳಲು ಅವಕಾಶವಿದೆ. ಅದನ್ನು ಹೇಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.