ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಮೋಸ : ಸರ್ಕಾರದ ಕ್ರಮಕ್ಕೆ ಬೆಂಬಲ: ಮಾಜಿ ಸಚಿವ ನಿರಾಣಿ
Team Udayavani, Jul 22, 2023, 8:05 PM IST
ಬಾಗಲಕೋಟೆ : ರಾಜ್ಯದಲ್ಲಿ ಕಬ್ಬು ಬೆಳೆಗಾರ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ತೂಕದಲ್ಲಿ ಮೋಸವಾಗುತ್ತಿದೆ ಎಂಬ ವಿಷಯ ವಿಧಾನಸಭೆಯಲ್ಲಿ ಚರ್ಚೆಯಾಗಿದೆ. ಸರ್ಕಾರ, ಈ ವಿಷಯದಲ್ಲಿ ರೈತರಿಗೆ ಮೋಸವಾಗದಿರಲು ನಮ್ಮ ಎಂಎನ್‌ಆರ್ ಸಂಸ್ಥೆ 15 ವರ್ಷಗಳಿಂದ ಎಲೆಕ್ಟ್ರಿಕಲ್ ವೇಬ್ರಿಜ್ ಯಂತ್ರ ಅಳವಡಿಸಿದೆ. ಈ ವಿಷಯದಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಇದಕ್ಕೆ ಸಂಪೂರ್ಣ ಸಹಕಾರ ನೀಡುವ ಜತೆಗೆ ಅಗತ್ಯಬಿದ್ದರೆ ಸಲಹೆ ಕೂಡ ನೀಡುವುದಾಗಿ ಮಾಜಿ ಸಚಿವ, ಸಕ್ಕರೆ ಉದ್ಯಮಿ ಮುರುಗೇಶ ನಿರಾಣಿ ಹೇಳಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಕಬ್ಬು ತೂಕದಲ್ಲಿ ಮೋಸ ಆಗುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹಾರಿಸುವ ಮಾತು ಯಾರೂ ಆಡಬಾರದು. ದಾಖಲೆ ಸಮೇತ ಸಾಬೀತುಪಡಿಸಬೇಕು. ತೂಕದಲ್ಲಿ ಮೋಸ ಮಾಡುವ ಯಾವುದೇ ಕಾರ್ಖಾನೆ ಇದ್ದರೂ ಕ್ರಮ ಕೈಗೊಳ್ಳಲು ಸರ್ಕಾರ ಸ್ವತಂತ್ರವಾಗಿದೆ ಎಂದರು.
15 ವರ್ಷಗಳ ಹಿಂದೆಯೇ ಕ್ರಮ :
ರೈತರಿಗೆ ತೂಕದಲ್ಲಿ ಮೋಸವಾಗುತ್ತಿರುವ, ಹೊಸ ತಂತ್ರಜ್ಞಾನದ ಯಂತ್ರ ಅಳವಡಿಸುವ ಕುರಿತು ಕಾಂಗ್ರೆಸ್ ಸರ್ಕಾರ ಈಗ ಮಾತನಾಡುತ್ತಿದೆ. ಆದರೆ, ನಮ್ಮ ಕಾರ್ಖಾನೆಯಲ್ಲಿ 15 ವರ್ಷಗಳಿಂದ ನಿರಂತರವಾಗಿ ಹೊಸ ತಂತ್ರಜ್ಞಾನದ, ಎಲೆಕ್ಟಿçಕಲ್ ವೇಬ್ರಿಜ್ ಅಳವಡಿಸಲಾಗಿದೆ. ಎಲ್ಲಾ ಕಾರ್ಖಾನೆಗಳಲ್ಲೂ ಮೂರು ಪಾಳೆಯಲ್ಲಿ ಸಿಬ್ಬಂದಿ ಬದಲಾಗುತ್ತದೆ. ಇಲ್ಲಿ ತೂಕದ ಮಾಡಿದ ಬಳಿಕ, ಕಾರ್ಖಾನೆ ಮಾಲಿಕರು, ವ್ಯವಸ್ಥಾಪಕರು, ಆ ವಾಹನದ ಚಾಲಕರು ಹಾಗೂ ರೈತರಿಗೆ ನೇರವಾಗಿ ಬಿಲ್‌ಗಳು ಮೊಬೆÊಲ್‌ಗೆ ಹೋಗುತ್ತವೆ. ತೂಕದಲ್ಲಿ ಮೋಸ ಮಾಡಲು ಸಾಧ್ಯವೇ ಇಲ್ಲ. ಇಂತಹ ತಂತ್ರಜ್ಞಾನ ನಮ್ಮಲ್ಲಿ 15 ವರ್ಷಗಳಿಂದ ನಡೆದಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ, ಸಕ್ಕರೆ ಕಾರ್ಖಾನೆಗಳಲ್ಲಿ ಯಂತ್ರ ಅಳವಡಿಸುವ ಅಥವಾ ಯಾವುದೇ ಹೊಸ ಕಾರ್ಯಕ್ಕೆ ಮುಂದಾದರೂ ನಾವು ಬೆಂಬಲಿಸಿ, ಸಹಕಾರ ಕೊಡುತ್ತೇವೆ. ಈ ವಿಷಯದಲ್ಲಿ ಸಲಹೆ ಬೇಕಾದರೂ ಕೊಡಲು ಸಿದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.