ಪೌರತ್ವ ತಿದ್ದುಪಡಿಗೆ ಜಮಾತೆ ಇಸ್ಲಾಮಿ ಹಿಂದ್ ವಿರೋಧ
Team Udayavani, Dec 13, 2019, 6:12 PM IST
ಬಾಗಲಕೋಟೆ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಜಮಾಅತ್ ಎ ಇಸ್ಲಾಮಿ ಹಿಂದ್ ಬಾಗಲಕೋಟೆ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ, ಕೆಲಕಾಲ ಧರಣಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಲೋಕಸಭೆಯಲ್ಲಿ ಅಂಗೀಕಾರಗೊಂಡ, ರಾಜ್ಯಸಭೆಯಲ್ಲಿ ಚರ್ಚೆಯಾಗಲಿರುವ ಪೌರತ್ವ ತಿದ್ದುಪಡಿ ಮಸೂದೆ, ನಮ್ಮ ದೇಶದ ನೈತಿಕ ಸಂವಿಧಾನಿಕ ಸ್ಫೂರ್ತಿ ಜಾತ್ಯತೀತ ಪರಂಪರೆಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಪೌರತ್ವ ಪ್ರದಾನದಲ್ಲಿ ಧಾರ್ಮಿಕ ನೆಲೆಯ ತಾರತಮ್ಯ ನಮ್ಮ ಸಂವಿಧಾನದ ಪರಿಚ್ಛೇದ 14 ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳ ಉಲ್ಲಂಘನೆಯಾಗಿದೆ. ಕೋಮು ಧ್ರುವೀಕರಣ ಮತ್ತು ಮುಸ್ಲಿಂರನ್ನು ಬಲಿಪಶು ಮಾಡುವ ರಾಜಕೀಯವೇ ಈ ತಿದ್ದುಪಡಿಯ ನೈಜ ಉದ್ದೇಶವಾಗಿದೆ. ಹಲವು ದೇಶಗಳ ನಿರಾಶ್ರಿತರ ಕುರಿತು ಮೌನ ವಹಿಸಿರುವುದೂ ಇದರ ನ್ಯೂನ್ಯತೆಯಾಗಿದೆ. ಇದು ದೇಶದ ಗಂಭೀರಆರ್ಥಿಕ ಪರಿಸ್ಥಿತಿ ಮತ್ತು ಸಾಮಾನ್ಯ ಪ್ರಜೆಗಳು ಅನುಭವಿಸುತ್ತಿರುವ ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ತಿರುಗಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ಜಮಾಅತ್ ಎ ಇಸ್ಲಾಮಿ ಹಿಂದ್ ಬಾಗಲಕೋಟೆ ಸಂಘಟನೆಯ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.